LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರತನ್ ಟಾಟಾ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ

ಮುಂಬೈ: ಟಾಟಾ ಗ್ರೂಪ್‌ ಅಧ್ಯಕ್ಷ ಮತ್ತು ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ನಿನ್ನೆ ಬುಧವಾರ ತಡರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಅವರ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರತನ್ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದು ಭಾರತೀಯ ಕೈಗಾರಿಕೋದ್ಯಮ ವಲಯದ ಒಂದು ಯುಗ ಅಂತ್ಯವಾಗಿದೆ. ರತನ್ ಟಾಟಾ ನಿಧನಕ್ಕೆ ಮಹಾರಾಷ್ಟ್ರ ಸರ್ಕಾರ ಇಂದು ಒಂದು ದಿನದ ಶೋಕಾಚರಣೆ ಘೋಷಿಸಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ.

ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ: ರತನ್ ಟಾಟಾ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ 10 ಗಂಟೆಯಿಂದ ಅಪರಾಹ್ನ 3.30ರವರೆಗೆ ಮುಂಬೈಯ ನಾರಿಮನ್ ಪಾಯಿಂಟ್ ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (NCPA) ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಎಲ್ಲಾ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ ಎಂದು ಮುಂಬೈ ದಕ್ಷಿಣ ವಲಯ ಹೆಚ್ಚುವರಿ ಆಯುಕ್ತ ಅಭಿನವ್ ದೇಶ್ ಮುಖ್ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪ