Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನ.26, 27 ರಂದು ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಕಾರ್ಯಕ್ರಮ

ಬಳ್ಳಾರಿ,ನ.22: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನ.26 ಮತ್ತು 27 ರಂದು ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.
ನ.26 ರಂದು ಬೆಳಿಗ್ಗೆ 09.30 ಕ್ಕೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಉದ್ಘಾಟನಾ ಸಮಾರಂಭ ಜರುಗಲಿದೆ.

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷö್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.

ನ.26 ರಂದು ಬೆಳಿಗ್ಗೆ 10 ಗಂಟೆಗೆ ಬಾಲ ಮತ್ತು ಕಿಶೋರ ಪ್ರತಿಭೆಗಳಿಗೆ ವಿವಿಧ ಸ್ಥಳಗಳಲ್ಲಿ ಸ್ಪರ್ಧೆ ನಡೆಯಲಿದೆ.ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಶಾಸ್ತಿçÃಯ ನೃತ್ಯ(10 ನಿಮಿಷ), ಸುಗಮ ಸಂಗೀತ (7 ನಿಮಿಷ), ಜಾನಪದ ಗೀತೆಗಳು(7 ನಿಮಿಷ).ನಗರದ ಸಾಂಸ್ಕೃತಿಕ ಸಮುಚ್ಛಯ ಆವರಣದ ನಾಡೋಜ ಸುಭದ್ರಮ್ಮ ಮನ್ಸೂರ್ ಬಯಲು ರಂಗಮAದಿರದಲ್ಲಿ ಚಿತ್ರಕಲಾ ಸ್ಪರ್ಧೆ (ಸ್ವಕಲ್ಪಿತ)-120 ನಿಮಿಷ.ನಗರದ ಸಾಂಸ್ಕೃತಿಕ ಸಮುಚ್ಛಯದ ಹೊಂಗಿರಣ ಸಭಾಂಗಣದಲ್ಲಿ ಹಿಂದೂಸ್ಥಾನಿ/ಕರ್ನಾಟಕ ಶಾಸ್ತಿçÃಯ ವಾದ್ಯ(7 ನಿಮಿಷ), ಹಿಂದೂಸ್ಥಾನಿ/ಕರ್ನಾಟಕ ಶಾಸ್ತಿçÃಯ ಸಂಗೀತ(7 ನಿಮಿಷ) ಸ್ಪರ್ಧೆಗಳು ನಡೆಯಲಿವೆ.

ನ.27 ರಂದು ಬೆಳಿಗ್ಗೆ 10 ಗಂಟೆಗೆ ಯುವಪ್ರತಿಭೆ ಮತ್ತು ಸಮೂಹ ಸ್ಪರ್ಧೆಗಳಿಗೆ ವಿವಿಧ ಸ್ಥಳಗಳಲ್ಲಿ ಸ್ಪರ್ಧೆ ನಡೆಯಲಿದೆ.ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಶಾಸ್ತಿçÃಯ ನೃತ್ಯ(10 ನಿಮಿಷ), ಸುಗಮ ಸಂಗೀತ (7 ನಿಮಿಷ), ನಾಟಕ(45 ನಿಮಿಷ).ನಗರದ ಸಾಂಸ್ಕೃತಿಕ ಸಮುಚ್ಛಯ ಆವರಣದ ನಾಡೋಜ ಸುಭದ್ರಮ್ಮ ಮನ್ಸೂರ್ ಬಯಲು ರಂಗಮAದಿರದಲ್ಲಿ ಚಿತ್ರಕಲಾ ಸ್ಪರ್ಧೆ (ಸ್ವಕಲ್ಪಿತ)-120 ನಿಮಿಷ.ನಗರದ ಸಾಂಸ್ಕೃತಿಕ ಸಮುಚ್ಛಯದ ಹೊಂಗಿರಣ ಸಭಾಂಗಣದಲ್ಲಿ ಹಿಂದೂಸ್ಥಾನಿ/ಕರ್ನಾಟಕ ಶಾಸ್ತಿçÃಯ ವಾದ್ಯ(7 ನಿಮಿಷ), ಹಿಂದೂಸ್ಥಾನಿ/ಕರ್ನಾಟಕ ಶಾಸ್ತಿçÃಯ ಸಂಗೀತ(7 ನಿಮಿಷ), ನನ್ನ ಮೆಚ್ಚಿನ ಸಾಹಿತಿ(ಆಶು ಭಾಷಣ)-7 ನಿಮಿಷ ಸ್ಪರ್ಧೆಗಳು ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*