Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಒಮರ್ ಅಬ್ದುಲ್ಲಾ

ದಶಕಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆದಿದ್ದು, ಸರ್ಕಾರ ರಚನೆಗೆ ವೇದಿಕೆ ಸಿದ್ಧವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸರ್ಕಾರ ರಚಿಸಲು ಸಿದ್ಧವಾಗಿದ್ದು, ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಶ್ರೀನಗರದ ರಾಜಭವನದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಭೇಟಿಯಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ರಾಜಭವನ ಭೇಟಿ ಬಳಿಕ ಮಾತನಾಡಿದ ಒಮರ್ ಅಬ್ದುಲ್ಲಾ, ಲೆಫ್ಟಿನೆಂಟ್ ಗವರ್ನರ್ ಅವರನ್ನು ಭೇಟಿ ಮಾಡಿ ನ್ಯಾಷನಲ್ ಕಾನ್ಫರೆನ್ಸ್, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಸಿಪಿಐ (ಎಂ), ಮತ್ತು ಸ್ವತಂತ್ರ ಅಭ್ಯರ್ಥಿಗಳು ಬೆಂಬಲ ನೀಡಿರುವ ಪತ್ರಗಳನ್ನು ಸಲ್ಲಿಸಿದ್ದೇನೆ. ಶಾಸಕರು ಪ್ರಮಾಣ ವಚನ ಸ್ವೀಕರಿಸಲು ಮತ್ತು ಸರ್ಕಾರ ರಚನೆಗೆ ದಿನಾಂಕ ನಿಗದಿಪಡಿಸುವಂತೆ ಮನವಿ ಮಾಡಿದ್ದೇನೆ ಎಂದು ಹೇಳಿದರು. ಒಮರ್ ಅಬ್ದುಲ್ಲಾ ಕಾಶ್ಮೀರದ ಬುದ್ಗಾಮ್ ಮತ್ತು ಗಂದರ್‌ಬಲ್ ಎಂಬ ಎರಡು ಕ್ಷೇತ್ರಗಳಿಂದ ಕೂಡ ಗೆಲುವು ಸಾಧಿಸಿದ್ದಾರೆ.

"ಜಮ್ಮು ಮತ್ತು ಕಾಶ್ಮೀರ ಈಗ ಕೇಂದ್ರಾಡಳಿತ ಪ್ರದೇಶವಾಗಿದೆ, ಸದ್ಯ ಇಲ್ಲಿ ಕೇಂದ್ರ ಸರ್ಕಾರದ ಆಡಳಿತ ಜಾರಿಯಲ್ಲಿದ್ದು, ಲೆಫ್ಟಿನೆಂಟ್ ಗವರ್ನರ್ ಮೊದಲು ದಾಖಲೆಗಳನ್ನು ಸಿದ್ಧಪಡಿಸಿ ರಾಷ್ಟ್ರಪತಿ ಭವನಕ್ಕೆ ಕಳಿಸಬೇಕು. ಅಲ್ಲಿಂದ ಗೃಹ ಸಚಿವಾಲಯಕ್ಕೆ ತೆರಳಲಿದ್ದು, ಗೃಹ ಸಚಿವಾಲಯ ತನ್ನ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ದಾಖಲೆಗಳನ್ನು ವಾಪಸ್ ಮಾಡಲಿದೆ. ಈ ಪ್ರಕ್ರಿಯೆ ಮುಗಿಯಲು ಎರಡರಿಂದ ಮೂರು ದಿನಗಳು ಬೇಕಾಗುತ್ತದೆ ಎಂದು ಒಮರ್ ಅಬ್ದುಲ್ಲಾ ಮಾಹಿತಿ ನೀಡಿದ್ದಾರೆ.

Read more at: https://kannada.oneindia.com/news/india/omar-abdullah-claims-government-formation-in-jammu-and-kashmir-379943.html
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ