Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Vijayanagara

ಮಹಿಳಾ ಸಮಸ್ಯೆಗಳ ನಿರ್ಲಕ್ಷ್ಯ ಸಹಿಸುವುದಿಲ್ಲ: ನಾಗಲಕ್ಷ್ಮೀ ಚೌಧರಿ

ವಿಜಯನಗರ (ಹೊಸಪೇಟೆ) ನ.06: ಜಿಲ್ಲೆಯಲ್ಲಿನ ಮಹಿಳೆಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದರ ಜೊತೆಗೆ ವಿವಿಧ ಇಲಾಖೆಗಳಲ್ಲಿನ ಲೋಪದೋಷಗಳನ್ನು ಸರಿಪಡಿಸಿ, ಸಾರ್ವಜನಿಕರಿಗೆ ಸಮರ್ಪಕ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಇಲಾಖೆ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿ ರಚನೆ ಕಡ್ಡಾಯವಾಗಿದ್ದು, ಪ್ರಕರಣಗಳು ವರದಿಯಾಗದಿದ್ದರೂ ನಿಯಮಿತವಾಗಿ ಪ್ರಗತಿ ಪರಿಶೀಲನಾ ಸಭೆಗಳನ್ನು ಆಯೋಜಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಸೂಚಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಶುಕ್ರವಾರ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಮಹಿಳಾ ಸ್ಪಂದನ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮೃದ್ಧ ಸಂಪನ್ಮೂಲಗಳನ್ನು ಹೊಂದಿರುವ ವಿಜಯನಗರ ಜಿಲ್ಲೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ಅಗತ್ಯವಿದೆ. ಯಾವುದೇ ರೀತಿಯ ಸಮಸ್ಯೆಗಳು ಅಥವಾ ಲೋಪದೋಷಗಳು ಕಂಡುಬAದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿರುವುದು ಬೇಸರದ ಸಂಗತಿಯಾಗಿದ್ದು, ಈ ದುರ್ವ್ಯವಸ್ಥೆಗೆ ಕಡಿವಾಣ ಹಾಕಲು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಅಕ್ರಮ ಮದ್ಯ ಮಾರಾಟ ತಡೆಗೆ ಕೈಗೊಂಡಿರುವ ಕ್ರಮಗಳ ಕುರಿತು ಸಂಬAಧಪಟ್ಟ ಅಧಿಕಾರಿಗಳನ್ನು ಪ್ರಶ್ನಿಸಿದ ಅವರು, ಕೇವಲ ಜಾಗೃತಿ ಮೂಡಿಸುವುದಕ್ಕೆ ಸೀಮಿತವಾಗದೆ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಈ ಕುರಿತು ವ್ಯಾಪಕ ಜಾಗೃತಿ ಮೂಡಿಸಲಾಗಿದ್ದು, ಹಲವು ಪ್ರಕರಣಗಳನ್ನು ದಾಖಲಿಸಿ ಕ್ರಮ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ಗಡಿ ಭಾಗ ಹಾಗೂ ಗಣಿ ಬಾಧಿತ ಪ್ರದೇಶಗಳಲ್ಲಿ ವಾಸಿಸುತ್ತಿರುವ ಸಂತ್ರಸ್ತರನ್ನು ಶೀಘ್ರ ಸ್ಥಳಾಂತರಿಸಿ ಸೂಕ್ತ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸಬೇಕು. ಈ ಪ್ರಕ್ರಿಯೆ ಪೂರ್ಣಗೊಳಿಸಲು ಎಷ್ಟು ಕಾಲಾವಕಾಶ ಬೇಕಾಗುತ್ತದೆ ಎಂಬುದರ ಕುರಿತು ಮಾಹಿತಿ ಪಡೆದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಈಗಾಗಲೇ ನಿವೇಶನ ಗುರುತಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಗಣಿ ಬಾಧಿತ ಪ್ರದೇಶಗಳ ಜನರಿಗೆ ಯಾವುದೇ ಆರೋಗ್ಯ ಇಲಾಖೆಯ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, ತಿಂಗಳಿಗೆ ಸುಮಾರು 400ರಿಂದ 500 ಹೆರಿಗೆಗಳು ನಡೆಯುವ ಆಸ್ಪತ್ರೆಗಳಲ್ಲಿ ಸ್ವಚ್ಛತೆ ಕಾಪಾಡುವುದು ಅತ್ಯಂತ ಅಗತ್ಯ. ಆದರೆ ಆಸ್ಪತ್ರೆಗಳಲ್ಲಿ ಸ್ವಚ್ಛತೆಯ ಕೊರತೆ ಕಂಡುಬರುತ್ತಿರುವುದು ಬೇಸರದ ಸಂಗತಿ. ಅಲ್ಲದೆ, ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ಹೊರಗುತ್ತಿಗೆ ನೌಕರರಿಗೆ ಸಕಾಲದಲ್ಲಿ ವೇತನ ಪಾವತಿಸಬೇಕು ಎಂದು ನಿರ್ದೇಶನ ನೀಡಿದರು.
ಹಂಪಿ ವಿಶ್ವವಿದ್ಯಾಲಯದ ವಸತಿ ನಿಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ವಚ್ಛತೆಯ ಕೊರತೆ ಹಾಗೂ ಅಲ್ಲಿನ ಅವ್ಯವಸ್ಥೆ ಕಂಡು ಮನಸ್ಸಿಗೆ ನೋವಾಗಿದೆ. ಇಂತಹ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಇಂತಹ ಲೋಪಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಆಯೋಗದ ಅಧ್ಯಕ್ಷರು ತಾಕೀತು ಮಾಡಿದ ಅವರು, ಹಂಪಿ ವ್ಯಾಪ್ತಿಯಲ್ಲಿ ಸುಮಾರು 270 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದರೂ, ಅವುಗಳಲ್ಲಿ ಬಹುತೇಕವು ಕಾರ್ಯನಿರ್ವಹಿಸುತ್ತಿಲ್ಲ ಎಂಬ ಮಾಹಿತಿ ಇದೆ. ಸಂಬAಧಪಟ್ಟ ಅಧಿಕಾರಿಗಳು ಎಲ್ಲ ಕ್ಯಾಮೆರಾಗಳನ್ನು ಪರಿಶೀಲಿಸಿ ದುರಸ್ತಿಗೊಳಿಸುವುದರ ಜೊತೆಗೆ ಅವು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.
ಸಂಚಾರಿ ಕುರಿಗಾಹಿಗಳಿಗೆ ದೊರೆಯಬೇಕಾದ ಅಗತ್ಯ ಔಷಧಿಗಳು, ಗುರುತಿನ ಚೀಟಿಗಳು ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯಗಳು ಸಮರ್ಪಕವಾಗಿ ತಲುಪುತ್ತಿಲ್ಲ ಎಂಬ ಗಂಭೀರ ಆರೋಪಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಕುರಿಗಾಹಿಗಳ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿ ಅವರಿಗೆ ದೊರೆಯಬೇಕಾದ ಎಲ್ಲ ಸೌಲಭ್ಯಗಳನ್ನು ವಿಳಂಬವಿಲ್ಲದೆ ಒದಗಿಸಬೇಕು.
ಜಿಲ್ಲೆಯಲ್ಲಿ ದೇವದಾಸಿ ಮಹಿಳೆಯರಿಗೆ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ಸಮರ್ಪಕವಾಗಿ ತಲುಪುತ್ತಿಲ್ಲ ಎಂಬ ವ್ಯಾಪಕ ದೂರುಗಳಿವೆ. ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು ಎಂದು ತಾಕೀತು ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಂಬAಧಪಟ್ಟ ಅಧಿಕಾರಿಗಳು, ಹೊಸಪೇಟೆ ತಾಲೂಕಿನಲ್ಲಿ ಮೂರು ಎಕರೆ ಜಾಗ ಗುರುತಿಸಲಾಗಿದ್ದು, ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ವಸತಿ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕೃಷಿ ಇಲಾಖೆಯಲ್ಲಿ ನೇರಪಾವತಿ, ಹೊರಗುತ್ತಿಗೆ ಆಧಾರದಲ್ಲಿ 16 ತಿಂಗಳ ಕಾಲ ಕೆಲಸ ನಿರ್ವಹಿಸಿದ್ದರೂ ಈವರೆಗೆ ವೇತನ ಪಾವತಿಸಿಲ್ಲ ಎಂದು ನೊಂದ ಮಹಿಳೆಯರು ಅಧ್ಯಕ್ಷರ ಮುಂದೆ ತಮ್ಮ ಅಳಲು ತೋಡಿಕೊಂಡರು. ಈ ರೀತಿಯ ಪ್ರಕರಣಗಳಲ್ಲಿ ಮಹಿಳಾ ನೌಕರರಿಗೆ ಅನ್ಯಾಯವಾಗದಂತೆ ಸಂಬAಧಪಟ್ಟ ಅಧಿಕಾರಿಗಳು ತಕ್ಷಣ ಪರಿಶೀಲಿಸಿ ಬಾಕಿ ವೇತನ ಪಾವತಿಸಲು ಕ್ರಮ ಕೈಗೊಳ್ಳಬೇಕೆಂದು ಅಧ್ಯಕ್ಷರು ಸೂಚಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು ಸ್ಪಂದಿಸಿದ ಅಧಿಕಾರಿಗಳು ಈಗಾಗಲೇ 8 ತಿಂಗಳ ಬಾಕಿ ವೇತನ ಪಾವತಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನುಳಿದ ಬಾಕಿ ವೇತನ ಪಾವತಿಸಲಾಗುವುದು ಎಂದು ಮಾಹಿತಿ ನೀಡಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಸಿಇಓ ಗರಿಮಾ ಪನ್ವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ, ಮಹಿಳಾ ಆಯೋಗದ ಕಾರ್ಯದರ್ಶಿ ರೂಪ, ಉಪವಿಭಾಗಾಧಿಕಾರಿ ಕವಿತಾ ಇದ್ದರು.
*-*-*-*

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾವಸಾರ ಬ್ಯಾಂಕಿನ ನೂತನ ಅಧ್ಯಕ್ಷ ಅರವಿಂದ ಹಂಚಾಟೆ ಅವರಿಗೆ ಸನ್ಮಾನಇಂದು ಮಿಣಜಗಿ ಶ್ರೀ ಗುರುಪಾದೇಶ್ವರ ರಥೋತ್ಸವನಗರದಲ್ಲಿ ಹಣತೆ ಖರೀದಿಗೆ ಮುಗಿಬಿದ್ದ ಮಹಿಳೆಯರುಕೊಲ್ಲಾಪುರದ ಮಹಾಲಕ್ಷ್ಮೀ ಹಾಗೂ ಜ್ಯೋತಿಬಾ ದೇವರ ದರ್ಶನ ಪಡೆದ ಲಕ್ಷ್ಮೀ ಹೆಬ್ಬಾಳಕರ್ಸರ್ಕಾರ ಸತತವಾಗಿ ರೈತರಿಗೆ  ಅನ್ಯಾಯ ಮಾಡಿದೆ,ರೈತರ ಹೋರಾಟದ ಫಲ 3600/- ರೂ ಮೊದಲ ಕಂತು ನಿಗದಿ.ಮಹಿಳಾ ಸ್ಪಂದನ ಕಾರ್ಯಕ್ರಮ ಆಯೋಜನೆ ಕಡ್ಡಾಯ ಮಹಿಳೆಯರಿಗೆ ಸರ್ಕಾರಿ ಯೋಜನೆಗಳ ಅರಿವು ಮೂಡಿಸಿ : ನಾಗಲಕ್ಷ್ಮಿ ಚೌಧರಿಜೆಡಿಎಸ್‌ನ ಬೆಳಗಾವಿ ಮಹಾನಗರ ಜಿಲ್ಲಾಧ್ಯಕ್ಷರಾಗಿ ವಿಠ್ಠಲ ಗಡ್ಡಿ ನೇಮಕಮಹಿಳಾ ಸಮಸ್ಯೆಗಳ ನಿರ್ಲಕ್ಷ್ಯ ಸಹಿಸುವುದಿಲ್ಲ: ನಾಗಲಕ್ಷ್ಮೀ ಚೌಧರಿಪಿ ಕೆ ಪಿ ಎಸ್ ವಕ್ಕುಂದ ಅಧ್ಯಕ್ಷರಾಗಿ ಗಜದಂಡ ಮಲ್ಲೇಶಪ್ಪ ಸುತಗಟ್ಟಿ ಮೂರನೇ ಬಾರಿಗೆ ಅವಿರೋಧ ಆಯ್ಕೆ – ಉಪಾಧ್ಯಕ್ಷರಾಗಿ ಬಸನಗೌಡ ಹುಲೆಪ್ಪನವರ ಪ್ರಥಮ ಬಾರಿಗೆ ಅವಿರೋಧ ಆಯ್ಕೆಯುವಕರು ಹೆಚ್ಚಿನ ಸಂಖ್ಯೆಯಲ್ಲಿ ದೇಶಸೇವೆಗೆ ಆಕರ್ಷಿತರಾಗಲು ನಿರ್ಧಾರ ಸಹಕಾರಿ: ಜಗದೀಶ ಪೂಜೇರಿ