Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಸಭಾ ಚುನಾವಣೆಯ ಫಲಿತಾಂಶದ ಟ್ರೆಂಡ್‌ ಗೊತ್ತಾದರೂ ಅಧಿಕೃತ ಫಲಿತಾಂಶ ತಡ

ನವದೆಹಲಿ: ಈ ಬಾರಿ ಲೋಕಸಭಾ ಚುನಾವಣೆಯ  ಫಲಿತಾಂಶದ ಟ್ರೆಂಡ್‌  ಬೇಗನೇ ಗೊತ್ತಾದರೂ ಅಧಿಕೃತ ಫಲಿತಾಂಶ ತಡವಾಗಿ ಪ್ರಕಟವಾಗಲಿದೆ.

ಅಧಿಕೃತ ಫಲಿತಾಂಶ ತಡವಾಗಲು ಕಾರಣ ಸುಪ್ರೀಂ ಕೋರ್ಟ್‌ ನಿರ್ದೇಶನ. ಈ ಬಾರಿ ಪ್ರತಿ ವಿಧಾನಸಭಾ ಕ್ಷೇತ್ರದ  5 ವಿವಿಪ್ಯಾಟ್‌ ಮತ ಎಣಿಕೆ ನಡೆಸಬೇಕೆಂದು ಸುಪ್ರೀಂ ಕೋರ್ಟ್‌ ಆದೇಶ ಪ್ರಕಟಿಸಿದೆ.  ಈ ಆದೇಶವನ್ನು ಚುನಾವಣಾಧಿಕಾರಿಗಳು ಪಾಲಿಸಬೇಕಾದ ಕಾರಣ ಪೋಸ್ಟಲ್‌, ಇವಿಎಂ ಮತ ಎಣಿಕೆ ಮುಗಿದ ಬಳಿಕ ವಿವಿಪ್ಯಾಟ್‌ ಮತ ಮತಗಳನ್ನು ತಾಳೆ ಹಾಕಲಾಗುತ್ತದೆ.

ಫಲಿತಾಂಶ ಟ್ರೆಂಡ್‌ ಬೆಳಗ್ಗೆ 11 ಗಂಟೆಯ ಒಳಗಡೆ ಗೊತ್ತಾದರೂ ಅಧಿಕೃತ ಫಲಿತಾಂಶ ಸಂಜೆ ಪ್ರಕಟವಾಗಬಹುದು. ಒಂದು ಲೋಕಸಭಾ ಚುನಾವಣಾ ವ್ಯಾಪ್ತಿಯಲ್ಲಿ 10 ವಿಧಾನಸಭಾ ಕ್ಷೇತ್ರಗಳು ಇದ್ದರೆ 10 ಕ್ಷೇತ್ರಗಳ 5 ಮತ ಕೇಂದ್ರ ಅಂದರೆ ಒಟ್ಟು 50 ಮತ ಕೇಂದ್ರಗಳ ವಿವಿಪ್ಯಾಟ್‌ನಲ್ಲಿ ಬಿದ್ದ ಮತಗಳನ್ನು ಲೆಕ್ಕ ಹಾಕಬೇಕಾಗುತ್ತದೆ.

ಎಲ್ಲಾ ವಿವಿಪ್ಯಾಟ್‌ಗಳ ಮತ ಎಣಿಕೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಆದರೆ ಸುಪ್ರೀಂ ಕೋರ್ಟ್‌ ಈ ಅರ್ಜಿಯನ್ನು ವಜಾಗೊಳಿಸಿ ವಿಧಾನಸಭಾ ಕ್ಷೇತ್ರದ 5 ವಿವಿಪ್ಯಾಟ್‌ ಸ್ಲಿಪ್‌ಗಳ ಮತಗಳನ್ನು ಎಣಿಕೆ ಮಾಡುವಂತೆ ಆದೇಶಿಸಿತ್ತು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ