Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು: ಡಾ.ಸಿ.ನಾರಾಯಣಸ್ವಾಮಿ



5ನೇ ರಾಜ್ಯ ಹಣಕಾಸು ಆಯೋಗದ ಸಭೆ; ಇಲಾಖೆಗಳ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆಯೋಗದಿಂದ ಶಿಫಾರಸ್ಸು

ಬಳ್ಳಾರಿ,ಜೂ.17: ಸರ್ಕಾರದ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮ ಪಂಚಾಯತಿಗಳ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಬೇಕು, ಪ್ರತಿ ಪಂಚಾಯತಿಗಳಿAದ ಬರುವ ಆದಾಯವನ್ನು ಅನುದಾನದ ರೂಪದಲ್ಲಿ ಸಾರ್ವಜನಿಕರಿಗೆ ಪ್ರೋತ್ಸಾಹವಾಗಿ ನೀಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದು 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ.ಸಿ.ನಾರಾಯಣಸ್ವಾಮಿ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ನ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಿದ್ದ 5ನೇ ರಾಜ್ಯ ಹಣಕಾಸು ಆಯೋಗದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿವಿಧ ಸರ್ಕಾರಿ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಆಯೋಗದಿಂದ ಶಿಫಾರಸು ಮಾಡಲಾಗುವುದು. ಕಟ್ಟಡ ತೆರಿಗೆ, ವಾಣಿಜ್ಯ ಮಳಿಗೆಗಳ ತೆರಿಗೆ ಬಾಕಿ ವಸೂಲಾತಿಗಳನ್ನು ಕ್ರಮ ವಹಿಸಬೇಕು ಎಂದರು.
ನಗÀರದ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳ ಆರ್ಥಿಕ ಸ್ಥಿತಿಗಳನ್ನು ಪರಿಶೀಲಿಸಿ ನಂತರ ಸಂಪನ್ಮೂಲಗಳ ಹಂಚಿಕೆ ಹಾಗೂ ವಿಭಜನೆಯ ಶಿಫಾರಸ್ಸುಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಆಸ್ತಿ ತೆರಿಗೆ, ಉದ್ದಿಮೆ ಪರವಾನಗಿ, ಬಾಡಿಗೆ ಆದಾಯ, ಬಳಕೆದಾರರ ಶುಲ್ಕ, ಇನ್ನಿತರ ಸಂಗ್ರಹ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸ್ವಂತ ಸಂಪನ್ಮೂಲ ಕ್ರೋಢೀಕರಣಕ್ಕೆ ನಗರ ಸ್ಥಳೀಯ ಸಂಸ್ಥೆಗಳು, ಪಂಚಾಯತ್ ರಾಜ್ ಸಂಸ್ಥೆಗಳು ಹೆಚ್ಚಿನ ಆದ್ಯತೆ ನೀಡಬೇಕು ಅವರು ತಿಳಿಸಿದರು.
ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬAಧಿಸಿದAತೆ ತೆರಿಗೆ ಪಾವತಿ ಖಾತಾ ಪ್ರತಿ ದಾಖಲೆಗಳನ್ನು ತ್ವರಿತವಾಗಿ ನೀಡುವಿಕೆ, ನೀರು ಸರಬರಾಜು, ಒಳಚರಂಡಿ, ಬೀದಿ ದೀಪಗಳು, ಘನತ್ಯಾಜ್ಯ ನಿರ್ವಹಣೆ, ಇನ್ನಿತರ ವಿಷಯಗಳಿಗೆ ಸಂಬAಧಿಸಿದAತೆ ವಿವಿಧ ಇಲಾಖೆಯ ಅಧಿಕಾರಿಗಳು ವಿವರಿಸಿದರು.
ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಮೂಲ ಸೌಕರ್ಯ ಒದಗಿಸಲು ಹೆಚ್ಚು ಅನುದಾನ, ವಿವಿಧ ಮಂಜೂರು ಅಗತ್ಯತೆ ಸೇರಿದಂತೆ ಬೇರೆ ಬೇರೆ ವಿಷಯಗಳ ಕುರಿತು ಆಯೋಗದ ಅಧ್ಯಕ್ಷರಿಗೆ ವಿನಂತಿಸಿದರು.
ಈ ಸಂದರ್ಭದಲ್ಲಿ 5ನೇ ರಾಜ್ಯ ಹಣಕಾಸು ಆಯೋಗದ ಸದಸ್ಯರಾದ ಮೊಹಮ್ಮದ್ ಸನಾವುಲ್ಲಾ, ಆರ್.ಎಸ್.ಪೊಂಡೆ, ಆಪ್ತ ಕಾರ್ಯದರ್ಶಿ ಕೆ.ಯಾಲಕ್ಕಿಗೌಡ, ಸಮಾಲೋಚಕರಾದ ಎಂ.ಕೆ ಕೆಂಪೇಗೌಡ, ಸಿ.ಜಿ.ಸುಪ್ರಸನ್ನ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಬಳ್ಳಾರಿ ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್, ವಿಜಯನಗರ ಜಿಪಂ ಸಿಇಒ ನೊಂಗ್ಜೆöÊ ಮೊಹಮ್ಮದ್ ಅಲಿ ಅಕ್ರಮ್ ಶಾ, ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.





Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ