Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನರಿಗೆ ಉದ್ಯೋಗ ಕಲ್ಪಿಸುವುದು ನನ್ನ ಗುರಿ: ಕಾಂಗ್ರೆಸ್ ಅಭ್ಯರ್ಥಿ  ಪ್ರೀಯಂಕಾ ಜಾರಕಿಹೊಳಿ

ರಾಯಬಾಗ:25:  ಮುಂದಿನ ದಿನಗಳಲ್ಲಿ ರಾಯಬಾಗ ಕ್ಷೇತ್ರ ಸಂಪೂರ್ಣ ಅಭಿವೃದ್ಧಿ ಮಾಡಿ  ನಿರುದ್ಯೋಗ ಜನರಿಗೆ ಉದ್ಯೋಗ ಕಲ್ಪಿಸುವುದು ನನ್ನ ಗುರಿ ಎಂದು ಕಾಂಗ್ರೆಸ್ ಅಭ್ಯರ್ಥಿ  ಪ್ರೀಯಂಕಾ ಜಾರಕಿಹೊಳಿ ಭರವಸೆ‌ ನೀಡಿದ್ದಾರೆ.


 ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ ಪಕ್ಷದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಯಬಾಗ ಕ್ಷೇತ್ರ ಸಂಪೂರ್ಣ ನೀರಾವರಿ ಮಾಡಲಾಗುವುದು. ಮೆಡಿಕಲ್‌ ಕಾಲೇಜು, ಎಂಜನೀಯರಿಂಗ್ ಕಾಲೇಜು ಹಾಗೂ ಉದ್ಯೋಗ ಸೃಷ್ಠಿ ಮಾಡುವುದು ಮತ್ತು ಸ್ಥಳೀಯರ ಸಹಕಾರದಿಂದ ಕ್ಷೇತ್ರ ಸಂಪೂರ್ಣ ಅಭಿವೃದ್ಧಿ ಮಾಡುತ್ತೇನೆ. ಇನ್ನೂ ಮಹಿಳೆಯರಿಗೆ ಸಣ್ಣ ಸಣ್ಣ ಉದ್ಯಮಗಳ ಸೃಷ್ಠಿಸುವ ಮೂಲಕ  ಉದ್ಯೋಗ ಕಲ್ಪಿಸಿ ಆರ್ಥಿಕವಾಗಿ ಸಬಲರನ್ನು ಮಾಡಲಾಗುವುದು ಎಂದು ಭರವಸೆ ನೀಡಿದರು.


ನಂತರ ಮಾಜಿ ಜಿ ಪ ಸದಸ್ಯ ರೋಹಿನಿ ಪಾಟೀಲ ಮಾತನಾಡಿ, ವಿಧಾನಸಭಾ ಚುನಾವಣೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಿದ ಏಕೈಕ ಪಕ್ಷ ಕಾಂಗ್ರೆಸ್ ಪಕ್ಷ. ಇಂತಹ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರನ್ನು  ಕ್ಷೇತ್ರ ಅಭಿವೃದ್ಧಿ ಮಾಡಲು ಗೆಲ್ಲಿಸಿ. ಸಚಿವ ಸತೀಶ ಜಾರಕಿಹೊಳಿ ಅವರ ಗರಡಿಯಲ್ಲಿ ಬೆಳೆದಿದ್ದು ಅವರನ್ನು ಗೆಲ್ಲಿಸಿ ಹೆಚ್ಚಿನ‌ ಅಭಿವೃದ್ಧಿ ಮಾಡಲು ಸಹಕರಿಸಿ‌ ಎಂದು ಕರೆ ನೀಡಿದರು.


ಕೇಂದ್ರ‌ ಸರ್ಕಾರ ರೈತರ‌ ಬಗ್ಗೆ ಕಾಳಜಿ ಇಲ್ಲ. ಪ್ರತಿಭಟನೆಗೆ ರೈತರು ಕುಳಿತುಕೊಂಡಾಗ ಸರ್ಕಾರ ಸ್ಪಂದಿಸಿಲ್ಲ. ಸಚಿವರಂತೂ ರೈತರ ಕಷ್ಟಗಳನ್ನು ಆಲಿಸಿಲ್ಲ. ಇಂತಹ ಪರಿಸ್ಥಿತಿ ಕೇಂದ್ರ ಸರ್ಕಾರದ್ದು. ಹಲವು ವೈಫಲ್ಯಗಳಿಂದ ಕೂಡಿದ‌್ದು ಜನರ ಕಷ್ಟಗಳಿಗೆ ಸ್ಪಂದಿಸುವುದು ದೂರದ ಮಾತು ಎಂದು ದೂರಿದರು.

ಕಾರ್ಯಕ್ರಮದಲ್ಲಿ ಮಾಳು ನಿಪನಾಳ ಹಾಗೂ ಲಪಂಗ ರಾಜಾ  ಬಾಗವಹಿಸಿ ಎಲ್ಲರ ಗಮನ ಸೆಳೆದರು.


ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೊಹಿತೆ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಶಿವು ಪಾಟೀಲ್. ಅ ಪ್ಪಾಸಾಬ ಕುಲಗುಡೆ, ರೋಹಿಣಿ ಪಾಟೀಲ, ಸಿದ್ದು ಬಂಡಗರ, ಅರ್ಜುನ ನಾಯಕವಾಡಿ, ಯಾಸ್ಮಿನ ಮೊಮಿನ, ಹಾಜಿ ಮುಲ್ಲಾ, ದಿಲೀಪ ಜಮಾದಾರ,  ರಾಜು  ಶಿರಗಾವಿ. ಫಾರೂಕ್ ಮೊಮಿನ,  ಸಂತೊಷ ಶೆಲಾರ,ಕಿರಣ ಕಾಂಬಳೆ, ಜ್ಯೋತಿ ಕೇಪಟಿ, ಮಕ್ತುಮ ಮೊಮೀನ, ಮಹೇಶ ಕೊರವಿ, ಯುನೂಸ ಅತ್ತಾರ, ಕಲ್ಪನಾ ಜೋಶಿ, ತಮ್ಮಣ್ಣ ನಿಂಗನೂರೆ,   ಅಝರುದ್ದಿನ ಮುಲ್ಲಾ, ರಾಜು ಜಮಖಂಡಿಕರ ಸೇರಿ ನೂರಾರು ಕಾರ್ಯಕರ್ತರು ಇದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ