Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಟಿಯು ಪರೀಕ್ಷಾ ಫಲಿತಾಂಶ ಪ್ರಕಟಣೆಯಲ್ಲಿ ಹೊಸ ದಾಖಲೆ

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) 25 ವರ್ಷಗಳ ಇತಿಹಾಸದಲ್ಲಿಯೇ ಪರೀಕ್ಷಾ ಫಲಿತಾಂಶ ಪ್ರಕಟಣೆಯಲ್ಲಿ ಹೊಸ ದಾಖಲೆ ಮಾಡಿದೆ. ಪರೀಕ್ಷೆ ಮುಗಿದ ಕೇವಲ ಮೂರು ಗಂಟೆಗಳಲ್ಲೇ ಫಲಿತಾಂಶ ಪ್ರಕಟಿಸಿ ಹೊಸ ದಾಖಲೆ ಬರೆದಿದೆ.


ಯುಟಿಯು ಅಡಿ ಅಂತಿಮ ವರ್ಷದ ಬಿ.ಇ./ಬಿ.ಟೆಕ್./ಬಿ.ಆರ್ಕ್/ಬಿ.ಪ್ಲಾನ್ ಸೆಮಿಸ್ಟರ್ ಪರೀಕ್ಷೆ ಮುಗಿದ ಕೇವಲ ಮೂರೇ ಗಂಟೆಗಳಲ್ಲಿ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಣೆ ಮಾಡಿ ಗಮನ ಸೆಳೆದಿದೆ.


ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿದ್ಯಾಶಂಕರ, ಫಲಿತಾಂಶವನ್ನು ಬೇಗ ಪ್ರಕಟಣೆ ಮಾಡುವುದರಿಂದ ವಿದ್ಯಾರ್ಥಿಗಳಿಗೆ ವಿವಿಧ ಕ್ಷೇತ್ರಗಳ ವಿಭಾಗದಲ್ಲಿ ಉದ್ಯೋಗ ಹಾಗೂ ಉನ್ನತ ಶಿಕ್ಷಣದ ವಿದ್ಯಾಭ್ಯಾಸ ಮತ್ತು ಮುಂದಿನ ಭವಿಷ್ಯಕ್ಕೆ ತುಂಬಾ ಅನುಕೂಲವಾಗುತ್ತದೆ. ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ವಿಟಿಯು ಆಡಳಿತ, ಶೈಕ್ಷಣಿಕ, ಪರೀಕ್ಷೆ, ಸಂಶೋಧಾನಾ ವಿಭಾಗದಲ್ಲಿ ಕ್ರಾಂತಿಕಾರಕ ಸುಧಾರಣೆಗಳನ್ನು ತಂದು ಈ ರೀತಿ ವಿನೂತನ ಪ್ರಯೋಗ ಮಾಡಲಾಗಿದೆ ಎಂದು ತಿಳಿಸಿದ್ದಾರೆ.


ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಎಲ್ಲ ಇಂಜಿನಿಯರಿಂಗ್ ಮಹಾವಿದ್ಯಾಲಯಗಳ ಅಂತಿಮ ಸೆಮಿಸ್ಟರ್​​ನಲ್ಲಿ 42,323 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಕೊನೆಯ ಪರೀಕ್ಷೆ ಇಂದು ಮೇ 30 ಗುರುವಾರ ಸಂಜೆ 5.30ಕ್ಕೆ ಮುಗಿಯಿತು. ಪರೀಕ್ಷೆ ಮುಗಿದ ಕೇವಲ ಮೂರು ಗಂಟೆ ಒಳಗಾಗಿ ಅಂದರೆ ರಾತ್ರಿ 8.30ಕ್ಕೆ ವಿಟಿಯು ಫಲಿತಾಂಶವನ್ನು ಪ್ರಕಟಣೆ ಮಾಡಿದೆ. ಜೊತೆಗೆ ವಾಟ್ಸಾಪ್ ಮೂಲಕ ಫಲಿತಾಂಶವನ್ನು ನೇರವಾಗಿ ವಿದ್ಯಾರ್ಥಿಗಳಿಗೆ ತಲುಪುವಂತೆ ಮಾಡಿದೆ.


ಎಲ್ಲ ಸೆಮಿಸ್ಟರ್ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿ ಪದವಿಯನ್ನು ಯಶಸ್ವಿಯಾಗಿ ಮುಗಿಸಿದ ವಿದ್ಯಾರ್ಥಿಗಳು ಪ್ರೋವಿಜನಲ್ ಡಿಗ್ರಿ ಸರ್ಟಿಫಿಕೇಟ್ (ಪಿಡಿಸಿ) ಗಳನ್ನು ಜೂನ್ 3 ಸೋಮವಾರದಿಂದ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಪಡೆಯಬಹುದಾಗಿದೆ ಎಂದು ವಿಟಿಯು ಕುಲಪತಿಗಳು ತಿಳಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ