LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸ್ಪೀಕರ್ ವಿರುದ್ಧ ಏಕಪಕ್ಷಿಯ ಆರೋಪ: ಶಾಸಕರ ಅಸಮಾಧಾನ

ಬೆಂಗಳೂರು, ಜುಲೈ.22: ಮುಂಗಾರು ಅಧಿವೇಶನಲ್ಲಿ ಕಲಾಪ ನಡೆಸಿದ ವೈಖರಿ ಚ್ಯುತಿ ತರುವಂತಿದೆ. ವಿಪಕ್ಷಗಳಿಗೆ ಚರ್ಚೆಗೆ ಸಮಯ ನೀಡುತ್ತಿಲ್ಲ. ಸ್ಪೀಕರ್ ಏಕಪಕ್ಷಿಯವಾಗಿದ್ದಾರೆ ಎಂದು ಆರೋಪಿ ಕೆಲ ಶಾಸಕರು ಸ್ಪೀಕರ್ ಯು.ಟಿ. ಖಾದರ್  ಅವರಿಗೆ ಪತ್ರ ಬರೆದು ಅಸಮಾಧಾನ ಹೊರ ಹಾಕಿದ್ದಾರೆ. ಕಲಾಪದ ಮೇಲೆ ವಿರೋಧ ಪಕ್ಷಗಳಿಗೆ ಚರ್ಚೆ ಮಾಡಲು ಬಿಡದೆ ಸ್ವ ಪಕ್ಷ ಕಾಂಗ್ರೆಸ್​​ಗೆ ಹೆಚ್ಚಿನ ಆಧ್ಯತೆ ನೀಡಿದ್ದಾರೆ. ವಿಪಕ್ಷಗಳಿಗೆ ಅವಕಾಶವನ್ನೇ ನೀಡದಿರುವುದು ಪ್ರಜಾತ೦ತ್ರ ವ್ಯವಸ್ಥೆ ಅಪಾಯಕ್ಕೆ ಜಾರುತ್ತಿದೆಯೇನೋ ಎ೦ಬ ಅನುಮಾನ ಬರುವುದಕ್ಕೆ ಕಾರಣವಾಗಿದೆ ಎಂದು ಶಾಸಕರು ಪತ್ರ ಬರೆದು ಯುಟಿ ಖಾದರ್ ನಡೆಗೆ ಕಿಡಿಕಾರಿದ್ದಾರೆ.

ಸಂಸದೀಯ ವ್ಯವಹಾರ ಹಾಗೂ ಗುಣಮಟ್ಟದ ಕಲಾಪ ನಿರ್ವಹಣೆಯ ಕಾರಣಕ್ಕಾಗಿ ಕರ್ನಾಟಕ ವಿಧಾನಸಭೆ ಇಡೀ ದೇಶಕ್ಕೆ ಮಾದರಿಯಾಗಿದೆ. ಅತಿ ಹೆಚ್ಚು ಬಾರಿ ಗೆದ್ದ ಶಾಸಕರ ಪೈಕಿ ಒಬ್ಬರಾಗಿರುವ ನಿಮಗೆ ಇದು ತಿಳಿಯದ ಸ೦ಗತಿಯೇನು ಅಲ್ಲ. ಶ್ರೀ ವೈಕುಂಠ ಬಾಳಿಗರಿ೦ದ ಮೊದಲ್ಕೊಂಡು ಇಲ್ಲಿವರೆಗೆ ಸಭಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ ಪ್ರತಿಯೊಬ್ಬ ಸ್ಪೀಕರ್‌ ತಮ್ಮದೇ ಆದ ಶೈಲಿಯಲ್ಲಿ ಕರ್ತವ್ಯ ನಿರ್ವಹಿಸಿದರೂ ಅವರ ಉದ್ದೇಶ ಮಾತ್ರ ಗುಣಮಟ್ಟದ ಕಲಾಪದ ಜೊತೆಗೆ ಶಾಸನ ಸಭೆ ಜನಹಿತದ ಚರ್ಚೆಗೆ ಧ್ವನಿಯಾಗಬೇಕು ಎ೦ಬುದೇ ಆಗಿತ್ತು. ಕಾಂಗ್ರೆಸ್‌ ಪಕ್ಷದವರೇ ಆಗಿದ್ದರೂ ಸ್ಪೀಕರ್‌ ಸ್ಥಾನದಲ್ಲಿ ಕುಳಿತ ಹಿರಿಯರಾದ ಕಾಗೋಡು ತಿಮ್ಮಪ್ಪ, ರಮೇಶ್ ಕುಮಾರ್‌ ಈ ವಿಚಾರದಲ್ಲಿ ಇಡಿ ದೇಶಕ್ಕೆ ಮಾದರಿಯಾಗಿ ಸಭಾಧ್ಯಕ್ಷ ಸ್ಥಾನದ ಘನತೆಯನ್ನು ಎತ್ತಿ ಹಿಡಿದಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್