*ಕಂಪ್ಲಿ:20;ತಾಲೂಕಿನ ಕಣ್ವಿತಿಮ್ಮಲಾಪುರ ಗ್ರಾಮದ ಜಗದೀಶ್ ಪೂಜಾರ್ ಅವರಿಗೆ ಸಾಮಾಜಿಕ ಸೇವೆ ಗುರುತಿಸಿ "ಭಾರತ ಭೂಷಣ ರಾಷ್ಟ್ರೀಯ ಪ್ರಶಸ್ತಿ" ನೀಡಿ ಗೌರವಿಸಲಾಗುವುದು.
ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ ರಿ. ಬೆಂಗಳೂರು ಇವರು ದಿನಾಂಕ 23/08/2026 ರವಿವಾರದಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕ ಮಹಾದೇವಿ ಸಭಾಂಗಣದಲ್ಲಿ ಏರ್ಪಡಿಸಿರುವ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಲಿದ್ದಾರೆ ಎಂದು ಚಾರಿಟಬಲ್ ಟ್ರಸ್ಟ್ ನ ರಾಜ್ಯಾಧ್ಯಕ್ಷ ಡಾ. ಜಿ. ಶಿವಣ್ಣ ತಿಳಿಸಿದ್ದಾರೆ.
ಜಗದೀಶ್ ಪೂಜಾರ್ ಅವರು ಗ್ರಾಮೀಣ ಕ್ರೀಡಾ ಕೂಟ, ಸ್ವಚ್ಛತಾ ಅಭಿಯಾನ, ಸಾಹಸ ಕ್ರೀಡೆಗಳು, ಪಲ್ಸ್ ಪೋಲಿಯೊ, ಆರೋಗ್ಯ ಜಾಗೃತಿ ಬೀದಿ ನಾಟಕ, ರಕ್ತದಾನ ಶಿಬಿರ ಹಾಗೂ ಯುವಜನರಲ್ಲಿ ನಾಯಕತ್ವ ಗುಣ ಬೆಳೆಸುವಂತಹ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಅವರ ಅನುಪಮ ಸಮಾಜ ಸೇವೆಯನ್ನು ಗುರುತಿಸಿ ಈ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಇದಕ್ಕೂ ಮುನ್ನ ಇವರು ರಾಜ್ಯ ಸದ್ಭಾವನ ಪ್ರಶಸ್ತಿ, ಬಸವಶ್ರೀ ರಾಷ್ಟ್ರೀಯ ಪ್ರಶಸ್ತಿ, ಸಮಾಜ ಸೇವಾ ಭಾರ್ಗವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಪ್ರಸ್ತುತ ಕಣ್ವಿತಿಮ್ಮಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾ