Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಕ್ಸಲ್ ತಂಡ ಗುಂಡಿನ ದಾಳಿ ಮಾಡಿದ ಪರಿಣಾಮ ಎನ್​ಕೌಂಟರ್: ಸಚಿವ ಜಿ.ಪರಮೇಶ್ವರ್

ಬೆಂಗಳೂರು: ಕಳೆದ 20 ವರ್ಷಗಳಿಂದ ಪೊಲೀಸರು ಹುಡುಕುತ್ತಿದ್ದ ನಕ್ಸಲ್​ ವಿಕ್ರಂ ಗೌಡನನ್ನ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಎನ್​ಕೌಂಟರ್ ಮಾಡಲಾಗಿದೆ. ನಕ್ಸಲ್ ತಂಡ ಗುಂಡಿನ ದಾಳಿ ಮಾಡಿದ ಪರಿಣಾಮ ಪೊಲೀಸರು ಎನ್​ಕೌಂಟರ್ ಮಾಡಬೇಕಾಯುತ್ತ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.


ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಗಹ ಸಚಿವರು, ಕಳೆದ 20 ವರ್ಷಗಳಿಂದ ಗ್ರೇಡೆಸ್ ನಕ್ಸಲ್ ತಪ್ಪಿಸಿಕೊಂಡು ಓಡಾಡ್ತಿದ್ರು. ಆತನನ್ನು ಸೆರೆಹಿಡಿಯಲು ಮತ್ತು ಎನ್‌ಕೌಂಟರ್ ಮಾಡಲು ಸಾಧ್ಯವಾಗಿರಲಿಲ್ಲ. ಅಂತೆಯೇ ಪೊಲೀಸರು ವಿಕ್ರಂ ಗೌಡ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದರು. ನಾವೂ ರಾಜ್ಯದಲ್ಲಿ ನಕ್ಸಲ್ ಕಾಲ ಮುಗೀತು ಅನ್ಕೊಂಡಿದ್ವಿ. ಆದ್ರೆ ಕಳೆದ ವಾರ ರಾಜು ಮತ್ತು ಲತಾ ಎಂಬು ನಕ್ಸಲರು ಪತ್ತೆ ಆದ ಬಳಿಕ ಹೆಬ್ರಿ ಭಾಗದಲ್ಲಿ ಕೂಂಬಿಂಗ್ ಆಪರೇಷನ್ ನಡೆಯುತ್ತಿತ್ತು. ಆಗ ಇದ್ದಕಿದ್ದ ಹಾಗೆ ವಿಕ್ರಂ ಗೌಡ ಬರುವ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಈ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡಾಗ ನಕ್ಸಲ್ ತಂಡ ಗುಂಡಿನ ದಾಳಿ ನಡೆಸಿದೆ. ಆಗ ಪೊಲೀಸರು ಅನಿವಾರ್ಯವಾಗಿ ಎನ್​ಕೌಂಟರ್ ಮಾಡಿದ್ದಾರೆ. ಇನ್ನು ವಿಕ್ರಂ ಜೊತೆಯಲ್ಲಿದ್ದ ಇಬ್ಬರು ಮೂವರು ಓಡಿ ಹೋಗಿದ್ದು, ಆ ಭಾಗದಲ್ಲಿ ಕೂಂಬಿಂಗ್ ಮುಂದುವರೆದಿದೆ ಎಂದು ಸಚಿವರು ತಿಳಿಸಿದ್ದಾರೆ.


ನಕ್ಸಲರನ್ನು ಮುಖ್ಯ ವೇದಿಕೆಗೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ. ಹಿಂದೆ ಪಾವಗಡ ಭಾಗದಲ್ಲಿ ನಕ್ಸಲರನ್ನು ಮಾತಾಡಿ ಮುಖ್ಯವೇದಿಕೆಗೆ ಕರೆತರಲಾಗಿತ್ತು. ಈಗಲೂ ಈ ಪ್ರಯತ್ನ ನಡೆಯುತ್ತಿದೆ. ಶರಣಾಗ ಬಯಸುವ ನಕ್ಸಲರಿಗೆ ಸಾಮಾನ್ಯ ಬದುಕು ನಡೆಸಲು ಸರ್ಕಾರ ಅವಕಾಶ ಮಾಡಿಕೊಡಲಿದೆ. ಆದರೆ ಅರಣ್ಯ ಭಾಗದಲ್ಲಿದ್ದು, ಪೊಲೀಸರ ಮೇಲೆ ತಪ್ಪಿಸಿಕೊಂಡು ಹೋಗಲು ಪ್ರಯತ್ನ ಮಾಡಿದ್ರೆ ಈ ರೀತಿ ಘಟನೆ ನಡೆಯುವುದು ಸಹಜ ಎಂದು ತಿಳಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ