Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಧಿಕಾರಿಗಳು ಫೀಲ್ಡ್ ಗಿಳಿದು ಕೆಲಸ ಮಾಡಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಖಡಕ್ ಸೂಚನೆ




ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಆದೇಶ


ಪಿಪಿಪಿ ಮಾದರಿಯಲ್ಲಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ


 *ಉಡುಪಿ:* ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗ್ರತೆ ಕ್ರಮಕೈಗೊಳ್ಳಲು  ಅಧಿಕಾರಿಗಳು ಫೀಲ್ಡಿಗಿಳಿದು ಕೆಲಸ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಉಡುಪಿ ಜಿಲ್ಲಾ ಪಂಚಾಯತ್ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಕಡಲ ಕೊರೆತ ತಡೆಗಟ್ಟುವ ಸಲುವಾಗಿ 4.50  ಕೋಟಿ ಹಣ ಬಿಡುಗಡೆಯಾಗಿದ್ದು, ಕಾಮಗಾರಿಗಳನ್ನು ತ್ವರಿತಗೊಳಿಸಬೇಕು ಎಂದರು.


ಕಾಪು ತಾಲೂಕಿನ ಹೆಜ್ಮಾಡಿಯಿಂದ ಬೈಂದೂರಿನ ಶಿರೂರುವರೆಗೆ ಕಡಲ ಕೊರೆತ ಸ್ಥಳಗಳನ್ನು ಗುರುತಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಬಂದರು ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.


* *ಮಲ್ಪೆ ಬಂದರು ನಿರ್ವಹಣೆಗೆ ಕ್ರಮ*

ಮಲ್ಪೆ ಬಂದರು ನಿರ್ವಹಣೆಯನ್ನು ಸೂಕ್ತ ರೀತಿಯಲ್ಲಿ ಮಾಡಬೇಕು. ಸಿಸಿಟಿವಿ ಅಳವಡಿಸಿ, ಭದ್ರತೆಯ ಜೊತೆಗೆ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬಂದರು ಇಲಾಖೆ ಅಧಿಕಾರಿಗಳು ಸೂಚನೆ ನೀಡಿದರು.


* *ಪ್ರವಾಸೋದ್ಯಮ ಹಾಗೂ ಕ್ರೀಡಾಭಿವೃದ್ಧಿಗೆ ಒತ್ತು*

ಪ್ರವಾಸೋದ್ಯಮ ಹಾಗೂ ಕ್ರೀಡಾಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಬೇಕು.  ಜಿಲ್ಲೆಯೂ ಪ್ರಮುಖ ಪ್ರವಾಸೋದ್ಯಮ ಕೇಂದ್ರವಾಗಿ ಬೆಳೆಯಬೇಕು. ಪ್ರಾಕೃತಿಕವಾಗಿ, ನೈಸರ್ಗಿಕವಾಗಿ ಸುಂದರ ತಾಣವಾಗಿದ್ದು, ಧಾರ್ಮಿಕ ಸ್ಥಳಗಳನ್ನು ಒಳಗೊಂಡಿದೆ, ಹೆಚ್ಚು ಪ್ರವಾಸಿಗರು ಆಕರ್ಷಿಸುವಂತೆ ಮಾಡಬೇಕು. ಅನಧಿಕೃತ ಹೋಂ ಸ್ಟೇಗಳಿಗೆ ಕಡಿವಾಣ ಹಾಕಬೇಕು, ಪ್ರವಾಸಿ ತಾಣಗಳಲ್ಲಿ 18 ವರ್ಷ ಒಳಗಿನ ಮಕ್ಕಳು ಕೆಲಸ ನಿರ್ವಹಿಸದಂತೆ ನೋಡಿಕೊಳ್ಳಬೇಕು. ಪಿಪಿಪಿ ಮಾದರಿಯಲ್ಲಿ ಪ್ರವಾಸೋದ್ಯಮ ಹಾಗೂ ಕ್ರೀಡೆಯ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕು ಎಂದು ಸಚಿವರು ಹೇಳಿದರು.


* *ಕಳಪೆ ಬಿತ್ತನೆ ಬೀಜ ವಿತರಿಸಿದರೆ ಕಠಿಣ ಕ್ರಮ*

ಜಿಲ್ಲೆಯಲ್ಲಿ ರೈತರಿಗೆ ಕಳಪೆ ಬೀಜ ಸರಬರಾಜು ಮಾಡಿದ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಠಿಣ ಕ್ರಮ ಕೈಗೊಳ್ಳಬೇಕು. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕೃಷಿ ಸಲಕರಣೆಗಳು ಉಡುಪಿ ಜಿಲ್ಲೆಯಲ್ಲಿ ಸರಿಯಾಗಿ ಸರಬರಾಜು ಆಗುತ್ತಿಲ್ಲ. ಇದು ಕೂಡ ಹೆಚ್ಚಾಗಬೇಕು ಎಂದರು.‌


ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪುವಂತೆ ಮಾಡಬೇಕು. ಹೆಚ್ಚು ಆದಾಯ ತರುವ ಹಣ್ಣುಗಳ ಬಗ್ಗೆ ಜನರಿಗೆ ಜಾಗೃತಿ ಮಾಡಿಸಬೇಕು. ಮುಂದಿನ ಸಭೆ ವೇಳೆ ಫೀಲ್ಡ್ ಗಿಳಿದು ಕೆಲಸ ಮಾಡಿದ ಬಗ್ಗೆ ಮಾಹಿತಿ ನೀಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶಿಸಿದರು.


ರಾಜ್ಯದಲ್ಲಿ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಚಟುವಟಿಕೆಗಳು ಹೆಚ್ಚು ನಡೆಯುತ್ತಿವೆ. ಆದರೆ, ವಸತಿ ಯೋಜನೆಯಲ್ಲಿ ಬರೀ 25 ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ. ಇತರ ಜಿಲ್ಲೆಗಳಿಗೂ 25 ಮನೆಗಳನ್ನು ನೀಡಲಾಗುತ್ತಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ಕ್ರಮಕೈಗೊಳ್ಳಲಾಗುವುದು ಎಂದರು.


* *ರೈತರಿಗೆ ಸೂಕ್ತ ಪರಿಹಾರ ನೀಡಿ*

ವಾರಾಹಿ ನೀರಾವರಿ ಕಾಮಗಾರಿಗಳನ್ನು ಕೈಗೊಳ್ಳಲು,  ಐದು ವರ್ಷಗಳ ಹಿಂದೆಯೇ ಭೂಸ್ವಾಧೀನ ಆಗಿದ್ದು, ಇದುವರೆಗೂ ಪರಿಹಾರ ನೀಡಿಲ್ಲ. ಜೊತೆಗೆ ಬೆಳೆ ಬೆಳೆಯಲು ಬಿಟ್ಟಿಲ್ಲ. ಇದರಿಂದ ರೈತರಿಗೆ ತುಂಬಾ ತೊಂದರೆಯಾಗುತ್ತಿದೆ. ಮುಂದಿನ ಸಭೆ ವೇಳೆಗೆ ರೈತರಿಗೆ ಸೂಕ್ತ ಪರಿಹಾರ ನೀಡಿರಬೇಕು, ಡೀಮ್ಡ್ ಫಾರೆಸ್ಟ್ ನಲ್ಲಿ ಕಾಮಗಾರಿಗೆ ಅಗತ್ಯವಿರುವ ಭೂಮಿಗೆ ಅನುಮತಿ ನೀಡಬೇಕು ಎಂದರು.


* *ಇಲಾಖೆವಾರು ಮಾಹಿತಿ ಸಂಗ್ರಹಿಸಿದ ಸಚಿವರು*

ಸಾರಿಗೆ, ನೀರಾವರಿ, ಪಶು ಸಂಗೋಪನೆ, ಆರೋಗ್ಯ, ಶಿಕ್ಷಣ ಸೇರಿದಂತೆ ಪ್ರತಿಯೊಂದು ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ ಸಚಿವರು, ಸೂಕ್ತ ಉತ್ತರ ನೀಡದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಪ್ರತಿ ಇಲಾಖೆಯ ಸಾಧಕ-ಭಾದಕಗಳ ಕುರಿತು ಚರ್ಚೆ ನಡೆಸಿದರು.


* *ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಅಭಿನಂದಿಸಿದ ಸಚಿವರು*

2024-25ನೇ ಸಾಲಿನಲ್ಲಿ ಉಡುಪಿ ಜಿಲ್ಲೆ ಎಸ್ಎಸ್ಎಲ್ಸಿ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಹಾಗೂ ಪಿಯುಸಿಯಲ್ಲಿ ಮೊದಲ ಸ್ಥಾನ ಪಡೆಯಲು ಪ್ರಮುಖ ಪಾತ್ರ ವಹಿಸಿದ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಸಚಿವರು ಸಭೆಯಲ್ಲಿ ಅಭಿನಂದನೆ ಸಲ್ಲಿಸಿದರು.


ಸಭೆಯಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಧನಂಜಯ್ ಸರ್ಜಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್,  ಡಿಎಫ್ಓ ಗಣಪತಿ ಸೇರಿದಂತೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

[20/06, 6:01 pm] M K Hegde: ವಿಕೇಂದ್ರೀಕರಣ ವ್ಯವಸ್ಥೆಗೆ ಬಲ ತುಂಬುವ ಕೆಲಸ ಮಾಡೋಣ : ಚನ್ನರಾಜ ಹಟ್ಟಿಹೊಳಿ


ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ


ಇಟಗಿ (ಬೆಳಗಾವಿ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಬೆಳಗಾವಿ, ತಾಲೂಕಾ ಪಂಚಾಯತ್ ಖಾನಾಪುರ ಹಾಗೂ ಗ್ರಾಮ ಪಂಚಾಯತ್ ಇಟಗಿ ಇವರ ಸಂಯುಕ್ತ ಆಶ್ರಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಿಸಲಾದ ಗ್ರಾಮ ಪಂಚಾಯತ್ ಇಟಗಿಯ ನೂತನ ಕಟ್ಟಡ ಹಾಗೂ ಸಭಾ ಭವನವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶುಕ್ರವಾರ ಉದ್ಘಾಟಿಸಿದರು.

ಸರಕಾರದಿಂದ ಬಿಡುಗಡೆಯಾಗುವ ಹಣ ಮಧ್ಯವರ್ತಿಗಳಿಲ್ಲದೆ ನೇರವಾಗಿ ಗ್ರಾಮ ಪಂಚಾಯಿತಿಗೆ ತಲುಪಿದಾಗ ಯಾವುದೇ ಯೋಜನೆ ಯಶಸ್ವಿಯಾಗುತ್ತದೆ. ಗ್ರಾಮ ಪಂಚಾಯಿತಿಗಳು ವಿಕೇಂದ್ರೀಕರಣ ವ್ಯವಸ್ಥೆಯ ಅತ್ಯಂತ ಪ್ರಮುಖ ಹಂತವಾಗಿದ್ದು, ಇದಕ್ಕೆ ಬಲತುಂಬಿದಾಗ ಪ್ರಜಾಪ್ರಭುತ್ವ ಅರ್ಥಪೂರ್ಣವಾಗುತ್ತದೆ. ಯಾವುದೇ ಊರಿನ ಶಾಲೆ ಮತ್ತು ಪಂಚಾಯಿತಿ ಸ್ಥಿತಿ ಗತಿ ನೋಡಿದರೆ ಆ ಊರಿನ ಸ್ಥಿತಿ ಗೊತ್ತಾಗುತ್ತದೆ. ಹಾಗಾಗಿ ಇವೆರಡನ್ನು ಉತ್ತಮಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿ. ಎಲ್ಲರೂ ಸೇರಿ ಗ್ರಾಮದ ಅಭಿವೃದ್ಧಿ ಮಾಡೋಣ, ಒಳ್ಳೆಯ ಸಮಾಜ ನಿರ್ಮಾಣ ಮಾಡೋಣ ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು.


ಕಾರ್ಯಕ್ರಮದಲ್ಲಿ ಚನ್ನಮ್ಮನ ಕಿತ್ತೂರು ವಿರಕ್ತಮಠದ ಪರಮಪೂಜ್ಯ ಶ್ರೀ ಮಡಿವಾಳ ರಾಜಯೋಗಿಂದ್ರ ಮಹಾಸ್ವಾಮಿಗಳು, ನಂದಗಡ ಹಾಗೂ ಇಟಗಿ ವಿರಕ್ತಮಠದ  ಶ್ರೀ ಚನ್ನವೀರ ದೇವರು, ಅವರೊಳ್ಳಿ ಬಿಳಕಿಯ ರುದ್ರಸ್ವಾಮಿ ಮಠದ ಶ್ರೀ ಚನ್ನಬಸವ ದೇವರು, ಶಾಸಕರಾದ ವಿಠ್ಠಲ ಹಲಗೇಕರ್, ಕಾರ್ಯ ನಿರ್ವಾಹಕ ಅಧಿಕಾರಿಗಳಾದ ರಮೇಶ ಮೇತ್ರಿ, ವಿಜಯಕುಮಾರ್ ಕೋತಿನ,  ರೂಪಾಲಿ ಬಡಕುಂದ್ರಿ, ವಿರೇಶ ಸಜ್ಜನ, ರೋಹಿಣಿ ಬಾ ಪಾಟೀಲ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ರುದ್ರಪ್ಪ ತುರಮುರಿ, ಉಪಾಧ್ಯಕ್ಷರಾದ ರಾಜಶ್ರೀ ಹುಣಶೀಕಟ್ಟಿ ಹಾಗೂ ಸರ್ವ ಸದಸ್ಯರು, ಗ್ರಾಮದ ಗುರು ಹಿರಿಯರು, ಸುತ್ತಮುತ್ತಲಿನ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ