Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಶಾ ಮುಕ್ತ ಭಾರತ ಅಭಿಯಾನ: ಬಂಡೀಪುರದಿಂದ ಬೀದರ್ ವರೆಗೆ 3 ದಿನಗಳ ಬೈಕ್ ಜಾಥಾ

ಬಳ್ಳಾರಿ,ಆ.28 ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಆಚರಿಸುತ್ತಿರುವ  ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ, ಆಗಸ್ಟ್ 29 ರಿಂದ 31 ರವರೆಗೆ ಬಂಡೀಪುರದಿಂದ ಬೀದರ್ ವರೆಗೆ 3 ದಿನಗಳ ಬೈಕ್ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.


ಮದ್ಯಪಾನ ಮತ್ತು ಮಾದಕ ವಸ್ತುಗಳ ದುರುಪಯೋಗದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ರಾಜ್ಯ ಸರ್ಕಾರದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನರಾಜ್‌ಸಿಂಗ್ ತಿಳಿಸಿದ್ದಾರೆ.


ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅರಣ್ಯ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಮತ್ತು ಎನ್.ಸಿ.ಸಿ. ಸಹಯೋಗದೊಂದಿಗೆ ಜಾಥಾ ಆಯೋಜಿಸಲಾಗುತ್ತಿದೆ.


ಸಾರ್ವಜನಿಕರಿಂದ ಆಯ್ಕೆಯಾದ 20 ಬೈಕ್ ಸವಾರರು ಭಾಗವಹಿಸಲಿದ್ದಾರೆ. ಈ ಜಾಥಾ ಕಾರ್ಯಕ್ರಮವು ಮಾರ್ಗದುದ್ದಕ್ಕೂ ರಾಜ್ಯದ ಪ್ರಮುಖ ಜಿಲ್ಲೆಗಳ ಮೂಲಕ ಸಾಗುತ್ತಾ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಿದೆ.


ಈ ಬೃಹತ್ ಅಭಿಯಾನವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನರಾಜ್ ಸಿಂಗ್, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಸರ್ಕಾರದ ಪ್ರಧಾನ ಕಾರ್ಯದರ್ಶಿ (ಅರಣ್ಯ) ಮನೋಜಕುಮಾರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅಭಿವೃದ್ಧಿ) ಆರ್.ರವಿಶಂಕರ್, ಬಂಡೀಪುರ ಹುಲಿ ಮೀಸಲು ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ನಿರ್ದೇಶಕ ಎಸ್.ಪ್ರಭಾಕರನ್, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರ  ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಹಾಗೂ ಇತರ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಗಣ್ಯರು ರೂಪಿಸಿದ್ದಾರೆ.


ದೇಶಾದ್ಯಂತ 1 ಲಕ್ಷ ಕಿಲೋಮೀಟ‌ರ್ ಗಳಿಗೂ ಹೆಚ್ಚು ಪ್ರಯಾಣವನ್ನು ಸೈಕ್ಲಿಂಗ್‌ನಲ್ಲಿ ಕ್ರಮಿಸಿ ಅಪ್ರತಿಮ ಸಾಧನೆ ಮಾಡಿರುವ ರೈಡರ್  ನಂದಿನಿ ಮಿಥುನ್  ಈ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವುದು ವಿಶೇಷವಾಗಿದೆ. ಅವರು ತಮ್ಮ ಅಸಾಧಾರಣ ಅನುಭವಗಳು ಮತ್ತು ಬದ್ಧತೆಯಿಂದ ಸಾಮಾಜಿಕ ಉದ್ದೇಶಗಳ ಕಡೆಗೆ ಯುವಕರನ್ನು ಪ್ರೇರೇಪಿಸಲಿದ್ದಾರೆ.


ಈ ಗಣ್ಯರು ಶಾಲೆಗಳು, ಕಾಲೇಜುಗಳು, ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಭಾಗವಹಿಸಿ, ಯುವಜನತೆಗೆ ಉದ್ದೇಶಿತ ಜಾಗೃತಿ ಭಾಷಣಗಳು ಮತ್ತು ಸಂದೇಶಗಳನ್ನು ನೀಡಲಿದ್ದಾರೆ.


ಕರ್ನಾಟಕ ಸರ್ಕಾರವು ಈ ಜಾಥಾ ಕಾರ್ಯಕ್ರಮದ ಮೂಲಕ ಸಾರ್ವಜನಿಕರಿಗೆ ಮಾದಕ ದ್ರವ್ಯ ಮುಕ್ತ ಹಾಗೂ ಆರೋಗ್ಯಕರ ಸಮಾಜವನ್ನು ಸೃಷ್ಟಿಸುವ ಪ್ರಯತ್ನವಾಗಿ ಹಮ್ಮಿಕೊಳ್ಳುತ್ತಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ