LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಾವೇರಿ ರುದ್ರ ನರ್ತನ: ಪ್ರವಾಸಿಗರಿಗೆ ನೋ ಎಂಟ್ರಿ

ಚಾಮರಾಜನಗರ: ಭಾರತದ ನಯಾಗರ ಎಂದೇ ಕರೆಯುವ ಕರ್ನಾಟಕ ಮತ್ತು ತಮಿಳುನಾಡು ಗಡಿಯಾದ ಹನೂರು ತಾಲೂಕಿನ ಹೊಗೆನಕಲ್ ಜಲಪಾತದಲ್ಲಿ ಅಪಾಯ ಮಟ್ಟದಲ್ಲಿ ನೀರು ಭೋರ್ಗರೆಯುತ್ತಿದೆ. ಕಬಿನಿ ಹೊರಹರಿವು ಮತ್ತು ಭಾರಿ ಮಳೆಯಿಂದ ಹೊಗೆನಕಲ್​ನಲ್ಲಿ ಕಾವೇರಿ ರೌದ್ರ ನರ್ತನವಾಡುತ್ತಿದ್ದಾಳೆ. ಮುನ್ನೆಚ್ಚರಿಕೆ ಕ್ರಮವಾಗಿ ಕಾವೇರಿ ವನ್ಯಜೀವಿಧಾಮವು ಜು.20 ರಿಂದ ಹೊಗೆನಕಲ್​ಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿದೆ.

ಈಗಾಗಲೇ ಕಬಿನಿಯಿಂದ 70 ಸಾವಿರ ಕ್ಯೂಸೆಕ್ ಹೊರಹರಿವಿದ್ದು ಹೊಗೆನಕಲ್​ನಲ್ಲಿ ಕಾವೇರಿ ರಭಸದಿಂದ ಹರಿಯುತ್ತಿದೆ. ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿರುವುದರಿಂದ ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ‌. ನೀರಿನ ಹರಿವು ಕಡಿಮೆಯಾಗುವ ತನಕ ಹೊಗೆನಕಲ್​ಗೆ ಪ್ರವಾಸಿಗರಿಗೆ ಪ್ರವೇಶ ಇರುವುದಿಲ್ಲ. ತಾತ್ಕಾಲಿಕ ನಿರ್ಬಂಧ ಇದ್ದು ಅದಾದ ಬಳಿಕ ಮುಂದಿನ ಕ್ರಮ‌ ಕೈಗೊಳ್ಳುತ್ತೇವೆ ಎಂದು ಹೊಗೆನಕಲ್ ಆರ್​ಎಫ್​ಒ ಸಂಪತ್ ಪಟೇಲ್ ತಿಳಿಸಿದ್ದಾರೆ.


ಕರ್ನಾಟಕ, ತಮಿಳುನಾಡು ಎರಡೂ ರಾಜ್ಯದ ಸಾವಿರಾರು ಪ್ರವಾಸಿಗರು ನಿತ್ಯ ಭೇಟಿ ಕೊಡುವ ಜನಪ್ರಿಯ ಜಲಪಾತ ಇದಾಗಿದ್ದು, ಕಳೆದ 4 ದಿನದಿಂದ ತಮಿಳುನಾಡು ಭಾಗದಲ್ಲಿ ಬೋಟಿಂಗ್, ಪ್ರವಾಸಿಗರಿಗೆ ನಿರ್ಬಂಧ ಹೇರಿದೆ. ಜು.20 ರಿಂದ ಕರ್ನಾಟಕದ ಭಾಗದಲ್ಲೂ ಪ್ರವಾಸಿಗರಿಗೆ ನಿರ್ಬಂಧ ಇರಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್