Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಪದ್ಮ ಪ್ರಶಸ್ತಿಗಳ ಆಯ್ಕೆಗಾಗಿ ನಾಮನಿರ್ದೇಶನ ಪ್ರಕ್ರಿಯೆ 2025 ಆರಂಭ

ನವದೆಹಲಿ02: ಪದ್ಮ ಪ್ರಶಸ್ತಿ 2025ಕ್ಕಾಗಿ ಆನ್‌ಲೈನ್ ನಾಮ ನಿರ್ದೇಶನ/ಶಿಫಾರಸು ಪ್ರಕ್ರಿಯೆ ಬುಧವಾರದಿಂದ ಪ್ರಾರಂಭವಾಗಿದೆ. ಸೆಪ್ಟೆಂಬರ್ 15 ಕೊನೆಯ ದಿನಾಂಕವಾಗಿದೆ. ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ, ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾಗಿವೆ. 1954 ರಲ್ಲಿ ಈ ಪ್ತಶಸ್ತಿಗಳನ್ನು ನೀಡಲು ಆರಂಭಿಸಲಾಗಿದ್ದು, ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. 'ವಿಶಿಷ್ಟ ಕೆಲಸವನ್ನು' ಗುರುತಿಸುವುದು ಪದ್ಮ ಪ್ರಶಸ್ತಿಗಳ ಆಶಯವಾಗಿದೆ. ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆಗಳಂತಹ ಎಲ್ಲ ಕ್ಷೇತ್ರಗಳಲ್ಲಿನ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು ಹಾಗೂ ಸೇವೆಗಳಿಗಾಗಿ ಈ ಪ್ರಶಸ್ತಿ ನೀಡಲಾಗುತ್ತದೆ.


ಸಮುದಾಯ, ಉದ್ಯೋಗ, ಸ್ಥಾನ ಅಥವಾ ಲಿಂಗದ ಭೇದವಿಲ್ಲದ ಎಲ್ಲ ವ್ಯಕ್ತಿಗಳು ಈ ಪ್ರಶಸ್ತಿಗಳಿಗೆ ಅರ್ಹರಾಗಿರುತ್ತಾರೆ. ಆದಾಗ್ಯೂ, ವೈದ್ಯರು ಮತ್ತು ವಿಜ್ಞಾನಿಗಳನ್ನು ಹೊರತುಪಡಿಸಿ ಪಿಎಸ್​​​​​​​ಯುಗಳಲ್ಲಿ ಕೆಲಸ ಮಾಡುವವರು ಸೇರಿದಂತೆ ಸರ್ಕಾರಿ ನೌಕರರು ಪದ್ಮ ಪ್ರಶಸ್ತಿಗಳಿಗೆ ಅರ್ಹರಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪದ್ಮ ಪ್ರಶಸ್ತಿಗಳನ್ನು 'ಜನರ ಪದ್ಮ'ವನ್ನಾಗಿ ಮಾಡಲು ಬದ್ಧವಾಗಿದೆ ಎಂದು ಸಮರ್ಥಿಸಿಕೊಂಡಿದೆ.


ಪ್ರಶಸ್ತಿಗಳಿಗೆ ನಾಮ ನಿರ್ದೇಶನ, ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್‌ನಲ್ಲಿ ಆನ್‌ಲೈನ್‌ನಲ್ಲಿ ಸ್ವೀಕರಿಸಲಾಗುತ್ತದೆ. ಗೃಹ ಸಚಿವಾಲಯದ ಪ್ರಕಾರ, ಮಹಿಳೆಯರು, ಸಮಾಜದ ದುರ್ಬಲ ವರ್ಗಗಳು, ಎಸ್‌ಸಿ ಮತ್ತು ಎಸ್‌ಟಿಗಳು, ದಿವ್ಯಾಂಗ ವ್ಯಕ್ತಿಗಳು ಮತ್ತು ಸಮಾಜಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪ್ರತಿಭಾವಂತ ವ್ಯಕ್ತಿಗಳನ್ನು ಗುರುತಿಸಲು ಸಂಘಟಿತ ಪ್ರಯತ್ನಗಳನ್ನು ಮಾಡಲಾಗುತ್ತದೆ.


ನಾಮ ನಿರ್ದೇಶನಗಳು, ಶಿಫಾರಸುಗಳು ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್‌ನಲ್ಲಿ ಲಭ್ಯವಿರುವ ಸ್ವರೂಪದಲ್ಲಿ ನಿರ್ದಿಷ್ಟಪಡಿಸಿದ ಎಲ್ಲ ಸಂಬಂಧಿತ ವಿವರಗಳನ್ನು ಒಳಗೊಂಡಿರಬೇಕು, ನಿರೂಪಣೆಯ ರೂಪದಲ್ಲಿ ಉಲ್ಲೇಖವನ್ನು ಒಳಗೊಂಡಂತೆ, ಶಿಫಾರಸು ಮಾಡಿದ ವ್ಯಕ್ತಿಗಳ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳನ್ನು ಸ್ಪಷ್ಟವಾಗಿ ಹೊರತರುತ್ತದೆ. ಈ ಸಂಬಂಧ ವಿವರಗಳು ಗೃಹ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಮತ್ತು ಪದ್ಮ ಪ್ರಶಸ್ತಿಗಳ ಪೋರ್ಟಲ್‌ನಲ್ಲಿ 'ಪ್ರಶಸ್ತಿಗಳು ಮತ್ತು ಪದಕಗಳು' ಶೀರ್ಷಿಕೆಯಡಿ ಲಭ್ಯವಿದೆ.


'

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಆಯೋಜನೆ: ಸಚಿವ ಸಂತೋಷ ಎಸ್. ಲಾಡ್ಸಮಾಜದ ಮುಖ್ಯ ವಾಹಿನಿಗೆ ವಿಕಲ ಚೇತನರು ಮುಂದೆ ಬರಬೇಕು : ಬಾಲಚಂದ್ರ ಜಾರಕಿಹೊಳಿಶ್ರೀ ಸಾಯಿ ಕಾಲೇಜಿನ ಶಿಬಿರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಕನ್ನಡ ಕಟ್ಟುವಲ್ಲಿ ಧಾರವಾಡದ ಧುರೀಣರ ಕೊಡುಗೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ವಿಧಾನ ಪರಿಷತ್ ಸದಸ್ಯ  ಸ್ಥಾನಕ್ಕೆ ಐದನೇ ಬಾರಿ ಆಯ್ಕೆಯಾದ ಶಶೀಲ್. ಜಿ. ನಮೋಶಿ ಅವರಿಗೆ ಹೊಸಪೇಟೆ ಯಲ್ಲಿ ಅದ್ಧೂರಿ ಸ್ವಾಗತ*ಬಿಜೆಪಿ ಮೋರ್ಚಾ ಪದಾಧಿಕಾರಿಗಳ ಮಹತ್ವದ ಸಭೆ*ಮಹಿಳಾ ಸಾಹಿತಿಗಳ ನಿರ್ಲಕ್ಷ್ಯ ಖಂಡನೀಯ-ಡಾ.ಸುಜಾತಾ ಚಲವಾದಿವಿಶ್ವವಿದ್ಯಾಲಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವಿಶ್ವವಿದ್ಯಾಲಯ ಬಾಸ್ಕೆಟ್‌ಬಾಲ್ ತಂಡಕ್ಕೆ ತನ್ವೀರ್ ಆಯ್ಕೆಶ್ರೀ ವಿಶ್ವಗುರು ಸೌಹಾರ್ದ ಸೊಸೈಟಿ  ಅಧ್ಯಕ್ಷರಾಗಿ ಅರವಿಂದ ಬಡಕುಂದ್ರಿ, ಉಪಾಧ್ಯಕ್ಷರಾಗಿ ಬರಮಪ್ಪ ನಾಗನೂರ ಆಯ್ಕೆ.ಹತ್ತು ವರ್ಷಗಳಿಂದ ಪರಿಹಾರಕ್ಕಾಗಿ ಹೋರಾಟ: 95 ರೈತರಿಗೆ ₹54 ಕೋಟಿ ರೂ. ವಿತರಣೆ