LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಳ್ಳಾರಿಯಲ್ಲಿ  ಒಮೆಗಾ ಕ್ಯಾನ್ಸರ್ ಆಸ್ಪತ್ರೆ  ಅತಿ ಶೀಘ್ರದಲ್ಲೇ ಪ್ರಾರಂಭ 

ಬಳ್ಳಾರಿ:10. ಇತ್ತೀಚೆಗೆ ಮಹಿಳೆಯರು, ಮಕ್ಕಳು ಸೇರಿ ಎಲ್ಲ ವಯಸ್ಕರಲ್ಲೂ ಕ್ಯಾನ್ಸರ್ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದ್ದು, ಪ್ರಾರಂಭದಲ್ಲೇ ಪತ್ತೆ ಹಚ್ಚಿದರೆ ಖಂಡಿತ ಗುಣಪಡಿಸಬಹುದು. ಚಿಕಿತ್ಸೆಗಾಗಿ ಬೆಂಗಳೂರು, ಹೈದ್ರಾಬಾದ್ ಸೇರಿದಂತೆ ನಾನಾ ಕಡೆ ತೆರಳಬೇಕಾಗಿದ್ದು, ಬಳ್ಳಾರಿಯಲ್ಲಿ ನಮ್ಮ ಹೈದ್ರಾಬಾದ್ ಮೂಲದ ಒಮೆಗಾ ಕ್ಯಾನ್ಸರ್ ಆಸ್ಪತ್ರೆಯನ್ನು ಅತಿ ಶೀಘ್ರದಲ್ಲೇ ಪ್ರಾರಂಭಿಸಲಾಗುವುದು, ಈ ಕುರಿತು ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಹೈದ್ರಾಬಾದ್ ಮೂಲದ ಒಮೆಗಾ ಆಸ್ಪತ್ರೆ ಕ್ಯಾನ್ಸರ್ ತಜ್ಞ ಡಾ.ಎಸ್. ಎಸ್. ನೀರಣಿ ಅವರು ಹೇಳಿದರು.                                                                                                                                        ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕ್ಯಾನ್ಸರ್ ಕಾಯಿಲೆ, ಬದಲಾದ ಆಹಾರ ಶೈಲಿ ಸೇರಿದಂತೆ ನಾನಾ ಕಾರಣಗಳಿಂದ ಇತ್ತೀಚೆಗೆ ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಅದರಲ್ಲೂ ಮಹಿಳೆಯರಲ್ಲಿ ಸ್ತನ, ಗರ್ಭ ಕ್ಯಾನ್ಸರ್ ಪ್ರಕರಣಗಳು ಹೆಚ್ಚು ಕಾಣಿಸಿಕೊಳ್ಳುತ್ತಿವೆ.  ಇದನ್ನು ಪ್ರಾರಂಭದಲ್ಲೇ ಪತ್ತೆ ಹೆಚ್ಚಿದರೆ ಖಂಡಿತ ಗುಣಪಡಿಸಬಹುದು. ನಮ್ಮ ಆಸ್ಪತ್ರೆಯಲ್ಲಿ ಯಶಸ್ವಿನಿ, ಅವಿಷ್ಮಾನ ಭಾರತ ಸೇರಿದಂತೆ ನಾನಾ ಸೌಲಭ್ಯಗಳನ್ನು ಒಳಗೊಂಡಿದೆ. ಬಾಯಿ ಕ್ಯಾನ್ಸರ್, ಹೊಟ್ಟೆ, ಸ್ತನ, ಗರ್ಭ, ಶ್ವಾಸಕೋಶ ಕ್ಯಾನ್ಸರ್ ಕಾಯಿಲೆಗಳು ಜನರನ್ನು ಹೆಚ್ಚು ಕಾಡುತ್ತಿದೆ. ಕೆಲವರಿಗೆ ಬೇಗ ಕಾಣಿಸಬಹುದು, ಕೆಲವರಿಗೆ ತಡವಾಗಿ ಕಾಣಿಸಬಹುದು. ಇತ್ತೀಚೆಗೆ ತಂತ್ರಜ್ಞಾನ ಸಾಕಷ್ಟು ಮುಂದುವರೆದಿದ್ದು,  ಪ್ರಾರಂಭದಲ್ಲೇ ಪತ್ತೆ ಹಚ್ಚಿದರೆ ಖಂಡಿತ ಗುಣಪಡಿಸಬಹುದು, ಯಾವುದೇ ಭಯ ಪಡುವ ಅಗತ್ಯವಿಲ್ಲ. ಕ್ಯಾನ್ಸರ್ ಚಿಕಿತ್ಸೆಯಲ್ಲಿ ಸರ್ಜರಿ, ಕಿಮೋ, ರೇಡಿಯೇಷನ್  ಮೂರು ವಿಧಗಳಿದ್ದು, ನಮ್ಮ ಒಮೆಗಾ ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಸುಸಜ್ಜಿತ ವ್ಯವಸ್ಥೆಯುಳ್ಳ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ. ತೆಲಂಗಾಣ, ಆಂಧ್ರಪ್ರದೇಶ, ಗುಜರಾತ್, ಹರಿಯಾಣ, ಉತ್ತರ ಪ್ರದೇಶ, ಜಾರ್ಖಂಡ್, ಪಂಜಾಬ್, ಮಧ್ಯಪ್ರದೇಶ, ಛತ್ತೀಸ್ ಘಡ ಸೇರಿದಂತೆ ನಾನಾ ಕಡೆ ಒಟ್ಟು 20 ಆಸ್ಪತ್ರೆಗಳನ್ನು ನಮ್ಮ ಒಮೆಗಾ ಸಂಸ್ಥೆ ಹೊಂದಿದೆ. ಸದ್ಯ ಬಳ್ಳಾರಿಯಲ್ಲಿ 30 ಬೆಡ್ ಆಸ್ಪತ್ರೆ ನಿರ್ಮಿಸಲಾಗುವುದು, ನಂತರ ಅದನ್ನು ಹೆಚ್ಚಿಸಲಾಗುವುದು.  ಬಳ್ಳಾರಿಯ ಜನರು ಇದರ ಸೌಲಭ್ಯಗಳನ್ನು ಪಡೆಯಬಹುದು ಎಂದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್