Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸ ನಾಯಕನಟ ಭಾರ್ಗವ್ ಕೃಷ್ಣ ಚಿತ್ರ  ಓಂ ಶಿವಂ ಲಿರಿಕಲ್ ಸಾಂಗ್ ರಿಲೀಜ್


     ಕನ್ನಡದಲ್ಲಿ ನೂತನ ನಾಯಕನಟರ ಪಟ್ಟಿಗೆ ಈಗ ಭಾರ್ಗವ್ ಕೃಷ್ಣ  ಸೇರಿದ್ದಾರೆ. ಅವನ ನಟನೆಯ ಚೊಚ್ಚಲ ಚಿತ್ರ 'ಓಂ ಶಿವಂ'ನ ಲಿರಿಕಲ್ ಸಾಂಗ್ ಇತ್ತೀಚಿಗೆ ಬಿಡುಗಡೆಯಾಯಿತು.


     ಭಾರ್ಗವ್ ಕೃಷ್ಣ ಅವರ ಅಜ್ಜಿ, ತಾತಾ  ಈ ಹಾಡನ್ನು ಬಿಡುಗಡೆ ಮಾಡಿ ಮೊಮ್ಮಗನ ಮೊದಲ ಚಿತ್ರಕ್ಕೆ ಶುಭ ಹಾರೈಸಿದರು.  ಭಾರ್ಗವ್ ಕೃಷ್ಣ ಅವರ ತಂದೆ ಕೃಷ್ಣ ಕೆ ಎನ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ‌.

 ‌

     "ಆಲ್ವಿನ್ ಅವರು ಒಳ್ಳೆಯ ಕಥೆ ಸಿದ್ದ ಮಾಡಿಕೊಂಡು ಬಂದು ಕಥೆ ಹೇಳಿದರು. ನಾನು ಕಥೆ ಚೆನ್ನಾಗಿದೆ. ನಾಯಕನನ್ನು ಹುಡುಕಿ. ಚಿತ್ರ ಆರಂಭಿಸೋಣ ಎಂದೆ. ಅದಕ್ಕೆ ಆಲ್ವಿನ್ ಅವರು ನಿಮ್ಮ ಮಗ ಭಾರ್ಗವ್, ನನ್ನ ಕಥೆ ಗೆ ಸರಿ ಹೊಂದುತ್ತಾರೆ. ಅವರೆ ನಮ್ಮ ಚಿತ್ರದ ನಾಯಕ ಎಂದರು. ಈಗ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಮುಂದಿನ ತಿಂಗಳಲ್ಲಿ ಬಿಡುಗಡೆ ಮಾಡುವ ಪ್ರಯತ್ನ ನಡೆಯುತ್ತಿದೆ" ಎಂದರು ನಿರ್ಮಾಪಕ ಕೃಷ್ಣ.


     "ರಾಜ್ ಬಹದ್ದೂರ್" ಚಿತ್ರದ ನಂತರ ನಾನು ನಿರ್ದೇಶಿಸಿರುವ ಎರಡನೇ ಚಿತ್ರವಿದು" ಎಂದು ಮಾತನಾಡಿದ ನಿರ್ದೇಶಕ ಆಲ್ವಿನ್ "ಓಂ ಶಿವಂ' ಲವ್ ಜಾನರ್ ನ ಚಿತ್ರ. ಆದರೆ ಚಿತ್ರದಲ್ಲಿ ಬರೀ ಲವ್ ಮಾತ್ರ ಇಲ್ಲ. ಪ್ರೇಕ್ಷಕರಿಗೆ ಬೇಕಾದ ಎಲ್ಲಾ ಅಂಶಗಳು ಇದೆ. ನಮ್ಮ ಚಿತ್ರಕ್ಕೆ ಇಪ್ಪತ್ತೊಂದು ವಯಸ್ಸಿನ ನಾಯಕ ಬೇಕಾಗಿತ್ತು. ಭಾರ್ಗವ್ ಅವರಿಗೂ ಅಷ್ಟೇ ವಯಸ್ಸು. ಹಾಗಾಗಿ ಅವರನ್ನೇ ಈ ಚಿತ್ರದ ನಾಯಕನನ್ನಾಗಿ ಆಯ್ಕೆ ಮಾಡಲಾಯಿತು. ಮೊದಲ ಪ್ರಯತ್ನದಲ್ಲೇ ಭಾರ್ಗವ್ ಚೆನ್ನಾಗಿ ಅಭಿನಯಿಸಿದ್ದಾರೆ. ನಾಲ್ಕು ಹಾಡುಗಳು, ಅದ್ದೂರಿ ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ.  ಇಡೀ ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ" ಎಂದರು.


    "ಮೊದಲು ನಾನು ನನ್ನ ತಂದೆಗೆ ಧನ್ಯವಾದ ತಿಳಿಸುತ್ತೇನೆ. ಆಲ್ವಿನ್ ಅವರು ಉತ್ತಮ ಕಥೆ ಮಾಡಿಕೊಂಡಿದ್ದಾರೆ. ಮೊದಲ ಚಿತ್ರವಾಗಿರುವುದರಿಂದ ಸಾಕಷ್ಟು ತಯಾರಿ ಮಾಡಿಕೊಂಡೇ ಬಂದಿದ್ದೇನೆ" ಎಂದು ನಾಯಕ ಭಾರ್ಗವ್ ಕೃಷ್ಣ ತಿಳಿಸಿದರು.


    ನಾಯಕಿ ವಿರಾಣಿಕ ಶೆಟ್ಟಿ "ಅಂಜಲಿ ನನ್ನ ಪಾತ್ರದ ಹೆಸರು" ಎಂದು ಪಾತ್ರದ ಕುರಿತು  ಹೇಳಿದರು. ನಟರಾದ ಕಾಕ್ರೋಜ್ ಸುಧೀ, ಯಶ್ ಶೆಟ್ಟಿ, ವರ್ಧನ್, ನಟಿಯರಾದ ಅಪೂರ್ವ, ಲಕ್ಷ್ಮೀ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಸಂಗೀತ ನಿರ್ದೇಶಕ ವಿಜಯ್ ಯಾರ್ಡ್ಲೆ, ಛಾಯಾಗ್ರಾಹಕ ವೀರೇಶ್ ಹಾಗೂ ಸಾಹಸ ನಿರ್ದೇಶಕ ಕೌರವ ವೆಂಕಟೇಶ್ ಸೇರಿದಂತೆ ಅನೇಕ ತಂತ್ರಜ್ಞರು ಮಾಹಿತಿ ನೀಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ