Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇ.14ರಂದು ಸಾಮೂಹಿಕ ಶ್ರೀ ವೆಂಕಟೇಶ ಕಲ್ಯಾಣ ಮಹೋತ್ಸವ, ಸಾಮೂಹಿಕ ಉಪನಯನ

ಬಳ್ಳಾರಿ:07. ನಗರದ ಸತ್ಯನಾರಾಯಣ ಪೇಟೆ ಶ್ರೀ ರಾಘವೇಂದ್ರ ಮಠದಲ್ಲಿ ಮೇ.14 ರಂದು ಬಳ್ಳಾರಿ ಬ್ರಾಹ್ಮಣ ಸಂಘ ಹಾಗೂ ಶ್ರೀರಾಘವೇಂದ್ರ ಕ್ಯಾಟರಿಂಗ್ ಆಶ್ರಯದಲ್ಲಿ ಹಾಗೂ ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕರ ಫೆಡ್ ರೇಶನ್ ಸಹಕಾರದೊಂದಿಗೆ ಸಾಮೂಹಿಕ ಶ್ರೀ ವೆಂಕಟೇಶ ಕಲ್ಯಾಣ ಮಹೋತ್ಸವ ಹಾಗೂ ಸಾಮೂಹಿಕ ಉಪನಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಧ್ವವಿಜಯ ಪ್ರಶಸ್ತಿ ವಿಜೇತ, ಕ್ಯಾಟರಿಂಗ್ ಕಂಟ್ರಾಕ್ಟರ್ ಜೆ.ವಿಜಯ ವಿಠಲ ಅವರು ತಿಳಿಸಿದ್ದಾರೆ. ಪ್ರತ್ರಿ ವರ್ಷ ಮಂತ್ರಾಲಯ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರ ಆಶೀರ್ವಾದದೊಂದಿಗೆ ಹಾಗೂ ಸಮಾಜದ ಎಲ್ಲರ ಸಹಕಾರ, ಪ್ರೋತ್ಸಾಹದಿಂದ  ಸಾಮೂಹಿಕ ಉಪನಯನ ಕಾರ್ಯಕ್ರಮವನ್ನು ಕಳೆದ 5 ವರ್ಷಗಳಿಂದ ಶ್ರೀ ರಾಘವೇಂದ್ರ ಕ್ಯಾಟರಿಂಗ್ ವತಿಯಿಂದ ಹಮ್ಮಿಕೊಳ್ಳಲಾಗುತ್ತಿದೆ. ಅದರಂತೆ ಈ ವರ್ಷವೂ ಹಮ್ಮಿಕೊಳ್ಳಲಾಗಿದೆ.  ಮೇ.14ರಂದು ಬೆಳಿಗ್ಗೆ 7 ರಿಂದ 7.30 ರ ವರೆಗೆ ಸಲ್ಲುವ ವೃಷಭಲಗ್ನದಲ್ಲಿ ಉಪನಯನ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ.   ಸಾಮೂಹಿಕ ಉಪನಯನಕ್ಕೆ ಕೇವಲ 3 ಸಾವಿರ ನಿಗದಿಪಡಿಸಲಾಗಿದ್ದು, ಸಾಮೂಹಿಕ ಶ್ರೀ ವೆಂಕಟೇಶ್ ಕಲ್ಯಾಣ ಮಹೋತ್ಸವಕ್ಕೆ 150 ರೂ. ನಿಗದಿ ಮಾಡಲಾಗಿದೆ. ಆಸಕ್ತರು 99865 55640 ಸಂಖ್ಯೆಗೆ ಕರೆ ಮಾಡಿ, ತಮ್ಮ ಸಂಪೂರ್ಣ ವಿಳಾಸ, ವಟುವಿನ ಹೆಸರು, ಗೋತ್ರ ಸೇರಿದಂತೆ ಅಗತ್ಯ ಮಾಹಿತಿಯನ್ನು ತಿಳಿಸಬಹುದು. ಶ್ರೀ ವೆಂಕಟೇಶ ಕಲ್ಯಾಣೋತ್ಸವದ ನೇತೃತ್ವ ವಹಿಸಿರುವ ಅರ್ಚಕರಾದ ಪಂ.ಸತ್ಯನಾರಾಯಣ ಆಚಾರ ಹಲಕುಂದಿ 94491 35993, ಸಾಮೂಹಿಕ ಉಪನಯನ, ಅರ್ಚಕರಾದ ಪಂ.ಶ್ರೀ ದಾಸ ಆಚಾರ್ಯ, ಹಿರೇಹಾಳ್ ಕೃಷ್ಣಾಚಾರ್, ಗುರುರಾಜ ಆಚಾರ, ಪವನ ಆಚಾರ ಅವರ ನೇತೃತ್ವ ವಹಿಸಲಿದ್ದಾರೆ. ಎಲ್ಲ ಕಾರ್ಯಕ್ರಮಗಳು ಶ್ರೀಮಠದ ಆಡಳಿತಾಧಿಕಾರಿಗಳಾದ ಪಂ.ಶ್ರೀ ಪ್ರಸನ್ನಾಚಾರ್ ಅವರ ನೇತೃತ್ವದಲ್ಲಿ ನಡೆಯಲಿವೆ. ಉಪನಯನ ಕುರಿತು ಹೆಸರು ನೊಂದಾಯಿಸಿದವರು ಮೇ.14 ಬೆಳಿಗ್ಗೆ ಉದಯ 5ಕ್ಕೆ ಹಾಜರಿರಬೇಕು, ಬೇರೆ ಊರುಗಳಿಂದ ಬರುವವರಿಗೆ ಉಚಿತ ವಸತಿ, ಉಪಹಾರ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಬ್ಬರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ