Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಿ. 30 ರಂದು ರೈತ ವಿರೋಧಿ ನೀತಿ ಖಂಡಿಸಿ  ಪ್ರತಿಭಟನೆ. ಜಗದೀಶ ಬೂದಿಹಾಳ 



ಬೈಲಹೊಂಗಲ- ಕಾಂಗ್ರೆಸ್ ಸರಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಭಾರತೀಯ ಜನತಾ ಪಕ್ಷದಿಂದ ಬೆಳಗಾವಿಯಲ್ಲಿ ಜು. 30 ರಂದು ಬುಧವಾರ ಬೆಳಿಗ್ಗೆ 10-00 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಮುಂಬಾಗದಲ್ಲಿ ರಾಣಿ ಚೆನ್ನಮ್ಮ ವೃತ್ತದಿಂದ ಚಕ್ಕಡಿ, ಟ್ಯ್ರಾಕ್ಟರ್‍ಗಳ ಮೂಲಕ ರ್ಯಾಲಿ ನಡೆಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು. ರೈತರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜಗದೀಶ ಬೂದಿಹಾಳ ಕರೆ ನೀಡಿದರು.


ಅವರು ನಗರದ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕಾಂಗ್ರೆಸ್ ಸರಕಾರದ ಆಡಳಿತಕ್ಕೆ ಬಂದಾಗಿನಿಂದ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆರಂಭಿಸಿದ್ದ ಮಹತ್ವಕಾಂಕ್ಷೆಯ ಹಲವಾರು ಯೋಜನೆಗಳನ್ನು ಪ್ರಸ್ತುತ ಸರಕಾರ ಗ್ಯಾರಂಟಿ ಯೋಜನೆಗಳ ನೆಪದಲ್ಲಿ ಕಡಿತಗೊಳಿಸಿ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ವಿದ್ಯಾನಿಧಿ,ಬೈಸಿಕಲ ಭಾಗ್ಯ,ರೈತರಿಗೆ ನೀಡಲಾಗುತ್ತಿದ್ದ ಹಾಲಿನ ಪ್ರೋತ್ಸಾಹ ಧನ ಸಂಪೂರ್ಣ ನಿಲ್ಲಿಸಲಾಗಿದೆ ಎಂದು ಕಿಡಿಕಾರಿದರು.


 ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುರು ಮೆಟಗುಡ್ಡ ಮಾತನಾಡಿ, ಬಿಜೆಪಿ ಆಡಳಿದ ಸಂದರ್ಭದಲ್ಲಿ ಕಿಸಾನ್ ಸಮ್ಮಾನ ಹೆಸರಿನಲ್ಲಿ ನೀಡಲಾಗುತ್ತಿದ್ದ ರಾಜ್ಯದ 52 ಲಕ್ಷ ರೈತರಿಗೆ ತಲಾ 4000 ರೂ ಗಳನ್ನು ನಿಲ್ಲಿಸಲಾಗಿದೆ. ರೈತರಿಗೆ ಪಂಪ್ ಸೆಟ್ ಅಳವಡಿಸಲು ಬಿಜೆಪಿ ಸರಕಾರದಲ್ಲಿ 25000, ನಿಗದಪಡಿಸಿದ್ದು, ಪ್ರಸ್ತುತ ಭ್ರಷ್ಟ ಕಾಂಗ್ರೆಸ್ ಆಡಳಿತ ಅದನ್ನು 3 ಲಕ್ಷಕ್ಕೆ ಏರಿಕೆ ಮಾಡಿ ರೈತರಿಗೆ ಹೊರೆಯಾಗಿಸಿದೆ. ಅಲ್ಲದೇ ಬಿತ್ತನೆ ಬೀಜ ಪ್ರತಿ ಕ್ವೀಟಾಲ್ ಗೆ ಶೇ 20 ಏರಿಕೆ. ಬರ ಪರಿಹಾರದ ಹೆಸರಿನಲ್ಲಿ 3454 ಕೋಟಿ ಲೂಟಿ ಮಾಡುತ್ತಾ ಜನರನ್ನು ಹಗಲು ದರೋಡೆ ಮಾಡುತ್ತಿದೆ ಎಂದು ಗಂಭೀರವಾಗಿ ಅಪಾದಿಸಿದರು.


ರಾಜ್ಯದ ರೈತರಿಗೆ 6.30 ಲಕ್ಷ ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರ ಅವಶ್ಯಕತೆ ಇದ್ದು, ಈಗಾಗಲೇ ಕೇಂದ್ರ ಸರಕಾರ 8.73 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಪೂರೈಕೆ ಮಾಡಿರುತ್ತದೆ. ಉಳಿದ 2.43 ಲಕ್ಷ ಮೆಟ್ರಿಕ್ ಟನ್‍ನ್ನು ಕಾಳ ಸಂತೆಯಲ್ಲಿ ಕಾಂಗ್ರೆಸ್ ಮಾರಾಟ ಮಾಡುತ್ತಿದೆ ಎಂದು ಆಕ್ರೋಶ ಹೊರ ಹಾಕಿದರು. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ 3400 ಕ್ಕಿಂತ ಹೆಚ್ಚು ರೈತರು ಆತ್ಮ ಹತ್ಯೆಗೆ ಶರಣಾಗಿರುವುದು ದುರದೃಷ್ಟಕರ ಸಂಗತಿ. ಭೂ ಸಿರಿ ಯೋಜನಯಡಿ ಸಿರಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟರ್ ಗೆ ನೀಡುವ 10000 ರೂ ಪ್ರೋತ್ಸಾಹ ಧನವನ್ನು ನಿಲ್ಲಿಸಲಾಗಿದೆ.ಹಾವೇರಿ ಮತ್ತು ರಾಣೇಬೆನ್ನೂರಿನಲ್ಲಿ ರಸಗೊಬ್ಬರ ಖರೀದಿಸಲು ಆಗಮಿಸಿದ ರೈತರ ಮೇಲೆ ಪೋಲೀಸರಿಂದ ಲಾಠಿ ಚಾರ್ಜ್ ಮಾಡಿಸಿದ್ದು ಖಂಡನೀಯವಾಗಿದೆ. ಈಗಾಗಲೇ ರಾಜ್ಯದಲ್ಲಿ ಅವೈಜ್ಞಾನಿವಾಗಿ ರಸಗೊಬ್ಬರ ದಾಸ್ತಾನು ಶೇಖರಣೆ ಮಾಡಿದ್ದರಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ರೈತರಿಗೆ ರಸಗೊಬ್ಬರದ ಅಭಾವ ಉಂಟಾಗಿದ್ದು ಕೂಡಲೇ ರೈತರಿಗೆ ವಿತರಿಸುವಂತೆ ಆಗ್ರಹಿಸಿದರು.


ಸರಕಾರ ಸೇರಿದಂತೆ ಕೃಷಿ ಸಚಿವರು ಇಲಾಖೆ ಅಧಿಕಾರಿಗಳು ಸಂಪೂರ್ಣ ನಿಷ್ಕ್ರಿಯಗೊಂಡಿದ್ದಾರೆ.ಇದೇ ರೀತಿ ರಾಜ್ಯದಲ್ಲಿನ ಹಲವಾರು ರೈತ ವಿರೋಧಿ ನೀತಿಯನ್ನು ಖಂಡಿಸಿ ಜು. 30 ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.


ಪ್ರತಿಭಟನೆ ಯಲ್ಲಿ ಜಿಲ್ಲೆಯ ಚಿಕ್ಕೋಡಿ, ಬೆಳಗಾವಿ ನಗರ, ಗ್ರಾಮಾಂತರ, ಸೇರಿದಂತೆ ವಿವಿಧ ರೈತ ಸಂಘಟನೆಗಳು, ಜಿಲ್ಲೆಯ ಬಿಜೆಪಿಯ ಹಾಲಿ, ಮಾಜಿ ಶಾಸಕರು,ಪಕ್ಷದ ಪ್ರಮುಖರು,ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆ ಯಲ್ಲಿ ಭಾಗವಸಬೇಕೆಂದು ಮನವಿ ಮಾಡಿದರು.


ಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಸುಭಾಶ ತುರಮರಿ, ಬಿಜೆಪಿ ಜಿಲ್ಲಾ ಸಹಕಾರ ಪ್ರಕೋಷ್ಠದ ಸಂಚಾಲಕ ಸುನೀಲ ಮರಕುಂಬಿ, ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ್ ಕಡಿ, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಹಡಪದ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಲಕ್ಕಪ್ಪ ಕಾರಗಿ, ವಿಶಾಲ ಬೋಗುರ, ಪುರಸಭೆ ಸದಸ್ಯ ಸಾಗರ ಭಾವಿಮನಿ, ಆಕಾಶ ಮಲಬನ್ನವರ ಇತರರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ