Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಲೋಳಿ: ನ.೧೦ರಂದು ಕಬ್ಬು, ಅರಿಷಿಣ ಕ್ಷೇತ್ರೋತ್ಸವ, ಹೋರಿಗಳ ಪ್ರದರ್ಶನ

ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಪ್ರಗತಿಪರ ರೈತ ಬಸವರಾಜ ಬಾಳಪ್ಪ ಬೆಳಕೂಡ ಅವರು ತೋಟದಲ್ಲಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಸಹಯೋಗದಲ್ಲಿ ನ.೧೦ರಂದು ಬೆಳಿಗ್ಗೆ ೧೦.೩೦ರಿಂದ ಸಂಜೆ ೫ರವರೆಗೆ ಬೆಳಗಾವಿ ವಿಭಗ ಮಟ್ಟದ ಕಬ್ಬು ಹಾಗೂ ಅರಿಷಿಣ ಬೆಳೆಯ ಕ್ಷೇತ್ರೋತ್ಸವ, ವಿಚಾರ ಸಂಕಿರಣ ಹಾಗೂ ಹಾಲು ಹಲ್ಲಿನ ಹೋರಿ ಪ್ರದರ್ಶನವನ್ನು ಏರ್ಪಡಿಸಿರುವರು.
ಅರಭಾವಿ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ. ಎಂ.ಜಿ. ಕೆರುಟಗಿ ಕಾರ್ಯಕ್ರಮವವನ್ನು ಉದ್ಘಾಟಿಸುವರು. ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ರಾಜ್ಯ ಆಡಳಿತ ಅಧ್ಯಕ್ಷ ಮಂಜುನಾಥ ಗೌಡ್ ಎಸ್.ಆರ್. ಜ್ಯೋತಿ ಬೆಳಗಿಸುವರು. ಅಧ್ಯಕ್ಷತೆಯನ್ನು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಶಂಕರಗೌಡ ಪಾಟೀಲ ವಹಿಸುವರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜ ರಾಜ್ಯ ಪ್ರತಿನಿಧಿ ಬಾಳಪ್ಪ ಬಿ. ಬೆಳಕೂಡ, ಗೋದಾವರಿ ಸಕ್ಕರೆ ಕಾರ್ಖಾನೆಯ ಕಾರ್ಯನಿರ್ವಾಹಕ ನಿರ್ದೇಶಕ ಬಾಲಚಂದ್ರ ಬಕ್ಷಿ, ನಿರ್ದೇಶಕ ಡಾ. ನಂದಕುಮಾರ ಕುಂಚಗಿ, ಬೆಳಗಾವಿ ಜಂಟಿ ಕೃಷಿ ನಿರ್ದೇಶಕ ಡಾ. ಎಚ್.ಡಿ. ಕೋಳೆಕರ, ಗೋಕಾಕ ಸಹಾಯಕ ಕೃಷಿ ನಿರ್ದೇಶಕ ಎಂ.ಎಂ. ನದಾಫ, ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಎಂ.ಎಲ್. ಜನಮಟ್ಟಿ ಭಾಗವಹಿಸುವರು.
ಉಪನ್ಯಾಸ: ಕಬ್ಬು ಬೆಳೆಯ ಬಗ್ಗೆ ಉಪನ್ಯಾಸವನ್ನು ತುಕ್ಕಾನಟ್ಟಿ ಕೆವಿಕೆ ಮಖ್ಯಸ್ಥ ಡಾ. ಡಿ.ಎ. ಮೇತ್ರಿ ಮತ್ತು ಬೇಸಾಯ ತಜ್ಞ ಎಂ.ಎನ್. ಮಲಾವಡಿ ಮಾಡುವರು. ಅರಿಷಿಣ ಬೆಳೆಯ ಕುರಿತು ಬಾಗಲಕೋಟ ತೋಟಗಾರಿಕೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಶಶಿಧರ ದೊಡಮನಿ, ಡಾ. ರಾಮನಗೌಡ ಹಡಲಗೇರಿ ಮಾಡುವರು.
ಅತಿಥಿಗಳಾಗಿ ಮಹಾಂತೇಶ ಹಟ್ಟಿ, ಸುರೇಶ ಕಬಾಡಗಿ, ಶಂಕರಗೌಡ ಪಾಟೀಲ, ಬಾಳಪ್ಪ ಬೆಳಕೂಡ, ಶಿವನಗೌಡ ಬಿರಾದಾರ, ಸಂಜಯ ಪಾಟೀಲ, ಮಲ್ಲನಗೌಡ ಪಾಟೀಲ, ಅರವಿಂದ ಕಟಗಿ, ವಿರೇಂದ್ರ ಪಾಟೀಲ, ಶಿವಪ್ಪ ಅರಹುಣಸಿ, ಜಿ. ಶಿವನಗೌಡರು, ಶಿವಪುತ್ರ ಸಪಗಾಯಿ, ನಾರಾಯಣ ಹೆಗಡೆ, ರಾಮಚಂದ್ರ ಹೆಗಡೆ ಭಾಗವಹಿಸುವರು. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ತಿಳಿಸಿರುವರು. ಭಾಗವಹಿಸುವ ಎಲ್ಲ ರೈತರಿಗೆ ಊಟ, ಉಪಹಾರ ವ್ಯವಸ್ಥೆ ಇರುವುದು ಎಂದು ಸಂಘಟಕರಾದ ಬಾಳಪ್ಪ ಬೆಳಕೂಡ ಮತ್ತು ಬಸವರಾಜ ಬಿ. ಬೆಳಕೂಡ ತಿಳಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*