LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಆಕ್ಷೇಪಾರ್ಹ ಟ್ವೀಟ್ ಪ್ರಕರಣ: ಜೆ.ಪಿ.ನಡ್ಡಾ, ವಿಜಯೇಂದ್ರ, ಮಾಳವೀಯಗೆ ನೋಟಿಸ್ ಜಾರಿ

ಬೆಂಗಳೂರು: ಆಕ್ಷೇಪಾರ್ಹ ಟ್ವೀಟ್ ಪ್ರಕರಣ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಬಿಜೆಪಿಯ ಐಟಿ ಸೆಲ್ ವಿಭಾಗದ ರಾಷ್ಟ್ರೀಯ ಸಂಚಾಲಕ ಅಮಿತ್ ಮಾಳವೀಯ ಅವರಿಗೆ ನೋಟಿಸ್​ ಜಾರಿ ಮಾಡಲಾಗಿದೆ. ನೋಟಿಸ್ ತಲುಪಿದ 7 ದಿನಗಳ ಒಳಗೆ ಪ್ರಕರಣದ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.


ಕರ್ನಾಟಕದ ಬಿಜೆಪಿಯ ಅಧಿಕೃತ 'ಎಕ್ಸ್'​ ಖಾತೆಯಲ್ಲಿ ಆಕ್ಷೇಪಾರ್ಹ ಪೋಸ್ಟ್ ಪ್ರಕಟಿಸಲಾಗಿತ್ತು. ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಎಸ್​ಸಿ, ಎಸ್​ಟಿ, ಹಿಂದುಳಿದ ವರ್ಗಗಳ ಹೆಸರಿನ ಮೊಟ್ಟೆಗಳಿರುವ ಗೂಡಿನಲ್ಲಿ ಮುಸ್ಲಿಂ ಹೆಸರಿನ ಮೊಟ್ಟೆ ತಂದಿಟ್ಟು ಪೋಷಿಸುವಂತೆ, ಅದೇ ಮುಸ್ಲಿಂ ಹೆಸರಿನ ಮೊಟ್ಟೆಯಿಂದ ಹೊರಬಂದ ಮರಿ ಕೊನೆಗೆ ಇತರ ಹಕ್ಕಿಗಳನ್ನು ಓಡಿಸುತ್ತಿರುವಂತೆ ಸೂಚಿಸುವ ಕಾರ್ಟೂನ್ ವಿಡಿಯೋವೊಂದನ್ನು ಮೇ 4ರಂದು ಬಿಜೆಪಿ ಹಂಚಿಕೊಂಡಿತ್ತು.


ಈ ವಿವಾದಿತ ಪೋಸ್ಟ್ ವಿರುದ್ಧ ಕೆಪಿಸಿಸಿಯ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ರಮೇಶ್ ದೂರು ನೀಡಿದ್ದರು. ಇದರನ್ವಯ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಲ್ಲದೇ, ಜೆ.ಪಿ. ನಡ್ಡಾ, ವಿಜಯೇಂದ್ರ, ಅಮಿತ್​ ಮಾಳವೀಯ ಅವರಿಗೆ ಮೇ 6ರಂದು ಪೊಲೀಸರು ನೋಟಿಸ್​ ಜಾರಿ ಮಾಡಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್