LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಉತ್ತರ ಕರ್ನಾಟಕದ ಉಡಾಳ

      ಯೋಗರಾಜ್ ಸಿನಿಮಾಸ್ ಹಾಗೂ ರವಿ ಶಾಮನೂರು ಫಿಲಂಸ್ ಲಾಂಛನದಲ್ಲಿ ದಾವಣಗೆರೆಯ ರವಿ ಶಾಮನೂರು ಹಾಗೂ ಯೋಗರಾಜ್ ಭಟ್ ಅವರು ನಿರ್ಮಿಸಿರುವ, ಅಮೋಲ್ ಪಾಟೀಲ್ ನಿರ್ದೇಶನದಲ್ಲಿ ಪೃಥ್ವಿ ಶಾಮನೂರು ನಾಯಕನಾಗಿ ನಟಿಸಿರುವ  'ಉಡಾಳ' ಚಿತ್ರದ ಟೀಸರ್ ಬಿಡುಗಡೆಯಾಗಿದೆ.

     ಉತ್ತರ ಕರ್ನಾಟಕದ ಹಿನ್ನೆಲೆ ಧ್ವನಿಯಲ್ಲಿ  ಮೂಡಿಬಂದಿರುವ

'ಉಡಾಳ' ಚಿತ್ರದ ಟೀಸರ್

 ಸರಿಗಮ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆ ಮಾಡಲಾಗಿದೆ.

     ಚಿತ್ರೀಕರಣ ಹಾಗೂ ನಂತರದ ಚಟುವಟಿಕೆಗಳನ್ನು ಪೂರ್ಣಗೊಳಿಸಿರುವ 'ಉಡಾಳ' ತೆರೆಗೆ ಬರಲು ಸಿದ್ದವಾಗಿದ್ದಾನೆ. ಇದೊಂದು ಉತ್ತರ ಕರ್ನಾಟಕ ಭಾಗದ ಚಿತ್ರವಾಗಿದ್ದು, ಇಡೀ ಚಿತ್ರೀಕರಣ ವಿಜಯಪುರದಲ್ಲೇ ನಡೆದಿದೆ.

     ಪದವಿಪೂರ್ವ ಚಿತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ಪೃಥ್ವಿ ಶಾಮನೂರು 'ಉಡಾಳ' ಚಿತ್ರದ ನಾಯಕನಾಗಿದ್ದಾರೆ. ಈ ಚಿತ್ರದಲ್ಲಿ ಪೃಥ್ವಿ ಗೈಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹೃತಿಕ ಶ್ರೀನಿವಾಸ್ ನಾಯಕಿ. ಬಲ ರಾಜ್ವಾಡಿ, ಮಾಳು ನಿಪ್ನಾಳ್, ಹರೀಶ್ ಹಿರಿಯೂರು, ಬಿರಾದರ್, ಸುಮಿತ್ ಸಂಕೋಜಿ,  ವಾದಿರಾಜ ಬಬ್ಲಾದಿ, ಪ್ರವೀಣ್ ಗಸ್ತಿ, ದಯಾನಂದ ಬೀಳಗಿ, ರೇಣುಕ, ಶ್ರೀಧರ್, ದಾನಪ್ಪ, ಶಿಲ್ಪ ಶಾಂತಕುಮಾರ್, ಸೋನಿಯಾ ಮುಂತಾದವರ ತಾರಾಬಳಗವಿದೆ.

     ಯೋಗರಾಜ್ ಭಟ್ ಅವರ ಜೊತೆಗೆ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಮೋಲ್ ಪಾಟೀಲ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ದಾವಣಗೆರೆಯ ರವಿ ಶಾಮನೂರು ಹಾಗೂ ಯೋಗರಾಜ್ ಭಟ್ ಮತ್ತೆ ಈ ಚಿತ್ರಕ್ಕಾಗಿ ಹಣ ಹೂಡಿದ್ದಾರೆ.

      ಯೋಗರಾಜ್ ಭಟ್ ಅವರು ಬರೆದಿರುವ ಐದು ಹಾಡುಗಳು ಚಿತ್ರದಲ್ಲಿದ್ದು, ಚೇತನ್ ಡ್ಯಾವಿ ಸಂಗೀತ ನೀಡಿದ್ದಾರೆ. ಕೃಷ್ಣಂ ಪ್ರಣಯ ಸಖಿ ಚಿತ್ರದ

'ದ್ವಾಪರ' ಹಾಡಿನ ಖ್ಯಾತಿಯ ಜಸ್ಕರ್ಣ್ ಸಿಂಗ್, ಉತ್ತರ ಕರ್ನಾಟಕದ ಮಾಳು ನಿಫ್ನಾಳ್, ಬಾಳು ಬೆಳಗುಂದಿ, ಕರಿಬಸವ, ಸೃಷ್ಟಿ ಶಾಮನೂರ್ ಮತ್ತು ಚೇತನ್ ಸೋಸ್ಕರವರು ಹಾಡಿದ್ದು, ಶಿವಶಂಕರ್ ನೂರಂಬಡ ಛಾಯಾಗ್ರಹಣ, ಮಧು ತುಂಬಕೆರೆ ಸಂಕಲನ, ಕಾಂತಾರ ಖ್ಯಾತಿಯ ಅರ್ಜುನ್ ರಾಜ್, ವಿನೋದ್ ಸಾಹಸ ನಿರ್ದೇಶನ ಹಾಗೂ ಭಜರಂಗಿ ಮೋಹನ್, ರಘು ಅವರ ನೃತ್ಯ ನಿರ್ದೇಶನ ಹಾಗೂ ವೀರೇಶ್ ಪಿ‌.ಎಂ. ಸಹ ನಿರ್ದೇಶನ 'ಉಡಾಳ' ಚಿತ್ರಕ್ಕಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್