Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚರಿತ್ರೆ ಅರಿಯಲು ವಸ್ತುಸಂಗ್ರಹಾಲಯಗಳು ಸಹಕಾರಿ: ಟಿ.ಜಿ.ವಿಠ್ಠಲ


ಬಳ್ಳಾರಿ,ಮೇ 20
ಚರಿತ್ರೆಯನ್ನು ಸುಲಭವಾಗಿ ಅರ್ಥೈಸಿಕೊಳ್ಳಲು ಮತ್ತು ಅರಿಯಲು ವಸ್ತುಸಂಗ್ರಹಾಲಯಗಳು ಅತ್ಯಂತ ಸಹಕಾರಿಯಾಗಿವೆ ಎಂದು ಗಾಂಧಿ ಭವನ ಹಾಗೂ ಮಲ್ಲಸಜ್ಜನ ವ್ಯಾಯಾಮ ಶಾಲೆಯ ಕಾರ್ಯದರ್ಶಿ ಟಿ.ಜಿ. ವಿಠ್ಠಲ ಅವರು ಅಭಿಪ್ರಾಯಪಟ್ಟರು.
ನಗರದ ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತುಸಂಗ್ರಹಾಲಯದಲ್ಲಿ ಸೋಮವಾರ ಆಯೋಜಿಸಲಾಗಿದ್ದ ‘ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇತಿಹಾಸದ ಆಸಕ್ತರು ಪಠ್ಯಪುಸ್ತಕಗಳನ್ನು ಓದುವುದು ಮತ್ತು ಪಳೆಯುಳಿಕೆಗಳ ಚಿತ್ರಗಳನ್ನು ನೋಡುವುದು ಅನಿವಾರ್ಯವಿರಬಹುದು. ಆದರೆ ವಸ್ತುಸಂಗ್ರಹಾಲಯಕ್ಕೆ ನೇರವಾಗಿ ಭೇಟಿ ನೀಡಿದಾಗ, ಇತಿಹಾಸದ ಕುರುಹುಗಳನ್ನು ಸಾಕ್ಷಾತ್ ಕಣ್ಣಾರೆ ನೋಡಿ ಮಾಹಿತಿ ಪಡೆದುಕೊಳ್ಳುವ ಅನುಭವವೇ ಬೇರೆಯಾಗಿರುತ್ತದೆ ಎಂದು ತಿಳಿಸಿದರು.
ಕೃಷಿ ಇಲಾಖೆಯ ನಿವೃತ್ತ ಅಧಿಕಾರಿ ಮಹಾಬಳೇಶ್ವರಪ್ಪ ಅವರು ಮಾತನಾಡಿ, ವಸ್ತುಸಂಗ್ರಹಾಲಯಗಳ ಮೂಲಕ ಸಾವಿರಾರು ವರ್ಷಗಳ ಹಿಂದಿನ ಮಾನವನ ಜನಜೀವನ ಮತ್ತು ಆಹಾರ ಪದ್ಧತಿಯ ಬಗ್ಗೆ ವಿವರವಾದ ಮಾಹಿತಿ ಪಡೆಯಬಹುದು. ನಮ್ಮ ಭಾಗದ ಊರುಗಳ ಹೆಸರುಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ, ಅವು ಅಂದು ಬೆಳೆದ ದವಸ-ಧಾನ್ಯಗಳು ಹಾಗೂ ಸಗಣಿ ಸುಟ್ಟ ಬೂದಿಯ ದಿಬ್ಬಗಳ ಹಿನ್ನೆಲೆಯನ್ನು ಅವಲಂಬಿಸಿ ಇಟ್ಟಿರುವುದು ತಿಳಿಯುತ್ತದೆ ಎಂದು ವಿವರಿಸಿದರು.
ರುಕ್ಮಿಣಿಯಮ್ಮ ಚೆಂಗರೆಡ್ಡಿ ಸ್ಮಾರಕ ಸರ್ಕಾರಿ ವಾಣಿಜ್ಯ ಹಾಗೂ ಮ್ಯಾನೇಜ್ಮೆಂಟ್ ಕಾಲೇಜಿನ ಉಪನ್ಯಾಸಕ ಒಬ್ಬಯ್ಯ ಅವರು ಮಾತನಾಡಿ, ಯುವಕರು ಮತ್ತು ವಿದ್ಯಾರ್ಥಿಗಳು ತಮ್ಮ ಬಿಡುವಿನ ವೇಳೆಯಲ್ಲಿ ತಮ್ಮ ಊರುಗಳ ಸುತ್ತಮುತ್ತ ಚಾರಣ ಕೈಗೊಂಡರೆ ಇತಿಹಾಸದ ಹೊಸ ಕುರುಹುಗಳನ್ನು ಪತ್ತೆಹಚ್ಚಲು ಸಾಧ್ಯವಾಗುತ್ತದೆ ಎಂದರು.
ವಸ್ತುಸಂಗ್ರಹಾಲಯದ ತಾಂತ್ರಿಕ ಸಹಾಯಕಿ ಗೌರಿ ಅವರು ಮಾತನಾಡಿ, ಬಳ್ಳಾರಿಯಲ್ಲಿರುವ ಈ ವಸ್ತುಸಂಗ್ರಹಾಲಯವು ಇಡೀ ಭಾರತದಲ್ಲೇ ಪ್ರಾಗೈತಿಹಾಸಿಕ ಕಾಲಕ್ಕೆ ಮೀಸಲಿಟ್ಟ ಏಕೈಕ ವಿಶಿಷ್ಟ ವಸ್ತುಸಂಗ್ರಹಾಲಯವಾಗಿದೆ. ಇದು ಇತಿಹಾಸದ ಕುರಿತು ಹೆಚ್ಚಿನ ಸಂಶೋಧನೆ ಹಾಗೂ ಅಧ್ಯಯನ ಮಾಡಲು ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಕಲ್ಪಿಸಿಕೊಟ್ಟಿದೆ ಎಂದು ತಿಳಿಸಿದರು.
ಇದೇ ವೇಳೆ ಕಲ್ಬುರ್ಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿನಿಯರಾದ ರೋಹಿಣಿ ಮತ್ತು ಅಶ್ವಿನಿ ಅವರು ಉನ್ನತ ಸಂಶೋಧನೆಗಳಲ್ಲಿ ವಸ್ತುಸಂಗ್ರಹಾಲಯಗಳ ಪಾತ್ರದ ಕುರಿತು ಬೆಳಕು ಚೆಲ್ಲಿದರು.
ಕಾರ್ಯಕ್ರಮದಲ್ಲಿ ವಸ್ತುಸಂಗ್ರಹಾಲಯ ಸಮಿತಿ ಸದಸ್ಯ ಎಂ.ಅಹಿರಾಜ ಅವರು ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಈ ವೇಳೆ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ರುಕ್ಮಿಣಿಯಮ್ಮ ಚೆಂಗರೆಡ್ಡಿ ಸ್ಮಾರಕ ಕಾಲೇಜಿನ ಉಪನ್ಯಾಸಕರು ಮತ್ತು ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ