Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೋ ಮೇಲೆ ಗುಂಡಿನ ದಾಳಿ

ನವದೆಹಲಿ,16: ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೋ ಮೇಲೆ ಗುಂಡಿನ ದಾಳಿ ನಡೆದಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಧಾನಿ ಬ್ರಾಟಿಸ್ಲಾವಾದ ಈಶಾನ್ಯಕ್ಕೆ ಸುಮಾರು 150 ಕಿಲೋಮೀಟರ್ ದೂರದಲ್ಲಿರುವ ಹ್ಯಾಂಡ್ಲೋವಾ ನಗರದಲ್ಲಿ ಈ ಘಟನೆ ನಡೆದಿದೆ. ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.

ಮಾಧ್ಯಮ ವರದಿಗಳ ಪ್ರಕಾರ, ರಷ್ಯಾದ ಪರ ಪ್ರಧಾನಿ ಅವರು ಕ್ಯಾಬಿನೆಟ್ ಸಭೆ ನಡೆಸುತ್ತಿದ್ದ ಹೌಸ್ ಆಫ್ ಕಲ್ಚರ್ ಹೊರಗೆ ಗುಂಡಿನ ದಾಳಿ ನಡೆದಿದೆ. ಪಿಎಂ ಫಿಕೋ ಹೌಸ್‌ನ ಹೊರಗೆ ಜನರೊಂದಿಗೆ ಮಾತನಾಡುತ್ತಿದ್ದರು. ಈ ವೇಳೆ ಗುಂಡಿನ ದಾಳಿ ನಡೆದಿದ್ದು ಇದರ ವಿಡಿಯೋಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಗುಂಡು ತಗುಲಿ ಗಾಯಗೊಂಡಿರುವ ಪ್ರಧಾನಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿದ್ದ ಪತ್ರಕರ್ತರ ಪ್ರಕಾರ, ಹಲವಾರು ಗುಂಡಿನ ಶಬ್ದಗಳು ಕೇಳಿಬಂದವು. ಗುಂಡು ಹಾರಿಸಿದ ಆರೋಪಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕ್ರೂರ ದಾಳಿಯಿಂದ ಆಘಾತಕ್ಕೊಳಗಾಗಿದ್ದೇನೆ ಎಂದು ಸ್ಲೋವಾಕಿಯಾದ ಅಧ್ಯಕ್ಷ ಜುಝಾನಾ ಸಪುಟೋವಾ ಹೇಳಿದ್ದಾರೆ

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ