LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪರಿಷತ್​ಗೆ ನೂತನವಾಗಿ ಆಯ್ಕೆಯಾದ 17 ಸದಸ್ಯರು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು, ಜೂನ್​ 24: ವಿಧಾನ ಪರಿಷತ್​ಗೆ ನೂತನವಾಗಿ ಆಯ್ಕೆಯಾದ 17 ಸದಸ್ಯರು ಇಂದು (ಜೂ.24) ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸದಸ್ಯರಿಗೆ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಪ್ರಮಾಣ ವಚನ ಬೋಧಿಸಿದರು.

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೂ ಮುನ್ನ ನೂತನ ಸದಸ್ಯರಿಗೆ ಮುಖ್ಯಮತ್ರಿ ಸಿದ್ದರಾಮಯ್ಯ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ , ಕಾನೂನು ಹಾಗೂ ಸಂಸದೀಯ ಸಚಿವ ಹೆಚ್​ಕೆ ಪಾಟೀಲ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

ವಿಧಾನಸಭೆ, ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಒಟ್ಟು 17 ಸದಸ್ಯರು ನೂತನವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯಿಂದ ವಿಧಾನ ಪರಿಷತ್​ಗೆ 11 ಮತ್ತು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ 6 ಮಂದಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್​ನಿಂದ ಐವನ್ ಡಿಸೋಜಾ, ಕೆ ಗೋವಿಂದರಾಜು, ಜಗದೇವ್ ಗುತ್ತೆದಾರ್, ಬಲ್ಕಿಸ್ ಬಾನು, ಎನ್ ಎಸ್ ಭೋಸರಾಜ್, ಯತೀಂದ್ರ ಸಿದ್ದರಾಮಯ್ಯ, ಎ ವಸಂತ ಕುಮಾರ್, ಬಿಜೆಪಿಯಿಂದ ಎನ್ ರವಿಕುಮಾರ್, ಸಿಟಿ ರವಿ, ಮುಳೆ ಮಾರುತಿರಾವ್, ಜೆಡಿಎಸ್​ನಿಂದ ಜವರಾಯಿಗೌಡ ಆಯ್ಕೆಯಾಗಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪ