LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಒಂದೆ ಒಂದು ಸಲ..  ದಿ ಡೆವಿಲ್ ಹಾಡು ಬಿಡುಗಡೆ

     ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ ಬಹುನಿರೀಕ್ಷಿತ 'ದಿ ಡೆವಿಲ್' ಚಿತ್ರದ 'ಒಂದೆ ಒಂದು ಸಲ' ಎಂಬ ಯುಗಳ ಗೀತೆ ಬಿಡುಗಡಯಾಗಿದೆ.


      ಪ್ರಮೋದ್ ಮರವಂತೆ ಬರೆದಿರುವ ಈ ಹಾಡನ್ನು ಕಪಿಲ್ ಕಪಿಲನ್ ಹಾಗೂ ಚಿನ್ಮಯಿ ಶ್ರೀಪಾದ ಅವರು ಹಾಡಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಸಂತು ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ದರ್ಶನ್ ಹಾಗೂ ನಾಯಕಿ ರಚನ ರೈ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಹಾಡು ಸರಿಗಮಪ ಮ್ಯೂಸಿಕ್ ಚಾನಲ್ ಮೂಲಕ ಬಿಡುಗಡೆಯಾಗಿದೆ.

     ಈ ಹಾಡಿಗೂ ಮುನ್ನ ಬಿಡುಗಡೆಯಾದ 'ಇದ್ರೆ ನೆಮ್ದಿಯಾಗ್ ಇರ್ಬೇಕ್' ಹಾಡಂತೂ ಮಿಲಿಯನ್ ಗಟ್ಟಲೆ ವೀಕ್ಷಣೆಯಾಗಿ ಟ್ರೆಂಡಿಂಗ್ ನಲ್ಲಿದೆ. ಈ ಚಿತ್ರ ಡಿಸೆಂಬರ್ 12 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.


     ಸುಧಾಕರ್ ಎಸ್. ರಾಜ್ ಅವರ ಛಾಯಾಗ್ರಹಣವಿರುವ 'ದಿ ಡೆವಿಲ್' ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್  ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಸಾಹಸ ನಿರ್ದೇಶನವಿದೆ. ತಶ್ವಿನಿ ವೀರ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿರುವ 'ದಿ ಡೆವಿಲ್' ಚಿತ್ರಕ್ಕೆ ಕಾಂತರಾಜ್ ಎಸ್ ಎಸ್ ಸಂಭಾಷಣೆ ಬರೆದಿದ್ದಾರೆ. ಚೇತನ್ ಹಾಗೂ ತಶ್ವಿನಿ ವಸ್ತ್ರವಿನ್ಯಾಸ ಮಾಡಿದ್ದಾರೆ. ತುಳಸಿ,‌ ಅಚ್ಯುತಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸಪ್ರಭು , ಶೋಭ್ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ