Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bijapur

ಮಹಿಳಾ ಸಾಹಿತಿಗಳ ನಿರ್ಲಕ್ಷ್ಯ ಖಂಡನೀಯ-ಡಾ.ಸುಜಾತಾ ಚಲವಾದಿ


ತಾಳಿಕೋಟೆ: ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ವಿಜಯಪುರ ಜಿಲ್ಲೆ ನಾಡಿನಲ್ಲಿಯೇ ಮಹತ್ವದ ಸಾಧನೆ ಮಾಡಿದೆ. ಆದರೆ, ಇತ್ತೀಚೆಗೆ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾಹಿತಿಗಳ ಹೆಸರುಗಳನ್ನು ಪ್ರಸ್ತಾಪಿಸುವ ಸಂದರ್ಭದಲ್ಲಿ ಮಹಿಳಾ ಸಾಹಿತಿಯೊಬ್ಬರ ಹೆಸರನ್ನೂ ಉಲ್ಲೇಖಿಸದಿರುವುದು ವಿಷಾದನೀಯ ಎಂದು ಸಾಹಿತಿ ಡಾ. ಸುಜಾತಾ ಚಲವಾದಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
      ಪತ್ರಿಕೆಗೆ ಪ್ರಕಟನೆ ನೀಡಿರುವ ಅವರು ಜಿಲ್ಲೆಯಲ್ಲಿ ಜಯಶ್ರೀ ಯರನಾಳ, ಸರಸ್ವತಿ ಚಿಮ್ಮಲಗಿ, ಶಾಂತಾ ಇಮ್ರಾಪುರ, ಇಂದುಮತಿ ಲಮಾಣಿ, ಸುಶೀಲಾ ಕಮತಗಿ, ಭಾರತಿ ಪಾಟೀಲ, ಡಾ. ಸುಜಾತಾ ಚಲವಾದಿ, ಪ್ರಭಾವತಿ ದೇಸಾಯಿ, ದಾಕ್ಷಾಯಣಿ ಹುಡೇದ, ದಾಕ್ಷಾಯಣಿ ಬಿರಾದಾರ, ಹೇಮಲತಾ ವಸ್ತ್ರದ, ವಿದ್ಯಾವತಿ ಅಂಕಲಗಿ ಸೇರಿದಂತೆ ಅನೇಕ ಮಹಿಳಾ ಸಾಹಿತಿಗಳು ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.
      ಇಷ್ಟೊಂದು ಪ್ರತಿಭಾವಂತ ಮಹಿಳಾ ಸಾಹಿತಿಗಳಿದ್ದರೂ ಜಿಲ್ಲಾಡಳಿತದ ಸರ್ಕಾರಿ ಕಾರ್ಯಕ್ರಮದಲ್ಲಿ ಅವರ ಹೆಸರುಗಳನ್ನು ಪ್ರಸ್ತಾಪಿಸದಿರುವುದು ಮಹಿಳಾ ಸಾಹಿತಿಗಳ ಕಡೆಗಣನೆಯಾಗಿದೆ. ಇದು ಪುರುಷ ಪ್ರಧಾನ ವ್ಯವಸ್ಥೆಯ ಮನೋಭಾವವನ್ನು ಪ್ರತಿಬಿಂಬಿಸುವಂತಿದೆ. ಸಾಹಿತ್ಯ ಕ್ಷೇತ್ರಕ್ಕೆ ಮಹಿಳೆಯರು ನೀಡಿರುವ ಕೊಡುಗೆಯನ್ನು ಗುರುತಿಸಿ ಗೌರವಿಸುವುದು ಅಗತ್ಯವಾಗಿದೆ. ಮಹಿಳಾ ಸಾಹಿತಿಗಳನ್ನು ಕಡೆಗಣಿಸಿರುವ ಈ ಬೆಳವಣಿಗೆಯನ್ನು ಮಹಿಳಾ ಲೇಖಕಿಯಾಗಿ ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಂದಿನ ದಿನಗಳಲ್ಲಿ ಇಂತಹ ತಪ್ಪುಗಳು ಮರುಕಳಿಸದಂತೆ ಜಿಲ್ಲಾಡಳಿತ ಎಚ್ಚರ ವಹಿಸಬೇಕು ಎಂದು ಡಾ. ಸುಜಾತಾ ಚಲವಾದಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಆಯೋಜನೆ: ಸಚಿವ ಸಂತೋಷ ಎಸ್. ಲಾಡ್ಸಮಾಜದ ಮುಖ್ಯ ವಾಹಿನಿಗೆ ವಿಕಲ ಚೇತನರು ಮುಂದೆ ಬರಬೇಕು : ಬಾಲಚಂದ್ರ ಜಾರಕಿಹೊಳಿಶ್ರೀ ಸಾಯಿ ಕಾಲೇಜಿನ ಶಿಬಿರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಕನ್ನಡ ಕಟ್ಟುವಲ್ಲಿ ಧಾರವಾಡದ ಧುರೀಣರ ಕೊಡುಗೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ವಿಧಾನ ಪರಿಷತ್ ಸದಸ್ಯ  ಸ್ಥಾನಕ್ಕೆ ಐದನೇ ಬಾರಿ ಆಯ್ಕೆಯಾದ ಶಶೀಲ್. ಜಿ. ನಮೋಶಿ ಅವರಿಗೆ ಹೊಸಪೇಟೆ ಯಲ್ಲಿ ಅದ್ಧೂರಿ ಸ್ವಾಗತ*ಬಿಜೆಪಿ ಮೋರ್ಚಾ ಪದಾಧಿಕಾರಿಗಳ ಮಹತ್ವದ ಸಭೆ*ಮಹಿಳಾ ಸಾಹಿತಿಗಳ ನಿರ್ಲಕ್ಷ್ಯ ಖಂಡನೀಯ-ಡಾ.ಸುಜಾತಾ ಚಲವಾದಿವಿಶ್ವವಿದ್ಯಾಲಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವಿಶ್ವವಿದ್ಯಾಲಯ ಬಾಸ್ಕೆಟ್‌ಬಾಲ್ ತಂಡಕ್ಕೆ ತನ್ವೀರ್ ಆಯ್ಕೆಶ್ರೀ ವಿಶ್ವಗುರು ಸೌಹಾರ್ದ ಸೊಸೈಟಿ  ಅಧ್ಯಕ್ಷರಾಗಿ ಅರವಿಂದ ಬಡಕುಂದ್ರಿ, ಉಪಾಧ್ಯಕ್ಷರಾಗಿ ಬರಮಪ್ಪ ನಾಗನೂರ ಆಯ್ಕೆ.ಹತ್ತು ವರ್ಷಗಳಿಂದ ಪರಿಹಾರಕ್ಕಾಗಿ ಹೋರಾಟ: 95 ರೈತರಿಗೆ ₹54 ಕೋಟಿ ರೂ. ವಿತರಣೆ