Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಮ್‌ಇಎಸ್‌ ಪಾಕ್‌ನ ಉಗ್ರ ಸಂಘಟನೆಯಂತೆ: ನಾರಾಯಣಗೌಡ

ಬೆಳಗಾವಿ: "ಎಂಇಎಸ್ ಎಂಥ ಸಂಘಟನೆ ಅಂತಾ ಇಡೀ ದೇಶಕ್ಕೆ ಗೊತ್ತಿದೆ. ಪಾಕಿಸ್ತಾನದ ಭಯೋತ್ಪಾದಕರಿಗೂ ಎಂಇಎಸ್ ಮತ್ತು ಶಿವಸೇನೆ ಕಾರ್ಯಕರ್ತರಿಗೂ ಯಾವುದೇ ವ್ಯತ್ಯಾಸ ಇಲ್ಲ" ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಯಣಗೌಡ ಹರಿಹಾಯ್ದರು.


ಬೆಳಗಾವಿ ಸಾಂಬ್ರಾ ವಿಮಾನ‌ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, "ಒಬ್ಬ ಚಾಲಕ, ನಿರ್ವಾಹಕರನ್ನು ಬಸ್​ನಿಂದ ಕೆಳಗಿಳಿಸಿ ಬಣ್ಣ ಹಾಕಿ, ಅವರಿಗೆ ಹಾರ ಹಾಕಿ ಜೈ ಮಹಾರಾಷ್ಟ್ರ ಅಂತಾ ಘೋಷಣೆ ಕೂಗಿಸುತ್ತೀರಿ. ಇಡೀ ಬೆಳಗಾವಿಯಲ್ಲಿರುವ ಪ್ರತಿಯೊಬ್ಬ ಮರಾಠಿಗನ ಬಾಯಿಯಿಂದಲೂ ಕರ್ನಾಟಕಕ್ಕೆ ಜೈ ಎನಿಸುವ ಕಾಲ ಬೇಗ ಬರುತ್ತದೆ. ಇದನ್ನೆಲ್ಲ ಬಿಟ್ಟು ಬಿಡಿ. ಬೆಳಗಾವಿಯಲ್ಲಿ ಎಂಇಎಸ್ ಸಂಪೂರ್ಣ ಅಂತ್ಯವಾಗಿದೆ. ಆ ಹೊಟ್ಟೆ ಉರಿಗೆ ಇಂಥ ಆಟ ಶುರು ಮಾಡಿದ್ದಾರೆ. ಬೆಳಗಾವಿ ಅಷ್ಟೇ ಅಲ್ಲದೇ ಇಡೀ ಕರ್ನಾಟಕದಲ್ಲಿ ಎಂಇಎಸ್ ಇಲ್ಲದಂತೆ ಮಾಡೋವರೆಗೂ ಕರವೇ ಹೋರಾಟ ಬಿಡುವುದಿಲ್ಲ" ಎಂದು ಎಚ್ಚರಿಸಿದರು.


ನಾನು ಬೆಳಗಾವಿಗೆ ಬಂದಷ್ಟು ಯಾವ ಸಚಿವರು ಬಂದಿಲ್ಲ: "ಇಡೀ ಕರ್ನಾಟಕದಲ್ಲಿ ಎಲ್ಲ ಕನ್ನಡಪರ ಹೋರಾಟಗಾರರ ಮೇಲಿನ ಕೇಸ್ ತೆಗೆಯುವಂತೆ ಹೋರಾಡುತ್ತಿರುವುದೇ ಕರವೇ. ಬೆಳಗಾವಿಗೆ ನಾನು ಬಂದಷ್ಟು ಯಾವ ಕರ್ನಾಟಕದ ಮುಖ್ಯಮಂತ್ರಿ, ಸಚಿವರೂ ಬಂದಿಲ್ಲ. ಬೆಳಗಾವಿ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿ, ಸರ್ಕಾರದ ಮೇಲೆ ನನ್ನಷ್ಟು ಒತ್ತಡ ಬೇರೆ ಯಾರೂ ಹಾಕಿಲ್ಲ. ರಾಜ್ಯದ ಮುಖ್ಯಮಂತ್ರಿ ಒಳಗೊಂಡಂತೆ ಈ ಭಾಗದ ಮಂತ್ರಿಗಳನ್ನು ಒಳಗೊಂಡು ಯಾರೂ ಉಸಿರು ಬಿಡದೇ ಇದ್ದಾಗ ಮಾತಾಡಿದ್ದು, ಹೋರಾಟ ಮಾಡಿದ್ದು ಕರವೇ ಮಾತ್ರ" ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ