LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಆಂಧ್ರದಲ್ಲಿ ವೈದ್ಯರ ಕುಟುಂಬದ ಐವರ ನಿಗೂಢ ಸಾವು!

ವಿಜಯವಾಡ30: ಆಂಧ್ರಪ್ರದೇಶದ ವಿಜಯವಾಡದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಇದು ಅನುಮಾನ ಸೃಷ್ಟಿಸಿದೆ. ಈ ಅನುಮಾನಾಸ್ಪದ ಸಾವಿನ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ. ಡಾ. ಶ್ರೀನಿವಾಸ್ ಶವವಾಗಿ ಪತ್ತೆಯಾಗಿದ್ದು  ಮನೆಯಲ್ಲಿ ಅವರ ಪತ್ನಿ, ಮಕ್ಕಳು, ತಾಯಿಯ ಹೆಣವೂ ಪತ್ತೆಯಾಗಿದೆ.

ಡಾ. ಶ್ರೀನಿವಾಸ್ ಎಂಬ ವೈದ್ಯ ತನ್ನ ಮನೆಯ ಹೊರಗೆ, ಅಂಗಳದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮನೆಯೊಳಗೆ ಅವರ ಪತ್ನಿ, ಇಬ್ಬರು ಮಕ್ಕಳು ಮತ್ತು ತಾಯಿಯ ಶವಗಳು ರಕ್ತದ ಮಡುವಿನಲ್ಲಿ ಪತ್ತೆಯಾಗಿವೆ. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.

ಪೊಲೀಸರ ಪ್ರಕಾರ, ಗುರುನಾನಕ್ ನಗರದಲ್ಲಿ ಈ ಘಟನೆ ನಡೆದಿದ್ದು, ಡಾ. ಶ್ರೀನಿವಾಸ್ ತಮ್ಮ ಮನೆಯ ಹೊರಗಿನ ಅಂಗಳದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಆದರೆ, ಡಾ.ಶ್ರೀನಿವಾಸ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಕುಟುಂಬದ ಇತರ ನಾಲ್ವರನ್ನು ಕೊಲೆ ಮಾಡಲಾಗಿದೆಯೇ ಅಥವಾ ಬೇರೆ ಏನಾದರೂ ವಿಷಯವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶ್ವಾನದಳ ಹಾಗೂ ಸುಳಿವು ತಂಡ ಮನೆಯಿಂದ ಸಾಕ್ಷ್ಯ ಸಂಗ್ರಹಿಸಿದೆ.

ಪೊಲೀಸರು ರಕ್ತದಿಂದ ಕೂಡಿದ್ದ ಚೂರಿಯನ್ನು ವಶಪಡಿಸಿಕೊಂಡಿದ್ದಾರೆ. ಡಾ. ಶ್ರೀನಿವಾಸ್ ಅವರು ಬರೆದಿ ಸೂಸೈಡ್ ನೋಟ್ ಅನ್ನು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ ನನ್ನ ಸಹೋದರನಿಗೆ ಕಾರಿನ ಕೀಗಳನ್ನು ನೀಡಿ” ಎಂದು ಬರೆಯಲಾಗಿದೆ. ಅವರ ಕಾರಿನಲ್ಲಿದ್ದ ಬ್ಯಾಗನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್