LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನೀಟ್ ಪರೀಕ್ಷೆ: ಆಕ್ಸ್‌ಫರ್ಡ್ ಪಾಟೀಲ ಕಾಲೇಜಿಗೆ ಉತ್ತಮ ಫಲಿತಾಂಶ

ಹಸಿರು ಕ್ರಾಂತಿ ವರದಿ ಮುದ್ದೇಬಿಹಾಳ
ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (ನೀಟ್–2026)ಯಲ್ಲಿ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟದ ಆಕ್ಸ್‌ಫರ್ಡ್ ಪಾಟೀಲ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಮತ್ತೊಮ್ಮೆ ಅತ್ಯುತ್ತಮ ಸಾಧನೆ ಮಾಡುವ ಮೂಲಕ ತಾಲೂಕಿನ ಶಿಕ್ಷಣ ಕ್ಷೇತ್ರದ ಹೆಗ್ಗಳಿಕೆಯನ್ನು ರಾಜ್ಯಮಟ್ಟದಲ್ಲಿ ಮತ್ತಷ್ಟು ಹೆಚ್ಚಿಸಿದ್ದಾರೆ.

ಕಾಲೇಜಿನ ಒಟ್ಟು 285 ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸುವ ಮೂಲಕ ವೈದ್ಯಕೀಯ ಸೇರಿದಂತೆ ವಿವಿಧ ಉನ್ನತ ಶಿಕ್ಷಣ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಅರ್ಹತೆ ಪಡೆದಿದ್ದಾರೆ. ಇವರಲ್ಲಿ 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕಗಳನ್ನು ಗಳಿಸಿದ್ದು, 127 ವಿದ್ಯಾರ್ಥಿಗಳು 500ಕ್ಕೂ ಹೆಚ್ಚು ಅಂಕಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಈ ಫಲಿತಾಂಶವು ಕಾಲೇಜಿನ ಗುಣಮಟ್ಟದ ಬೋಧನೆ, ವಿದ್ಯಾರ್ಥಿಗಳ ಪರಿಶ್ರಮ ಹಾಗೂ ಪೋಷಕರ ಸಹಕಾರಕ್ಕೆ ಸಾಕ್ಷಿಯಾಗಿದೆ.

ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ತಲುಪಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಆಕ್ಸ್‌ಫರ್ಡ್ ಪಾಟೀಲ ಸಮೂಹ ಶಿಕ್ಷಣ ಸಂಸ್ಥೆ, ಪ್ರತಿವರ್ಷ ಅನೇಕ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಅವಕಾಶ ಕಲ್ಪಿಸುತ್ತಿದೆ. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಿಷ್ಯವೇತನ, ನಗದು ಬಹುಮಾನ ಹಾಗೂ ವಿಶೇಷ ಪ್ರೋತ್ಸಾಹಧನ ನೀಡುವ ಮೂಲಕ ವಿದ್ಯಾರ್ಥಿಗಳನ್ನು ಉತ್ತೇಜಿಸುತ್ತಿದೆ. ಇದರಿಂದ ಪ್ರತಿಭಾವಂತ ವಿದ್ಯಾರ್ಥಿಗಳು ಆರ್ಥಿಕ ಅಡೆತಡೆಗಳನ್ನು ಮೀರಿ ಉನ್ನತ ಶಿಕ್ಷಣದತ್ತ ಸಾಗಲು ಅನುಕೂಲವಾಗುತ್ತಿದೆ. 
-ಎಂ.ಎಸ್‌.ಪಾಟೀಲ, ಸಂಸ್ಥೆಯ ಚೇರಮನ್‌


ವಿದ್ಯಾರ್ಥಿಗಳೊಂದಿಗೆ ಆತ್ಮೀಯ ಬಾಂಧವ್ಯ ಬೆಳೆಸಿಕೊಂಡು ಗುಣಮಟ್ಟದ ಬೋಧನೆಗೆ ಆದ್ಯತೆ ನೀಡುತ್ತಿರುವ ಸಂಸ್ಥೆ, ಗ್ರಾಮೀಣ ಪ್ರದೇಶದ ಮಕ್ಕಳಿಗೂ ನಗರ ಮಟ್ಟದ ಶಿಕ್ಷಣ ದೊರಕುವಂತೆ ಅನುಭವಿ ಹಾಗೂ ಉನ್ನತ ಮಟ್ಟದ ಶಿಕ್ಷಕರನ್ನು ನೇಮಿಸಿ ಶಿಕ್ಷಣದ ಗುಣಮಟ್ಟವನ್ನು ನಿರಂತರವಾಗಿ ಕಾಪಾಡಿಕೊಂಡು ಬಂದಿದೆ. ಕಾಲೇಜಿನ ಈ ವರ್ಷದ ನೀಟ್ ಫಲಿತಾಂಶವು ಸಂಸ್ಥೆಯ ಶೈಕ್ಷಣಿಕ ಬದ್ಧತೆ ಹಾಗೂ ವಿದ್ಯಾರ್ಥಿ-ಕೇಂದ್ರಿತ ಶಿಕ್ಷಣ ವ್ಯವಸ್ಥೆಗೆ ಮತ್ತೊಂದು ಸಾಕ್ಷಿಯಾಗಿದ್ದು, ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ನಿರ್ಮಿಸಿದೆ.
-ಅಮೀತಗೌಡ ಪಾಟೀಲ, ಆಡಳಿತಾಧಿಕಾರಿ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್