LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಕುವೈತ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತ: ಭಾರತೀಯರ ಪಾರ್ಥಿವ ಶರೀರಗಳನ್ನು ಹೊತ್ತ ಐಎಎಫ್

ಕೊಚ್ಚಿ (ಕೇರಳ): ಎರಡು ದಿನಗಳ ಹಿಂದೆ ಕುವೈತ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟ ಭಾರತೀಯರ ಪಾರ್ಥಿವ ಶರೀರಗಳನ್ನು ಹೊತ್ತ ಭಾರತೀಯ ವಾಯುಪಡೆಯ (ಐಎಎಫ್) ವಿಮಾನವು ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.

IAF C30J ವಿಮಾನವು ಭಾರತೀಯರ ಮೃತದೇಹಗಳನ್ನು ಹೊತ್ತು ತಂದಿದೆ. 31 ಜನರ ಮೃತದೇಹಗಳನ್ನು ಕೊಚ್ಚಿನ್​ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳಲಾಯಿತು. 31 ಮೃತದೇಹಗಳಲ್ಲಿ ಕೇರಳದ- 23 ಜನರ ಮೃತದೇಹಗಳು, ತಮಿಳುನಾಡಿನ - 7 ಜನರ ಮೃತದೇಹಗಳು ಮತ್ತು ಕರ್ನಾಟಕದ ಮೂಲಕ ಒಬ್ಬರ ಮೃತದೇಹವೂ ಇದರಲ್ಲಿ ಸೇರಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಮೃತದೇಹಗಳನ್ನು ಪಡೆಯಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಆರೋಗ್ಯ ಸಚಿವೆ ವೀಣಾ ಜಾರ್ಜ್, ಕೈಗಾರಿಕೆ ಸಚಿವ ಪಿ. ರಾಜೀವ್, ಕಂದಾಯ ಸಚಿವ ಕೆ. ರಾಜನ್ ಮತ್ತು ಇತರ ಅಧಿಕಾರಿಗಳು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.


ಜೂನ್ 12ರಂದು ಕುವೈತ್​ನ ಅಲ್-ಮಂಗಾಫ್ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 49 ಜನರು ಸಾವನ್ನಪ್ಪಿದ್ದಾರೆ. ಮತ್ತು ಅವರಲ್ಲಿ ಹೆಚ್ಚಿನವರು ಭಾರತೀಯರು ಎಂದು ಅಧಿಕಾರಿಗಳು ಹೇಳಿದ್ದಾರೆ. ಉಳಿದವರು ಪಾಕಿಸ್ತಾನಿ, ಫಿಲಿಪಿನೋ, ಈಜಿಪ್ಟ್ ಮತ್ತು ನೇಪಾಳಿ ಪ್ರಜೆಗಳು. ದಕ್ಷಿಣ ಕುವೈತ್‌ನ ಮಂಗಾಫ್ ಪ್ರದೇಶದಲ್ಲಿ ಸುಮಾರು 195 ವಲಸೆ ಕಾರ್ಮಿಕರು ನೆಲೆಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ