Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಸ್ತುಸಂಗ್ರಹಾಲಯಗಳು ಜೀವಂತ ಇತಿಹಾಸದ ಪ್ರತೀಕಗಳಾಗಿವೆ :ಶಾಸಕ ಬಾಬಾಸಾಹೇಬ್ ಪಾಟೀಲ



 

ಚನ್ನಮ್ಮನ ಕಿತ್ತೂರು: ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಕಿತ್ತೂರು ರಾಣಿ ಚೆನ್ನಮ್ಮ ಸ್ಮಾರಕ ಸರ್ಕಾರಿ ವಸ್ತುಸಂಗ್ರಹಾಲಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಚನ್ನಮ್ಮನ ಕಿತ್ತೂರು ಇವರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆ ಮಾಡಿ ಶಾಸಕ ಬಾಬಾಸಾಹೇಬ್ ಪಾಟೀಲ ಅವರು, "ಪರಂಪರೆ ಮತ್ತು ಇತಿಹಾಸದ ಕುರಿತು ವಿದ್ಯಾರ್ಥಿಗಳು ಹಾಗೂ ಮುಂದಿನ ಪೀಳಿಗೆಗೆ ಜ್ಞಾನ ಮೂಡಿಸುವುದು ಎಲ್ಲರ ಹೊಣೆಗಾರಿಕೆ. ಇತಿಹಾಸವು ನಮಗೆ ಗುರುತು ಮತ್ತು ಗುರಿಯನ್ನು ನೀಡುತ್ತದೆ," ಎಂದು ಹೇಳಿದರು. ಜೊತೆಗೆ ಪರಿಸರ ಪ್ರಜ್ಞೆಯ ಅಗತ್ಯತೆ ಕುರಿತು ಮಾತನಾಡಿ, "ಕಿತ್ತೂರು ರಾಣಿ ಚೆನ್ನಮ್ಮನ ಹೆಸರಿನಲ್ಲಿ ಅರಣ್ಯ ಇಲಾಖೆಯ ಮರುನಾಮಕರಣಕ್ಕೆ ಕ್ರಮ ಜರುಗಿಸಲು ಸಚಿವರಿಗೆ ಮನವಿ ಸಲ್ಲಿಸಲಾಗಿದೆ," ಎಂದರು. ಹಾಗು ಕೆ.ಆರ್.ಸಿ.ಎಂ ವಸ್ತುಸಂಗ್ರಹಾಲಯವನ್ನು ಮುಂದಿನ ದಿನಗಳಲ್ಲಿ ನವೀಕರಿಸುವ ಯೋಚನೆ ಇದೆ ಎಂಬುದಾಗಿ ತಿಳಿಸಿದರು.

ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೇಂದ್ರ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ, "ಇಂತಹ ಕಾರ್ಯಕ್ರಮಗಳು ಪರಂಪರೆ ಅರಿವಿಗೆ ದಾರಿ ಮಾಡಿಕೊಡುತ್ತವೆ," ಎಂದು ಹೇಳಿದರು. ಕನ್ನಡ ವಿಷಯದಲ್ಲಿ ಶೇ.100 ಅಂಕಗಳೊಂದಿಗೆ ಪ್ರೌಢಶಾಲಾ ವಿದ್ಯಾರ್ಥಿಗಳ ಸಾಧನೆಯನ್ನು ವಿಶಿಷ್ಟವಾಗಿ ಅಭಿನಂದಿಸಿ, "ನಿಮ್ಮ ಸಾಧನೆ ಕನ್ನಡದ ಭಾಷೆಯ ಬೆಳವಣಿಗೆಗೆ ಮಾರ್ಗದರ್ಶಿಯಾಗಲಿ," ಎಂದು ಆಶೀರ್ವಚನ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ವೈ.ತುಬಾಕದ ಅವರು ಮಾತನಾಡಿ, "ವಿದ್ಯಾರ್ಥಿಗಳಲ್ಲಿಯ ಐತಿಹಾಸಿಕ ಅರಿವನ್ನು ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸುತ್ತವೆ," ಎಂದರು. ಈ ವರ್ಷ ಶಿಕ್ಷಣ ಇಲಾಖೆಯಿಂದ ಈ ಹಾದಿಯಲ್ಲಿ ಹೆಚ್ಚುವರಿ ಸಹಕಾರ ನೀಡಲಾಗುವುದು ಎಂದು ಹೇಳಿದರು.

ರಾಮಕೃಷ್ಣ ಇಳಕಲ್ ಅವರು "ವೇಗವಾಗಿ ಬದಲಾಗುತ್ತಿರುವ ಸಮುದಾಯಗಳಲ್ಲಿ ವಸ್ತುಸಂಗ್ರಹಾಲಯಗಳ ಭವಿಷ್ಯ" ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ವಸ್ತುಸಂಗ್ರಹಾಲಯಗಳು ಹೇಗೆ ಸಮುದಾಯದ ಜ್ಞಾನದ ಕೇಂದ್ರಗಳಾಗಬಹುದು ಮತ್ತು ಇತಿಹಾಸದ ಪುಟಗಳನ್ನು ಬದುಕಿಸುವಲ್ಲಿ ಅವು ಹೇಗೆ ನೆರವಾಗುತ್ತವೆ ಎಂಬುದರ ಬಗ್ಗೆ ವಿವರಣೆ ನೀಡಿದರು.

ಡಾ. ಎಸ್.ಬಿ.ದಳವಾಯಿ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷರು, ಸಮಾರೋಪ ನುಡಿಗಳಲ್ಲಿ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು ಮತ್ತು, "ಭಾವಿ ದಿನಗಳಲ್ಲಿ ಇನ್ನೂ ಹೆಚ್ಚಿನ ವಿದ್ಯಾರ್ಥಿಗಳು ಕನ್ನಡ ಭಾಷೆಯಲ್ಲಿ ಪ್ರಭುತ್ವ ಸಾಧಿಸಲಿ," ಎಂದು ಶುಭಕೋರಿದರು.

ಪುರಾತತ್ವ ಮತ್ತು ಪರಂಪರೆ ಇಲಾಖೆಯ ಕ್ಯೂರೇಟರ್  ರಾಘವೇಂದ್ರ ಅವರು ಎಲ್ಲರನ್ನ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಶಿಕ್ಷಕ ಮಂಜುನಾಥ ಕಳಸಣ್ಣವರ ನಿರೂಪಿಸಿದರು. ಶರಣಬಸವ ವಾಲಿ ಅವರು ವಂದಿಸಿದರು. ನವಾಯ ಹೊಂಗಲ ಪ್ರಾರ್ಥಿಸಿದರು.

ಈ ವೇಳೆ ಮಹೇಶ ಚನ್ನಂಗಿ, ಅಶ್ಫಾಕ ಹವಾಲ್ದಾರ, ರಾಜಶೇಖರ ರಗಟಿ,ಸುನೀಲ ಘಿವಾರಿ, ಗಜಾನಂದ ಸೊಗಲನ್ನವರ, ಕುಬೇರ ಜಾಯಕ್ಕಣ್ಣವರ, ಮಹೇಶ್ವರ ಹೊಂಗಲ, ನಾಗರಾಜ ಹುಲೆಪ್ಪಣ್ಣವರಮಠ ಸೇರಿದಂತೆ ಇತರರು ಇದ್ದರು.

 

 

 

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ