Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ.ಗಳ ಚೆಕ್ ವಿತರಿಸಿದ ಶಾಸಕ ನಾರಾ ಭರತ್ ರೆಡ್ಡಿ 




ಬಳ್ಳಾರಿ, ಆ.06: ಇತ್ತೀಚೆಗೆ ಬಳ್ಳಾರಿಯ ಬಾಪೂಜಿ ನಗರದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದ ಬಾಲಕ ವಿಕ್ಕಿ (03) ಕುಟುಂಬಸ್ಥರಿಗೆ ನಗರ ಶಾಸಕ ನಾರಾ ಭರತ್ ರೆಡ್ಡಿ ಮಹಾನಗರ ಪಾಲಿಕೆಯ ವತಿಯಿಂದ 5 ಲಕ್ಷ ರೂ.ಗಳ ಚೆಕ್ ವಿತರಿಸಿದರು.


ಮಂಗಳವಾರ ಸಂಜೆ ಮೃತ ಬಾಲಕನ ಮನೆಗೆ ತೆರಳಿ ಚೆಕ್ ವಿತರಿಸಿದರು. ಇದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು. ಮಹಾನಗರ ಪಾಲಿಕೆಯ ಕಸ ಸಂಗ್ರಹ ವಾಹನದ ಚಾಲಕನ ನಿರ್ಲಕ್ಷ್ಯದಿಂದ ಘಟನೆ ನಡೆದಿತ್ತು, ಬಾಲಕನ ಕುಟುಂಬಕ್ಕೆ ಪಾಲಿಕೆಯ ವತಿಯಿಂದ 5 ಲಕ್ಷ ರೂ.ಗಳ ಚೆಕ್ ಕೊಡುತ್ತಿದ್ದೇವೆ, ಅದೇ ರೀತಿ ಸಿಎಂ ಪರಿಹಾರ ಧನ ಅಡಿ 3 ಲಕ್ಷ ರೂ.ಗಳನ್ನು ನೀಡಲಾಗುವುದು, ಎಷ್ಟೇ ಪರಿಹಾರ ಕೊಟ್ಟರೂ ಹೋದ ಜೀವ ಬರುವುದಿಲ್ಲ, ಕುಟುಂಬಸ್ಥರಿಗೆ ಮಗುವಿನ ಸಾವಿನ ನೋವು ತಡೆದುಕೊಳ್ಳುವ ಶಕ್ತಿ ಸಿಗಲಿ ಎಂದರು.


ಮೃತ ಬಾಲಕನ ಕುಟುಂಬದ ಸದಸ್ಯರೊಬ್ಬರಿಗೆ ಮಹಾನಗರ ಪಾಲಿಕೆಯಲ್ಲಿ ಉದ್ಯೋಗ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.ಅದ್ಧೂರಿ ಸಾಹಿತ್ಯ ಸಮ್ಮೇಳನ ಆಯೋಜನೆ: ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶಾಸಕ ನಾರಾ ಭರತ್ ರೆಡ್ಡಿ; ಆಂಧ್ರದ ಗಡಿ ಭಾಗದಲ್ಲಿರುವ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಕನ್ನಡದ ಹಬ್ಬ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಏರ್ಪಡಿಸುವ ಅವಕಾಶ ನಮ್ಮದಾಗಲಿ ಅಂತಾನೇ ನಾವೆಲ್ಲ ಜನಪ್ರತಿನಿಧಿಗಳು ಪ್ರಯತ್ನ ಪಟ್ಟಿದ್ದೇವೆ, ಅದೇ ರೀತಿ ಸಮ್ಮೇಳನವನ್ನು ಅದ್ಧೂರಿಯಾಗಿ ಅರ್ಥಪೂರ್ಣವಾಗಿ ಏರ್ಪಡಿಸಲಾಗುವುದೆಂದರು.


ಪ್ರತಿಭಟನೆ ಮಾಡಿದ್ದ ಬಿಜೆಪಿಯವರ ವಿರುದ್ಧ ಪೊಲೀಸ್ ಕ್ರಮ ಜರುಗಿಸಲಾಗುತ್ತಿದೆ ಎಂಬ ಬಿಜೆಪಿಯ ಮುಖಂಡರ ಆರೋಪಕ್ಕೆ ಪ್ರತಿಕ್ರಿಯಿಸಿದ ಶಾಸಕ ನಾರಾ ಭರತ್ ರೆಡ್ಡಿ; ಪ್ರಜಾಪ್ರಭುತ್ವದ ಅಸ್ತಿತ್ವವೇ ಪ್ರತಿಭಟನೆಯಲ್ಲಿದೆ, ವಿಪಕ್ಷದವರ ಧ್ವನಿ ಅಡಗಿಸುವ ಜಾಯಮಾನ ನನ್ನದಲ್ಲ, ಹಾಗೆ ಆಲೋಚಿಸಿದ್ದರೆ ಪ್ರತಿಭಟನೆಗೇ ಅವಕಾಶ ಕೊಡುತ್ತಿದ್ದಿಲ್ಲ ಎಂದರು.


ಈ ಸಂದರ್ಭ ಪಾಲಿಕೆಯ ಆಯುಕ್ತ ಖಲೀಲಸಾಬ, ಮುನಾಫ್ ಪಟೇಲ್, ಸದಸ್ಯರಾದ ಎಂ.ಪ್ರಭಂಜನಕುಮಾರ್, ಕಾಂಗ್ರೆಸ್ ಮುಖಂಡರಾದ ಶಿವರಾಜ್, ಸೂರಿ, ಹೊನ್ನಪ್ಪ, ಹಗರಿ ಗೋವಿಂದ, ಬಾಪೂಜಿ ನಗರ ವೆಂಕಟೇಶ, ಚಾನಾಳ್ ಶೇಖರ್, ಭರತ್, ಬಾಲರಾಜು, ಬುಜ್ಜಿ ಮೊದಲಾದವರು ಹಾಜರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ