Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ರಿಕೆಗಳು ಸಮಾಜದ ಪ್ರತಿಬಿಂಬಗಳು : ಶ್ರೀಶೈಲ ಶ್ರೀಗಳು

ಸಿರುಗುಪ್ಪ.ಜು.15 : ಪತ್ರಿಕೆಗಳು ಸಮಾಜದ ಪ್ರತಿಬಿಂಬಗಳು ಅವು ಸಮಾಜದಲ್ಲಿ ನಡೆಯುವ ಘಟನೆಗಳು, ಸಮಸ್ಯೆಗಳು ಮತ್ತು ಜನರ ಜೀವನದ ವಿವಿಧ ಅಂಶಗಳನ್ನು ಪ್ರತಿಬಿಂಬಿಸುತ್ತವೆ ಎಂದು ಶ್ರೀಶೈಲ ಪೀಠದ  ಜಗದ್ಗುರು ಡಾ.ಚನ್ನಸಿದ್ದರಾಮ  ಪಂಡಿತಾರಾಧ್ಯ ಶಿವಾಚಾರ್ಯರು ತಿಳಿಸಿದರು.


  ಬಳ್ಳಾರಿ ಜಿಲ್ಲೆ ಸಿರುಗುಪ್ಪ ನಗರದಲ್ಲಿರುವ ವಿಜಯನಗರವಾಣಿ ಕಛೇರಿಗೆ ಆಗಮಿಸಿದ ಶ್ರೀಗಳು ಪಾದಪೂಜೆ ಸ್ವೀಕರಿಸಿ ಮಾತನಾಡಿದ ಅವರು ಪತ್ರಿಕೆಗಳು ಸಮಾಜದಲ್ಲಿ ನಡೆಯುವ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಹಾಗೂ ಸಾಂಸ್ಕೃತಿಕ ಘಟನೆಗಳನ್ನು ಜನರಿಗೆ ತಿಳಿಸುತ್ತವೆ. ಸಮಾಜದಲ್ಲಿನ ಸಮಸ್ಯೆಗಳು, ದೌರ್ಜನ್ಯಗಳು ಹಾಗೂ ಅನ್ಯಾಯಗಳನ್ನು  ವರದಿ ಮಾಡುವ ಮೂಲಕ ಸಮಾಜದ ಗಮನಕ್ಕೆ ತರುತ್ತವೆ, ಸಮಾಜದ ಮೌಲ್ಯಗಳು, ನಂಬಿಕೆಗಳು ಮತ್ತು ಸಂಪ್ರದಾಯಗಳನ್ನು  ಪ್ರತಿಬಿಂಬಿಸುತ್ತವೆ ಅಲ್ಲದೆ ಪಸ್ತುತ ವಿಷಯಗಳ ಬಗ್ಗೆ ಮಾಹಿತಿಯನ್ನು ಒದಗಿಸುವ ಮೂಲಕ  ಓದುಗರ ಅಭಿಪ್ರಾಯಗಳನ್ನು ರೂಪಿಸಲು ಸಹಾಯ ಮಾಡುತ್ತವೆ. ಪತ್ರಿಕೆಗಳು ಸಮಾಜದ ಪ್ರಮುಖ ಅಂಗವಾಗಿದ್ದು, ಸಮಾಜದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.


ರಾಜಕೀಯ ನಾಯಕರಿಗೆ ಪತ್ರಿಕೆಗಳು ಅಗತ್ಯವಾಗಿ ಬೇಕು,  ತಪ್ಪು, ಒಪ್ಪುಗಳನ್ನು ತಿದ್ದಿ ತೀಡಿ ಸಮರ್ಥ ನಾಯಕತ್ವ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.  ಅದರೊಟ್ಟಿಗೆ ಸಮಾಜದ ಸ್ವಾಸ್ಥ್ಯವನ್ನು  ಕಾಪಾಡುವಲ್ಲಿ ಮಹತ್ತರ ಪಾತ್ರವನ್ನು ನಿಭಾಯಿಸುತ್ತವೆ,   ಪತ್ರಿಕೆಗಳು ಸಮಾಜದ ಸಮಸ್ಯೆಗಳನ್ನು ಪ್ರತಿಬಿಂಬಿಸಿ ಅವುಗಳನ್ನು ಪರಿಹರಿಸುವ ಕಾರ್ಯವನ್ನು ಮಾಡುತ್ತಿದ್ದು, ಕಾರ್ಯಾಂಗ ನ್ಯಾಯಾಂಗ ಮತ್ತು ಶಾಸಕಾಂಗ ಕ್ಕಿಂತಲೂ   ಪತ್ರಿಕಾ ರಂಗ ಅತ್ಯಂತ ಬಲಿಷ್ಠ ವಾದದ್ದು  ಮಾಧ್ಯಮ ರಂಗಕ್ಕೆ ಅದರಲ್ಲೂ ಮುದ್ರಣ ಮಾಧ್ಯಮಕ್ಕೆ  ಎಂದಿಗೂ ಉತ್ತಮವಾದ ಭವಿಷ್ಯವಿದೆ ಎಂದು ಹೇಳಿದರು.


 ಈ ಸಂದರ್ಭದಲ್ಲಿ ವಿಜಯನಗರವಾಣಿ ದಿನಪತ್ರಿಕೆ ಸಂಪಾದಕ ಬಿ.ರಮೇಶ, ಗುರುಬಸವ ಮಠದ ಬಸವಭೂಷಣ ಸ್ವಾಮೀಜಿ ಮತ್ತು ಸಾರ್ವಜನಿಕರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ