Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಕಾಮಗಾರಿಗಳಿಗೆ ವಿಜೃಂಭಣೆಯಿಂದ ಚಾಲನೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿ



ಬಳ್ಳಾರಿ, ಜೂ.27: ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಶುಕ್ರವಾರ ಕ್ಷೇತ್ರದ ವಿವಿಧ ವಾರ್ಡುಗಳಲ್ಲಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದರು.


ವಾರ್ಡ್ ಸಂಖ್ಯೆ 23ರ ಮಹಾನಂದಿ ಕೊಟ್ಟಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ನಗರ ಪ್ರದೇಶದಲ್ಲಿ ಅಂದಾಜು 60 ಲಕ್ಷ ರೂ.ಗಳ ವೆಚ್ಚದಲ್ಲಿ 3 ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.


ಈ ಸಂದರ್ಭ ಮೇಯರ್ ಮುಲ್ಲಂಗಿ ನಂದೀಶ್, ಉಪ ಮೇಯರ್ ಡಿ.ಕುಸುಂ, ವಾರ್ಡಿನ ಪಾಲಿಕೆ ಸದಸ್ಯ ಪಿ.ಗಾದೆಪ್ಪ, ಮಾಜಿ ಮೇಯರ್-ಸದಸ್ಯೆ ಎಂ.ರಾಜೇಶ್ವರಿ, ಕಾಂಗ್ರೆಸ್ ಮುಖಂಡರಾದ ಹೊನ್ನಪ್ಪ, ಹಗರಿ ಗೋವಿಂದ, ವಿಷ್ಣು ಬೋಯಾಪಾಟಿ, ಸುಬ್ಬರಾಯುಡು, ನಾಮನಿರ್ದೇಶಿತ ಸದಸ್ಯ ಸಮೀರ್, ಸಾಹಿತಿ ಎನ್.ಡಿ.ವೆಂಕಮ್ಮ, ಸೋಮಶೇಖರ್, ನಾರಾಯಣ ರೆಡ್ಡಿ, ಮಹೇಂದ್ರ ಮತ್ತಿತರರು ಹಾಜರಿದ್ದರು.


ತದನಂತರ ವಾರ್ಡ್ ಸಂಖ್ಯೆ 35ರ ಇಂದಿರಾ ನಗರದ ಸರ್ಕಾರಿ ಶಾಲೆಯ ಹತ್ತಿರ ಅಂದಾಜು 20 ಲಕ್ಷ ರೂ.ಗಳ ವೆಚ್ಚದ ಚರಂಡಿ ಕಾಮಗಾರಿಗೆ ಶಾಸಕ ನಾರಾ ಭರತ್ ರೆಡ್ಡಿ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ವಾರ್ಡಿನ ಪಾಲಿಕೆಯ ಸದಸ್ಯ ಮಿಂಚು ಸೀನಾ, ಮಾಜಿ ಮೇಯರ್-ಸದಸ್ಯೆ ಎಂ.ರಾಜೇಶ್ವರಿ, ಕಾಂಗ್ರೆಸ್ ಮುಖಂಡರಾದ ಗುಡ್ಲೂರು ರವಿ, ಸಿದ್ಧೇಶ್, ಸುಬ್ಬರಾಯುಡು, ಸ್ಥಳೀಯ ಮುಖಂಡರಾದ ಎರುಕುಲಸ್ವಾಮಿ, ಮಾರೆಣ್ಣ ಮೊದಲಾದವರು ಹಾಜರಿದ್ದರು.


ತದನಂತರ ವಾರ್ಡ್ ಸಂಖ್ಯೆ 16ರ ಬಾಪೂಜಿ ನಗರದ ವೃತ್ತದ ಬಳಿ ಇಂದಿರಾ ಕ್ಯಾಂಟೀನ್ ಅನ್ನು ಶಾಸಕ  ನಾರಾ ಭರತ್ ರೆಡ್ಡಿಯವರು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಮೇಯರ್ ಮುಲ್ಲಂಗಿ ನಂದೀಶ್ ಸಾಥ್ ನೀಡಿದರು. ಪಾಲಿಕೆಯ ಸದಸ್ಯೆ ಉಮಾದೇವಿ, ಕಾಂಗ್ರೆಸ್ ಮುಖಂಡರಾದ ಶಿವರಾಜ್, ಬುಜ್ಜಿ ಮೊದಲಾದವರು ಹಾಜರಿದ್ದರು.


ಶಾಸಕ ನಾರಾ ಭರತ್ ರೆಡ್ಡಿ ಕ್ಯಾಂಟೀನಿನ ಆಹಾರ ಸೇವಿಸಿ ರುಚಿ ಹಾಗೂ ಗುಣಮಟ್ಟ ಪರೀಕ್ಷಿಸಿದರು. ಕಾರ್ಯಕರ್ತರಿಗೆ ಕೈ ತುತ್ತು ನೀಡಿ ಉಣ್ಣಿಸಿದರಲ್ಲದೇ, ಕಿಚನ್ ಕೌಂಟರಿನಲ್ಲಿ ನಿಂತು ಆಹಾರ ವಿತರಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ