Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಗಸ್ಟ್ 7ರಂದು ಕುಡುತಿನಿ ಭೂಸಂತ್ರಸ್ತರಿಂದ ಸಂಡೂರು ಶಾಸಕ ಮತ್ತು ಸಂಸದರ ಮನೆಗೆ ಪಾದಯಾತ್ರೆ

ಬಳ್ಳಾರಿ ಆ. 04. : ಕೆಐಎಡಿಬಿ ವತಿಯಿಂದ ತಾಲೂಕಿನ  ಕುಡುತಿನಿ ಮತ್ತು ಇತರೆ ಆರು ಗ್ರಾಮಗಳ ರೈತರಿಂದ ಬ್ರಹ್ಮಣಿ, ಲಕ್ಷ್ಮಿ ಮಿತ್ತಲ್ ಮತ್ತು ಎನ್ ಎಂ ಡಿ ಸಿ ಕಾರ್ಖಾನೆಗಳಿಗಾಗಿ  ವಶಪಡಿಸಿಕೊಳ್ಳಲಾದ ಜಮೀನಿನ ಬೆಲೆಯಲ್ಲಿ ರೈತರಿಗೆ ಮೋಸವಾಗಿದ್ದು ಜಿಲ್ಲಾ ನ್ಯಾಯಾಲಯದ ಆದೇಶದ ಪ್ರಕಾರ ಒಂದು ಕೋಟಿ ಒಂದು ಲಕ್ಷ ರೂಪಾಯಿಗಳನ್ನು ನೀಡಲು ನಾವು ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರದೊಂದಿಗೆ ಹಲವು ಬಾರಿ ಮಾತನಾಡಿದರು ಸಹ ಯಾವುದೇ ಉಪಯೋಗವಾಗಿಲ್ಲ, ಮತ್ತು ಕಳೆದ 961 ದಿನಗಳಿಂದ ಧರಣಿ ನಡೆಸುತ್ತಿದ್ದರು ಸಹ ಯಾವುದೇ ಕ್ರಮ ಕೈಗೊಳ್ಳದೆ ಇರುವ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ನಮ್ಮ ಜಮೀನಿಗೆ ನ್ಯಾಯಯುತವಾದ ಬೆಲೆಯನ್ನು ನೀಡಲು ಆಗಸ್ಟ್ 7 ರಂದು ಸಂಡೂರಿನ ಶಾಸಕ ಮತ್ತು ಸಂಸದರ ಮನೆಗೆ ಪಾದಯಾತ್ರೆಯ ಮೂಲಕ ಹೋಗಿ ಮುತ್ತಿಗೆ ಹಾಕಲಾಗುವುದು ಎಂದು ಕಾರ್ಮಿಕ ಸಂಘಟನೆಗಳ ರಾಜ್ಯ  ಮುಖಂಡರಾದ  ಯು ಬಸವರಾಜ್ ತಿಳಿಸಿದರು.


 ಅವರು ಇಂದು ನಗರದ ಪತ್ರಿಕಾ ಭವನದಲ್ಲಿ  ಈ ವಿಷಯದ ಕುರಿತು ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿ, ಕೆ ಐ ಎ ಡಿ ಬಿ ಅಥವಾ ಸರ್ಕಾರದ ಹತ್ತಿರ ನ್ಯಾಯಾಲಯದ ಆದೇಶದ ಪ್ರಕಾರ ಭೂಬೆಲೆಯನ್ನು ನೀಡಲು ಸಾಧ್ಯವಾಗದೇ ಇದ್ದಲ್ಲಿ ರೈತರಿಂದ ವಶಪಡಿಸಿಕೊಂಡ 12500 ಎಕರೆ ಜಮೀನಿನಲ್ಲಿ

ಕಾರ್ಖಾನೆಗಳಿಗೆ ಬೇಕಾದ 6,000 ಎಕರೆ ಭೂಮಿಯನ್ನು ಇಟ್ಟುಕೊಂಡು ಉಳಿದ   ಜಮೀನಿನನ್ನು ಕರ್ನಾಟಕ ಪ್ರದೇಶ ಕೈಗಾರಿಕಾ ಪ್ರದೇಶ ಅಭಿವೃದ್ಧಿ ವತಿಯಿಂದ ಅಭಿವೃದ್ಧಿಪಡಿಸಲಾದ ಜಮೀನನ್ನು ನೀಡಿ, ಅದು ಸಾಧ್ಯವಾಗದೆ ಹೋದಲ್ಲಿ ಜಿಲ್ಲಾ ನ್ಯಾಯಾಲಯದ ಆದೇಶ ಪ್ರಕಾರ ಒಂದು ಕೋಟಿ ಒಂದು ಲಕ್ಷ ರೂಪಾಯಿಗಳು ಹಾಗೂ ಅಭಿವೃದ್ಧಿಯ ವೆಚ್ಚ ಸೇರಿ ಒಟ್ಟು 1 ಕೋಟಿ 56 ಲಕ್ಷ ರೂಪಾಯಿಗಳ ನ್ಯಾಯಯುತವಾದ ಗೂಬೆಲೆಯನ್ನು ನೀಡಬೇಕು ಎಂದು ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮತ್ತು ಕೆ ಐ ಎ ಡಿ ಬಿ ಅಧಿಕಾರಿಗಳನ್ನು ಒತ್ತಾಯಿಸಿದರು.


 ಈ ಸುದ್ದಿಗೋಷ್ಠಿಯಲ್ಲಿ ಸಿಪಿಐ ನ ಜಿಲ್ಲಾ ಕಾರ್ಯದರ್ಶಿ ಸತ್ಯ ಬಾಬು, ಸಂಪತ್ ಜಂಬಣ್ಣ, bಜಲೀಲ್ ಸಾಬ್, ತಿಪ್ಪೇಸ್ವಾಮಿ ಸೇರಿದಂತೆ ಭೂಸಂತರಸ್ತ ಕುಡುತಿನಿ ರೈತರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ