Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ನಗರದ ವಿವಿಧ ಸೌಲಭ್ಯಗಳಿಗಾಗಿ ಒಂದು ಲಕ್ಷ ಸಹಿ ಸಂಗ್ರಹ : ಬಿ ಎನ್ ಎಚ್ ಎಸ್ ಸೋಮಶೇಖರ್ 





 ಬಳ್ಳಾರಿ ಜೂನ್ 27 : ನಗರದಲ್ಲಿ ಕುಡಿಯುವ ನೀರಿನ ನಲ್ಲಿಯಲ್ಲಿ ಚರಂಡಿ ನೀರು ಮಿಶ್ರಣವಾಗುವುದನ್ನು ತಡೆಯುವುದು , ರಿಂಗ್ ರಸ್ತೆ ನಿರ್ಮಿಸುವುದು, ಮೋತಿ ಬ್ರಿಡ್ಜ್ ಅಗಲೀಕರಣ ಮಾಡುವುದು, ಸುಧಾ ಕ್ರಾಸ್ ಮೇಲ್ ಸೇತುವೆ ಪೂರ್ಣಗೊಳಿಸುವುದು  ಸೇರಿದಂತೆ ಇತರೆ ತುರ್ತು ಕೆಲಸಗಳನ್ನು ಕೈಗೊಳ್ಳದೆ ನಗರದಲ್ಲಿ ಎಲ್ಲಾ ಕಡೆ ವಿವಿಧ ಕಾಮಗಾರಿಗಳನ್ನು ಆರಂಭಿಸುತ್ತಿದ್ದಾರೆ ಒಂದು ಕಾಮಗಾರಿಯನ್ನು ಮುಗಿಸಿದ ಮೇಲೆ ಮತ್ತೊಂದನ್ನು ಕೈಗೊಳ್ಳುವುದು,  ಅವೈಜ್ಞಾನಿಕ ಮತ್ತು ಅನಾವಶ್ಯಕ ಕಾಮಗಾರಿಗಳನ್ನು ಆರಂಭಿಸುತ್ತಿದ್ದಾರೆ.  ಇದರಿಂದ ಬಳ್ಳಾರಿ ನಗರದ ಸಾರ್ವಜನಿಕರಿಗೆ ಬಹಳ ತೊಂದರೆ ಆಗುತ್ತದೆ, ನಗರದ ಮೂಲಭೂತ ಸೌಲಭ್ಯಗಳನ್ನು ಸಮರ್ಪಕ ರೀತಿಯಲ್ಲಿ ಒದಗಿಸಿ ಕೊಡುವಂತೆ ಆಗ್ರಹಿಸಿ ಜೂನ್ 30 ರಿಂದ ಜುಲೈ 23 ವರೆಗೆ ನಗರದ ಕೌಲ್  ಬಜಾರ್, ಮೋತಿ ಸರ್ಕಲ್, ದುರ್ಗಮ್ಮ ಗುಡಿ, ರಾಯಲ್ ಸರ್ಕಲ್ ಸೇರಿದಂತೆ ಹಲವಾರು ಕಡೆಯಲ್ಲಿ ಒಂದು ಲಕ್ಷ ಸಹಿಯನ್ನು ಸಂಗ್ರಹಿಸುವ ಮೂಲಕ ಪ್ರತಿಭಟನೆಯನ್ನು ಬಳ್ಳಾರಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗುವುದು ಎಂದು ಸಂಚಾಲಕರಾದ ಸೋಮಶೇಖರ್ ತಿಳಿಸಿದರು.


 ಅವರ ಇಂದು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿ, ನಗರದ ಮೂಲಭೂತ ಸೌಭಾಗ್ಯ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಈಗಾಗಲೇ ನಾವು ಹೋರಾಟ ಸಮಿತಿಯಿಂದ ನಗರ ಪಾಲಿಕೆ  ಆಯುಕ್ತರು, ಜಿಲ್ಲಾಧಿಕಾರಿಗಳು ಸೇರಿದಂತೆ ಹಲವರಿಗೆ ಮನವಿಯನ್ನು ಮಾಡಿಕೊಂಡಿದ್ದೇವೆ ಆದರೆ ಇಲ್ಲಿಯವರೆಗೆ ಯಾರು ಕೂಡ ನಗರಕ್ಕೆ ಮೂಲ ಸೌಲಭ್ಯ ಕಲ್ಪಿಸಿ ಕೊಡುವಲ್ಲಿ   ವಿಫಲರಾಗಿದ್ದಾರೆ.


 ಆದರಿಂದ ನಾವುಗಳು ದಿನಾಂಕ ಜುಲೈ 27ರಂದು ಬೃಹತ್ ಸಮಾವೇಶವನ್ನು ನಗರದಲ್ಲಿ ಸಂಘಟಿಸಲು   ನಿರ್ಧರಿಸಲಾಗಿದೆ, ಈ ಹೋರಾಟಕ್ಕೆ ಬಳ್ಳಾರಿಯ ನಾಗರಿಕರು ಎಲ್ಲ ರೀತಿಯಿಂದ ಬೆಂಬಲಿಸಿ ಯಶಸ್ವಿಗೊಳಿಸಬೇಕೆಂದು ಈ ಸಂದರ್ಭದಲ್ಲಿ ಮನವಿ ಮಾಡಿದರು.



 ಈ ಪತ್ರಿಕಾಗೋಷ್ಠಿಯಲ್ಲಿ ನಿವೃತ್ತ ಉಪನ್ಯಾಸಕರಾದ ಯು ನರಸಣ್ಣ, ಮುರ್ಚಾಜ್ ಸಾಬ್, ಡಾಕ್ಟರ್ ಪ್ರಮೋದ್, ಎಸ್ ಯು ಸಿ ಐ ನ ಗೋವಿಂದ,ವಿದ್ಯಾ ಸೇರಿದಂತೆ ಇತರ ಇದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ