Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತೀಯ ನ್ಯಾಯ ಸಂಹಿತೆ 2023’ರ ಒಂದು ದಿನದ ಕಾರ್ಯಗಾರ




ಬಳ್ಳಾರಿ,ಜು.25. ಕೇಂದ್ರ ಸಂವಹನ ಇಲಾಖೆ, ವುಂಕಿ ಸಣ್ಣ ರುದ್ರಪ್ಪ ಕಾನೂನು ಮಹಾವಿದ್ಯಾಲಯ ಮತ್ತು ಕನ್ನಡ ಸಾಹಿತ್ಯ ಪರಿಷತ್ ಇವರ ಸಂಯುಕ್ತಾಶ್ರಯದಲ್ಲಿ ನಗರದ ವಿಎಸ್ ಲಾ ಕಾಲೇಜು ಸಭಾಂಗಣದಲ್ಲಿ ಬುಧವಾರದಂದು ‘ಭಾರತೀಯ ನ್ಯಾಯ ಸಂಹಿತೆ  ೨೦೨೩’ ರ ಕುರಿತು ಒಂದು ದಿನದ ಕಾರ್ಯಗಾರ ನಡೆಯಿತು.


ವಿಎಸ್ ಲಾ ಕಾಲೇಜಿನ ಅಧ್ಯಕ್ಷ ನರೇಂದ್ರ ಬಾಬು ಅವರು ಕಾರ್ಯಾಗಾರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮೂರು ಹೊಸ ಕಾನೂನುಗಳ ಬಗ್ಗೆ ಕಾರ್ಯಾಗಾರ ನಡೆಯುವುದರಿಂದ ಕಾನೂನು ವಿದ್ಯಾರ್ಥಿಗಳಿಗೆ ತುಂಬಾ ಉಪಯುಕ್ತವಾಗಲಿದೆ ಎಂದು ಹೇಳಿದರು
ವಿಎಸ್ ಲಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ರಂಜನಿ ಕುಮಾರಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇಂದ್ರ ಸಂವಹನ ಇಲಾಖೆಯ ಜಾಗೃತಿ ಕಾರ್ಯಕ್ರಮ ತುಂಬಾ ಉಪಯುಕ್ತವಾಗಿದೆ ಎಂದು ಹೇಳಿದರು.


ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ವಕೀಲರಾದ ಗುರು ಬಸವರಾಜ ಅವರು ‘ಭಾರತೀಯ ನ್ಯಾಯ ಸಂಹಿತೆ ೨೦೨೩’ ರ ಬಗ್ಗೆ ಸವಿಸ್ತಾರವಾದ ಮಾಹಿತಿ ನೀಡಿದರು.


ಇನ್ನೊರ್ವ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ದೂರದರ್ಶನದ ನಿವೃತ್ತ  ಉಪ ನಿರ್ದೇಶಕ ಡಾ.ಕೆ.ಸುಧಾಕರ್ ರಾವ್ ಅವರು ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಹೊಸ ಕಾನೂನುಗಳು ಇಡೀ ನ್ಯಾಯ ವ್ಯವಸ್ಥೆಗೆ ಕಾಯಕಲ್ಪ ನೀಡಿದೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಸಂಗೀತ ಮತ್ತು ನಾಟಕ ವಿಭಾಗದ ನೇತ್ರ ಕಲಾ ಸಂಘ ಸಿರುಗುಪ್ಪ ತಂಡದಿಂದ ಜಾಗೃತಿ ಗೀತೆ ಹಾಗೂ ಮೂರು ಹೊಸ ಕಾನೂನುಗಳ ಬಗ್ಗೆ ನಾಟಕದ ಮೂಲಕ ಪ್ರದರ್ಶನ ನೀಡಿ ಜಾಗೃತಿಗೊಳಿಸಿದರು.


ಈ ಸಂದರ್ಭದಲ್ಲಿ ಬಳ್ಳಾರಿ ಕೇಂದ್ರ ಸಂವಹನ ಇಲಾಖೆಯ ಅಧಿಕಾರಿ ಎನ್.ರಾಮಕೃಷ್ಣ, ವಕೀಲರಾದ ಜಿ.ನೀಲನಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ.ನಿಷ್ಟಿ ರುದ್ರಪ್ಪ, ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಚಂದ್ರಿಕಾ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ