Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂಡ್ಲೂರು ನರಸಿಂಹಪ್ಪರ ಸೇವೆ ಚಿರಸ್ಮರಣೀಯ: ನಾರಾ ಭರತ್ ರೆಡ್ಡಿ

ಬಳ್ಳಾರಿ, ಜೂ. 11: ನಗರದ ಅನಂತಪುರ ರಸ್ತೆಯಿಂದ ರಾಘವೇಂದ್ರ ಕಾಲೋನಿಗೆ ಸಂಪರ್ಕಿಸುವ ರಸ್ತೆಗೆ ಹಿರಿಯ ಸಮಾಜಸೇವಕ ಹಾಗೂ ಜನಾನುರಾಗಿ ವ್ಯಕ್ತಿತ್ವದ ಮುಂಡ್ಲೂರು ನರಸಿಂಹಪ್ಪ ಅವರ ಹೆಸರನ್ನು ನಾಮಕರಣ ಮಾಡಲಾಗಿದ್ದು, ರಸ್ತೆ ನಾಮಫಲಕವನ್ನು ನಗರ ಶಾಸಕ ನಾರಾ ಭರತ್ ರೆಡ್ಡಿ ಉದ್ಘಾಟಿಸಿದರು.
ಪಾಲಿಕೆ ಸದಸ್ಯ ಎಂ. ಪ್ರಭಂಜನಕುಮಾರ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಭರತ್ ರೆಡ್ಡಿ, ಸಮಾಜದ ಅಭಿವೃದ್ಧಿ ಹಾಗೂ ಜನಸೇವೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಮುಂಡ್ಲೂರು ನರಸಿಂಹಪ್ಪ ಅವರ ಸೇವೆ ಚಿರಸ್ಮರಣೀಯವಾಗಿದೆ ಎಂದು ಹೇಳಿದರು.
ಸಮಾಜದ ಎಲ್ಲ ವರ್ಗಗಳೊಂದಿಗೆ ಬೆರೆತು ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ನರಸಿಂಹಪ್ಪ ಅವರು ಜನರ ಪ್ರೀತಿ ಮತ್ತು ಗೌರವಕ್ಕೆ ಪಾತ್ರರಾಗಿದ್ದರು. ಅವರ ಹೆಸರನ್ನು ರಸ್ತೆಗೆ ನಾಮಕರಣ ಮಾಡಿರುವುದು ಅವರ ಸಾಮಾಜಿಕ ಸೇವೆಗೆ ಸಲ್ಲಿಸಿದ ಗೌರವವಾಗಿದೆ ಎಂದು ತಿಳಿಸಿದರು.
ನಗರದ ಅಭಿವೃದ್ಧಿ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಮುಂಡ್ಲೂರು ಕುಟುಂಬದ ಕೊಡುಗೆ ಗಮನಾರ್ಹವಾಗಿದೆ. ಇಂತಹ ಮಹನೀಯರ ಜೀವನ ಮತ್ತು ಆದರ್ಶಗಳು ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿವೆ ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಎಪಿಎಂಸಿ ಅಧ್ಯಕ್ಷ ಕಟ್ಟೆಮನೆ ನಾಗೇಂದ್ರ, ಡಿಸಿಸಿ ಅಧ್ಯಕ್ಷ ಅಲ್ಲಂ ಪ್ರಶಾಂತ್, ಪಾಲಿಕೆ ಸದಸ್ಯರಾದ  ಇಬ್ರಹಿಂ ಬಾಬು, ನೂರ್ ಮೊಹಮ್ಮದ್, ನಾಜು, ಎನ್‌ಎಂಡಿ ಆಸೀಫ್ ಭಾಷಾ ಜಬ್ಬಾರ್, ರಾಮಾಂಜನೇಯ, ಕುಬೇರ, ಶ್ರೀನಿವಾಸ್ ಹಾಗೂ ಕಾಂಗ್ರೆಸ್ ಮುಖಂಡರಾದ ಅಯಾಜ್ ಅಹ್ಮದ್, ಜಗನ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಮುಂಡ್ಲೂರು ಕುಟುಂಬದ ಎಂ. ನಾರಾಯಣರಾವ್, ಎಂ. ಶ್ರೀಧರ್, ಎಂ. ನರೇಶ್, ನಳಿನಿ, ಎಂ. ರಾಘವೇಂದ್ರ, ಎಂ. ಅಂಜನಕುಮಾರ್, ಎಂ. ಕೃಷ್ಣಕುಮಾರ್, ಎಂ. ಪವನ್, ಎಂ. ವಿವೇಕ್, ಫಣೀಂದ್ರ, ರಾಮು, ದುರ್ಗಾಬಾಬು ಹಾಗೂ ಎಂ. ಜಯಸಿಂಹ ಸೇರಿದಂತೆ ಕುಟುಂಬ ಸದಸ್ಯರು, ಬಂಧುಗಳು ಮತ್ತು ಸ್ಥಳೀಯ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮುಂಡ್ಲೂರು ನರಸಿಂಹಪ್ಪ ಅವರ ಸಾಮಾಜಿಕ ಸೇವೆಗಳನ್ನು ಸ್ಮರಿಸಿ ಗೌರವ ನಮನ ಸಲ್ಲಿಸಲಾಯಿತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ