Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತದ ಗುರುಪರಂಪರೆ ಶ್ರೇಷ್ಠವಾದದ್ದು: ಹೇಮಾ ಸರದಿಸಾಯಿ

ಬೆಳಗಾವಿ: "ಭಾರತೀಯ ಸಂಸ್ಕೃತಿಯಲ್ಲಿ ಗುರುಪೂರ್ಣಿಮೆಗೆ ವಿಶೇಷ ಮಹತ್ವವಿದೆ. ಅಜ್ಞಾನ, ಅಂಧಕಾರವನ್ನು ಹೋಗಲಾಡಿಸಿ ಜ್ಞಾನದ ಬೆಳಕನ್ನು ನೀಡುವವರು 'ಗುರುಗಳು.  ಯಾವುದೇ   ಒಬ್ಬ ವ್ಯಕ್ತಿ ಪ್ರಖ್ಯಾತಿ ಪಡೆಯಲು ಗುರುವಿನ ಶಕ್ತಿಯೇ ಆಸರೆಯಾಗಲಿದೆ " ಎಂದು ಆರ್ಟ್ ಆಫ್ ಲಿವಿಂಗ್ ಶಿಕ್ಷಕಿ ಹೇಮಾ ಸರದಿಸಾಯಿ ಹೇಳಿದರು.

ನಗರದ ಗಾಂಧಿ ಭವನದಲ್ಲಿ ಭಾನುವಾರ  ಸನ್ 2024-25 ನೇ ಸಾಲಿನ ಲಿಂಗಾಯತ ಮಹಿಳಾ ಸಮಾಜ ಹಾಗೂ " ದಿ ಆರ್ಟ್ ಆಪ್ ಲಿವಿಂಗ್  " ವತಿಯಿಂದ ಆಯೋಜಿಸಲಾದ  ಗುರು ಪೂರ್ಣಿಮಾ ಕಾರ್ಯಕ್ರಮ
ಉದ್ಘಾಟಿಸಿ ಅವರು ಮಾತನಾಡಿದರು.

ಅಪಹರಿಸಲಾಗದ ಸಂಪತ್ತಾದ 'ವಿದ್ಯೆ' ಯನ್ನು ಶಿಷ್ಯರಿಗೆ ಧಾರೆ ಎರೆದು, ಸಮಾಜಕ್ಕೆ ಮಾದರಿ ವ್ಯಕ್ತಿಗಳನ್ನು ರೂಪಿಸುವ  ಶಕ್ತಿ ಗುರುಗಳಿಗೆ ಕೈಯಲ್ಲಿದೆ. ಗುರುಗಳು ವಿದ್ಯಾರ್ಥಿಗಳಿಗೆ ಜ್ಞಾನ ನೀಡಿ ಬಾಳಿಗೆ ಬೆಳಕು  ನೀಡುವವರು ಎನ್ನುತ್ತ,  12 ನೇ ಶತಮಾನದ ಬಸವ ಯುಗವು ವಚನ ಸಾಹಿತ್ಯದಿಂದ ಜಗಜಾಹಿರಾಗಿದೆ. ಬಸವಣ್ಣವರು ವಚನಗಳ ಮೂಲಕ ಸಮಾಜವನ್ನು ತಿದ್ದಿದವರು, ಜ್ಞಾನದ ಬೆಳಕು ಚೆಲ್ಲಿದವರು.  ಜಗದ್ಗುರು ಮಹಾ ಮಾನವತಾವಾದಿ ಬಸವಣ್ಣನವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರ ಮಾರ್ಗದರ್ಶನದಲ್ಲಿ ನಡೆಯೋಣ.   ಅದರಂತೆ, ಜಾಗತಿಕ ಮಾನವತಾವಾದಿ ಮತ್ತು ಶಾಂತಿದೂತರಾದ, ದಿ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಗುರುದೇವ ಶ್ರೀ ಶ್ರೀ ರವಿಶಂಕರ್  ಗುರೂಜಿ ಅವರು ಸಮಾಜ ಬೆಳಕು,  ಸಮಾಜವನ್ನು ಪ್ರೀತಿಸುವ ಮೂಲಕ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂದು ಸಾರಿ ಹೇಳಿದವರು.

ಸಮಾಜಮುಖಿ ಕಾರ್ಯಗಳಿಗೆ ಸದಾ ಮೀಡಿಯುವ ಮಹಿಳಾ ಲಿಂಗಾಯತ ಸಮಾಜದ ಸಂಘಟನೆಯ ಇನ್ನು ಎತ್ತರಕ್ಕೆ ಬೆಳೆಯಬೇಕು, ಸಂಘಟನೆಯೂ ಇನ್ನಷ್ಟು ಬಲಿಷ್ಠಗೊಳಬೇಕು ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ  ಲಿಂಗಾಯತ ಮಹಿಳಾ ಸಮಾಜದ ಅಧ್ಯಕ್ಷೆ ಸುನಿತಾ ಪಾಟೀಲ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.  ಖಜಾಂಚಿ ಶೋಭಾ ಪಾಟೀಲ, ಲಿಂಗಾಯತ ‌ಮಹಿಳಾ ಸಮಾಜದ ಸಂಸ್ಥಾಪಕರರಾದ ಶೈಲಜಾ  ಭೀಂಗೆ, ರತ್ನಪ್ರಭಾ ಬೆಲ್ಲದ , ಜಯಶೀಲಾ ಪಾಟೀಲ್, ಕಾರ್ಯದರ್ಶಿ ಶಾರದಾ ಪಾಟೀಲ ನಿರೂಪಿಸಿದರು. ಸಹ ಕಾರ್ಯದರ್ಶಿ  ವಿದ್ಯಾ ಚಂದ್ರಶೇಖರ ಗೌಡರ ವಂದಿಸಿದರು‌ ಹಾಗೂ ಇತರರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ