LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಆ.30 ರಂದು ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮ


ಬಳ್ಳಾರಿ,ಆ.26:: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 30 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತ (ಕಾವೇರಿ ಹ್ಯಾಂಡ್ ಲ್ಯೂಮ್ಸ್)ದ ಅಧ್ಯಕ್ಷರು ಹಾಗೂ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ಸಂಡೂರು ಶಾಸಕರಾದ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷö್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇನ್ನಿತರೆ ಗಣ್ಯರು ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ಶ್ರೀ ಚೈತನ್ಯ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಶಿವರಾಮ.ಕೆ ಅವರು ವಿಶೇಷ ಉಪನ್ಯಾಸ ನೀಡುವರು. ಬಳ್ಳಾರಿಯ ಕೆ.ಉಮೇಶ ಅವರು ವಚನ ಸಂಗೀತ ಪ್ರಸ್ತುತಪಡಿಸುವರು.
*ಮೆರವಣಿಗೆ:*
ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 09.30 ಗಂಟೆಗೆ ಮೆರವಣಿಗೆ ಏರ್ಪಡಿಸಲಾಗಿದ್ದು, ಮೆರವಣಿಗೆಯು ನಗರದ ಮುನಿಸಿಪಲ್ ಕಾಲೇಜು ಆವರಣದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ, ಹಳೆಯ ಜಿಲ್ಲಾಧಿಕಾರಿಗಳ ಕಾರ್ಯಾಲಯ ರಸ್ತೆ, ಹೆಚ್.ಆರ್. ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದ ರಾಶಿ ದೊಡ್ಡನಗೌಡ ರಂಗಮAದಿರದವರೆಗೆ ನಡೆಯಲಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್, ಮಹಾನಗರ ಪಾಲಿಕೆಯ ಆಯುಕ್ತ ಮಂಜುನಾಥ್ ಪಿ.ಎಸ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸಮುದಾಯದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ