ಧಾರವಾಡ,28 : ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಧಾರವಾಡದ ಕಾರ್ಗಿಲ್ ಸ್ತೂಪದಲ್ಲಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.
ಕಾಂಗ್ರೆಸ್ ಮುಖಂಡರಾದ ಶ್ರೀ ದೀಪಕ ಚಿಂಚೋರೆ ಅವರು ಕಾರ್ಗಿಲ್ ಯುದ್ದದಲ್ಲಿ ಮಡಿದ ಅಮರ ವೀರ ಯೋಧರನ್ನು ಸ್ಮರಿಸಿ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಮಾಜಿ ಸೈನಿಕರು, ಹಾಗೂ ಸಾರ್ವಜನಿಕರು ಕಾರ್ಗಿಲ್ ಸ್ತೂಪಕ್ಕೆ ಪುಷ್ಪಾರ್ಚನೆ ಮಾಡಿ, ದೇಶದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ವೀರ ಯೋಧರನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರಭಕ್ತಿ ಘೋಷಣೆಗಳು ಮೊಳಗಿದವು.
