LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ


ಬಳ್ಳಾರಿ,ಆ.27 ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲಾö್ಯಶ್ ಫ್ಲಡ್ಸ್) ದುರಂತಕ್ಕೆ ಸಂಬAಧಿಸಿದAತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಾಗರಿಕರು ಯಾರಾದರೂ ನಾಪತ್ತೆಯಾಗಿದ್ದರೆ ಅಥವಾ ಸಂಪರ್ಕಕ್ಕೆ ಸಿಗದೇ ಇದ್ದಲ್ಲಿ, ತಕ್ಷಣವೇ ಅವರ ವಿವರಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರವು ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಕೇಂದ್ರ ಗೃಹ ಸಚಿವಾಲಯ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ರಾಜ್ಯ ಸರ್ಕಾರವು ಸತತ ಸಂಪರ್ಕದಲ್ಲಿದ್ದು, ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಲು ಮತ್ತು ನಾಪತ್ತೆಯಾದವರನ್ನು ಪತ್ತೆಹಚ್ಚಲು ಸಮರಪಾದಾದಿಯಲ್ಲಿ ಕ್ರಮ ಕೈಗೊಳ್ಳುತ್ತಿದೆ.
ನೇಪಾಳದಲ್ಲಿ ನಿಮ್ಮ ಕುಟುಂಬಸ್ಥರು, ಸ್ನೇಹಿತರು ಅಥವಾ ಪರಿಚಿತರು ನಾಪತ್ತೆಯಾಗಿದ್ದಾರೆಂದು ಶಂಕಿಸಲಾಗಿದ್ದರೆ, ಸಾರ್ವಜನಿಕರು ನಾಪತ್ತೆಯಾದ ವ್ಯಕ್ತಿಯ ಪೂರ್ಣ ಹೆಸರು, ಮೊಬೈಲ್ ಸಂಖ್ಯೆ, ಕೊನೆಯದಾಗಿ ಸಂಪರ್ಕಿಸಿದ ಸ್ಥಳ ಮತ್ತು ಸಮಯ ಹಾಗೂ ಖಾಯಂ ವಿಳಾಸದ ವಿವರಗಳನ್ನು ಸರ್ಕಾರಕ್ಕೆ ತಕ್ಷಣವೇ ಒದಗಿಸಲು ಕೋರಲಾಗಿದೆ.
ಈ ವಿವರಗಳನ್ನು ನಮೂದಿಸಲು ರಾಜ್ಯ ಸರ್ಕಾರವು ವಿಶೇಷ ಗೂಗಲ್ ಫಾರ್ಮ್ (docs.google.com/forms/d/1gnw8B) ಲಿಂಕ್ ಅನ್ನು ಸಹ ಒದಗಿಸಿದೆ.
ಸಂತ್ರಸ್ತರು ಮತ್ತು ಅವರ ಕುಟುಂಬಸ್ಥರ ನೆರವಿಗಾಗಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ 24*7 ಸಹಾಯವಾಣಿ ತೆರೆದಿದ್ದು, ಸಾರ್ವಜನಿಕರು 1070 (ಟೋಲ್ ಫ್ರೀ) ಅಥವಾ 080-22253707 ಸಂಖ್ಯೆಗೆ ಕರೆ ಮಾಡಬಹುದು. ಇಮೇಲ್ ಮೂಲಕ ಮಾಹಿತಿ ನೀಡಲು [email protected] ವಿಳಾಸಕ್ಕೆ ಕಳುಹಿಸಬಹುದಾಗಿದೆ.
ಅಲ್ಲದೆ, ನೇಪಾಳದಲ್ಲಿ ಸಿಲುಕಿರುವ ಭಾರತೀಯರಿಗೆ ತುರ್ತು ನೆರವು ನೀಡಲು ಅಲ್ಲಿನ ಭಾರತೀಯ ರಾಯಭಾರ ಕಚೇರಿಯು ತುರ್ತು ವಾಟ್ಸಾಪ್ ಹಾಗೂ ಕರೆ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು +977 9851316807, +977 9709107500 ಅಥವಾ +977 9810326117 ಸಂಖ್ಯೆಗಳನ್ನು ನೇರವಾಗಿ ಅಥವಾ ವಾಟ್ಸಾಪ್ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಲು ಹಾಗೂ ನೆರವು ಕೋರಲು ಪ್ರಕಟಣೆಯಲ್ಲಿ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್