ಅಥಣಿ: ಸರ್ಕಾರದ ನಿರ್ದೇಶನದಂತೆ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ಸೆ.೧೨ರಂದು ಅಥಣಿ ಪಟ್ಟಣದಲ್ಲಿ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ಆಯೋಜಿಸಲಾಗಿದೆ ಎಂದು ತಹಶೀಲ್ದಾರ್ ಸಿದ್ದರಾಯ ಭೋಸಗಿ ತಿಳಿಸಿದ್ದಾರೆ.
ಅಥಣಿ ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿ ಉದ್ದೇಶಿಸಿ ತಹಶೀಲ್ದಾರ ಸಿದ್ರಾಯ ಭೋಸಗಿ ಮಾತನಾಡಿ
ಸಹಕಾರ ಸಚಿವ ಲಕ್ಷö್ಮಣ ಸವದಿ ಅವರ ಅಧ್ಯಕ್ಷತೆಯಲ್ಲಿ ಸೆ.೧೨ರಂದು ಬೆಳಿಗ್ಗೆ ೧೧ ಗಂಟೆಯಿAದ ೩ ಗಂಟೆಯವರೆಗೆ ಅಥಣಿ ಪಟ್ಟಣದ ಎಸ್ ಎಮ್ ಎಸ್ ಕಾಲೇಜಿನ ಖೋತ ಕಲ್ಯಾಣ ಮಂಟಪದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಸಾರ್ವಜನಿಕರು ತಮ್ಮ ವಿವಿಧ ಸಮಸ್ಯೆಗಳು, ಬೇಡಿಕೆಗಳು ಹಾಗೂ ಕುಂದುಕೊರತೆಗಳಿಗೆ ಸಂಬAಧಿಸಿದ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಸಾರ್ವಜನಿಕರಿಂದ ಸ್ವೀಕರಿಸಲಾಗುವ ಅರ್ಜಿಗಳನ್ನು ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳ ಗಮನಕ್ಕೆ ತಂದು, ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು, ಸರ್ಕಾರದ ಈ ಜನಪರ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ತಲುಪಿಸುವ ನಿಟ್ಟಿನಲ್ಲಿ ಪ್ರಜಾಸೇವಾ ಕಾರ್ಯಕ್ರಮ ಮಹತ್ವದ ಹೆಜ್ಜೆಯಾಗಿದೆ ಎಂದು ಸಿದ್ರಾಯ ಭೋಸಗಿ ಹೇಳಿದರು