Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಗರದಲ್ಲಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿ




ಬಳ್ಳಾರಿ, ಜೂ.13: ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿಯವರು ಶುಕ್ರವಾರ ನಗರದ ಹಾವಂಭಾವಿ ಪ್ರದೇಶದ ಹಲವು ಕಡೆಗಳಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ವಾರ್ಡ್ ಸಂಖ್ಯೆ 36ರ ಹಾವಂಭಾವಿಯ ಗೋವಿಂದಯ್ಯರ ಮನೆಯಿಂದ ರಾಮನಗರ 3ನೇ ಅಡ್ಡ ರಸ್ತೆಯವರೆಗೆ ಅಂದಾಜು 71.75 ಲಕ್ಷ ರೂ.ಗಳ ಅನುದಾನದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.


ಅದೇ ರೀತಿ ಹಾವಂಭಾವಿಯ ತಿಪ್ಪಯ್ಯನವರ ಮನೆಯಿಂದ ವೆಂಕಟರಾವ್ ಅವರ ಮನೆಯವರೆಗೆ, ಹನುಮಯ್ಯ ಅವರ ಮನೆಯಿಂದ ಮುಖ್ಯ ರಸ್ತೆವರೆಗೆ, ರಮೇಶ್ ಅವರ ಮನೆಯಿಂದ ಓಬಣ್ಣ ಮನೆವರೆಗೆ, ಮಾರೆಣ್ಣ ಮನೆಯಿಂದ ಆಂಟಿ ಹೊಟೇಲ್'ವರೆಗೆ ಅಂದಾಜು 1 ಕೋಟಿ 72 ಲಕ್ಷ ರೂ.ಗಳ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.


ಅದೇ ರೀತಿ ಕೆಕೆಆರ್'ಡಿಬಿ ಅನುದಾನದ ಅಡಿ ಅಂದಾಜು 3ಕೋಟಿ 29 ಲಕ್ಷ ರೂ.ಗಳ ವೆಚ್ಚದಲ್ಲಿ 2ನೇ ಅಡ್ಡ ರಸ್ತೆ ಮತ್ತು 3ನೇ ಅಡ್ಡ ರಸ್ತೆ ಸಂಪರ್ಕಿಸುವ ರಸ್ತೆ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.


ಈ ಸಂದರ್ಭ ಮಹಾನಗರ ಪಾಲಿಕೆಯ ಸದಸ್ಯರಾದ ಮಿಂಚು ಸೀನಾ, ವಾರ್ಡಿನ ಮುಖಂಡರಾದ ಲೋಕೇಶ್, ಭತ್ರಿ ವಾಸು, ಮಂಗಲ ರಾಮಾಂಜನೇಯ, ಯಶೋಧಾ ಮತ್ತು ಹಗರಿ ಗೋವಿಂದ, ಹೊನ್ನಪ್ಪ, ಬಿಆರೆಲ್ ಸೀನಾ, ಭಾಸ್ಕರ್ ರಾವ್, ಉಮಾಮಹೇಶ್ವರ್ ರಾವ್, ಚಂದ್ರಶೇಖರ, ಚಿರಂಜೀವಿ, ರಾವಿ ರಮೇಶ್, ಸುಬ್ಬಾರಾವ್, ಜಾನಕಿರಾವ್, ಗಂಗಾಧರ್, ಪಿಚ್ಚೇಶ್ವರರಾವ್, ವಿಜಯಲಕ್ಷ್ಮೀ ಸೇರಿದಂತೆ ಹಲವು ಜನ ಹಾಜರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ