LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

 ಜೂನ್ 21ಕ್ಕೆ ನೀಟ್-ಯುಜಿ ಮರು ಪರೀಕ್ಷೆ

ದೆಹಲಿ, ಮೇ.15: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಈಗ ಅದರ ಮರು ಪರೀಕ್ಷೆಯನು ದಿ. ೨೧-೦೬-೨೦೨೬ ಗೆ ನಿಗದಿ ಪಡಿಸಿ ಘೋಷಿಸಲಾಗಿದೆ.  ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಬೆನ್ನಲ್ಲೆ ಎಚ್ಚೇತ್ತಿರುವ ಕೇಂದ್ರ ಸರಕಾರ ಮುಂದಿನ ವರ್ಷದಿಂದ ನೀಟ್‌ ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತ ಮಾದರಿಯಲ್ಲಿ ನಡೆಸಲು ತಿರ್ಮಾನಿಸಲಾಗಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

news_1778828733_0_225.webp

 

ನೀಟ್‌ ಮರು ಪರೀಕ್ಷೆಯ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಜೂನ್ 14 ರೊಳಗೆ ವಿತರಿಸಲಾಗುವುದು ಹಾಗೂ ವಿದ್ಯಾರ್ಥಿಗಳಿಗೆ ತಮ್ಮ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಲು ಒಂದು ವಾರ ಮುಂಚಿತವಾಗಿ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಮರು ಪರೀಕ್ಷೆಗೆ ಯಾವುದೇ ಶುಲ್ಕವಿರುವುದಿಲ್ಲ ಮತ್ತು ಈ ಹಿಂದೆ ಪಾವತಿಸಿದ್ದ ಪರೀಕ್ಷಾ ಶುಲ್ಕವನ್ನು ಅಭ್ಯರ್ಥಿಗಳಿಗೆ ಮರುಪಾವತಿ ಮಾಡಲಾಗುವುದು ಎಂದು ಸಚಿವರು ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯಲ್ಲಿ ಅಕ್ರಮ ಎಸಗುವವರ ವಿರುದ್ಧ ‘ಶೂನ್ಯ ಸಹನೆ’ ನೀತಿಯನ್ನು ಸರಕಾರ ಹೊಂದಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಫಿಯಾಗಳು ಕಷ್ಟಪಟ್ಟು ಓದುವ ವಿದ್ಯಾರ್ಥಿಗಳ ಸೀಟುಗಳನ್ನು ಕಸಿಯಲು ಬಿಡುವುದಿಲ್ಲ, ಹಗರಣದ ಮೂಲ ಪತ್ತೆಹಚ್ಚಲು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದ್ದು. ವಿಚಾರಣೆಯು ತೀವ್ರಗೊಳಿಸಲಾಗಿದೆ.

ಎನ್‌ಟಿಎ ವ್ಯವಸ್ಥೆಯನ್ನು ಇನ್ನೂ ಹೆಚ್ಚು ಬಲಪಡಿಸಲು ರಾಧಾಕೃಷ್ಣನ್ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತರಲಾಗುವುದು. ಅದಕ್ಕಾಗಿ ಈಗ  ಐಐಟಿ-ಜೆಇಇ ಮಾದರಿಯಲ್ಲಿಯೇ ನೀಟ್ ಪರೀಕ್ಷೆಯನ್ನೂ ಡಿಜಿಟಲ್ ರೂಪಕ್ಕೆ ತರಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೀಟ್ ಹಾಗೂ ಸಿಇಟಿ ವಿಶೇಷ ಮಾರ್ಗದರ್ಶನ ಕಾರ್ಯಾಗಾರಸಣ್ಣ ನೀರಾವರಿ ಇಲಾಖೆ ಕಛೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಲಕ್ಷ್ಮಣ ಸವದಿ ಭೂಮಿ ಪೂಜೆ.೧೨೫ ದಿನಗಳ ಉದ್ಯೋಗ ಖಾತರಿ: ರಾಮದುರ್ಗ ತಾಲೂಕಿನಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆಮಹಾದೇವಪ್ಪ ಯಾದವಾಡ ಅಭಿಮಾನಿ ಬಳಗದಿಂದ ಉಚಿತ ಹೆಲ್ಮೆಟ್ ವಿತರಣೆರಾಮದುರ್ಗದಲ್ಲಿ ಉಚಿತ ಉಚಿತ ಹೃದಯ ಹಾಗೂ ಆರೋಗ್ಯ ತಪಾಸಣಾ ಶಿಬಿರಚಚಡಿ ಏತ ನೀರಾವರಿ ಶೀಘ್ರ  ಯೋಜನೆ ಅನುಷ್ಠಾನಕ್ಕೆ ಅಗ್ರಹಿಸಿ ರೈತರಿಂದ ದಿ. 24 ರಂದು ರಸ್ತಾರೋಖೊ.ಮಲ್ಲಿಕಾರ್ಜುನ ಖರ್ಗೆ ಭಾಷಣದ ಸ್ಥಳ ಶುದ್ಧೀಕರಣಕ್ಕೆ ಖಂಡನೆ: ಕಾಗವಾಡದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪೂಜೆ ಶೆಲ್ ನೆಕ್ಸ್ ಪ್ಲೋರರ್ಸ್ ಶಿಕ್ಷಕರ ವೃತ್ತಿಪರ ಅಭಿವೃದ್ಧಿ ತರಬೇತಿ ರಿಫ್ರೆಶರ್ ತರಬೇತಿ-೭  ಕಂಚವೀರ ನಗರ ನಿವಾಸಿಗಳ ಗ್ರಾಮ ಪಂ ವಿರುದ್ದ ಆಕ್ರೋಶ