Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ. ಇದು ಟ್ರೇಲರ್ ಅಷ್ಟೇ: ರಕ್ಷಣಾ ಸಚಿವ ರಾಜನಾಥ್ ಸಿಂಗ್


ನವದೆಹಲಿ: ನಾವು ಪಾಕಿಸ್ತಾನಕ್ಕೆ ಸಮಯ ನೀಡಿದ್ದೇವೆ. ಅವರ ನಡವಳಿಕೆ ಸುಧಾರಿಸಿದರೆ ಸರಿ, ಇಲ್ಲದಿದ್ದರೆ, ಅದಕ್ಕೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ. ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ. ಸದ್ಯ ಏನೇ ನಡೆದರೂ ಅದು ಕೇವಲ ಟ್ರೇಲರ್ ಮಾತ್ರ. ಸರಿಯಾದ ಸಮಯ ಬಂದಾಗ, ನಾವು ಪೂರ್ತಿ ಸಿನಿಮಾವನ್ನು ಜಗತ್ತಿಗೆ ತೋರಿಸುತ್ತೇವೆ ಎಂದು ರಕ್ಷಣಾ ಸಚಿವರು ಎಚ್ಚರಿಕೆ ನೀಡಿದ್ದಾರೆ.


ಆಪರೇಷನ್ ಸಿಂಧೂರ ವೇಳೆ ಭಾರತೀಯ ವಾಯುಪಡೆ ಮತ್ತು ಸಶಸ್ತ್ರ ಪಡೆಗಳ ಅಸಾಧಾರಣ ಪ್ರದರ್ಶನವನ್ನು ಶ್ಲಾಘಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಇದು ಭಾರತದ ಮಿಲಿಟರಿ ಶಕ್ತಿ ಮತ್ತು ಸನ್ನದ್ಧತೆಗೆ ಒಂದು ಅದ್ಭುತ ನಿದರ್ಶನವಾಗಿದೆ ಎಂದರು.


 ಶುಕ್ರವಾರ ಗುಜರಾತ್‌ನ ಭುಜ್ ವಾಯು ನೆಲೆಗೆ ಭೇಟಿ ನೀಡಿ, "ವಾಯುಪಡೆಯ ವೀರ ಯೋಧರ" ಜೊತೆ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ರಕ್ಷಣಾ ಸಚಿವರು, "ನಮ್ಮ ವಾಯುಪಡೆಯು ತನ್ನ ರ್ಯ, ಧೈರ್ಯ ಮತ್ತು ವೈಭವದಿಂದ ಹೊಸ ಎತ್ತರ ತಲುಪಿದೆ. ಭಯೋತ್ಪಾದನೆಯ ವಿರುದ್ಧದ ಆಪರೇಷನ್ ಸಿಂಧೂರ ಅಭಿಯಾನವನ್ನು ವಾಯುಪಡೆ ಪರಿಣಾಮಕಾರಿಯಾಗಿ ಮುನ್ನಡೆಸಿದೆ" ಎಂದು ಹೊಗಳಿದರು.


ಆಪರೇಷನ್ ಸಿಂಧೂರದಲ್ಲಿ ಶತ್ರುಗಳ ಮೇಲೆ ಪ್ರಾಬಲ್ಯ ಸಾಧಿಸುವುದಷ್ಟೇ ಅಲ್ಲ, ನಾಶ ಮಾಡುವುದರಲ್ಲೂ ಭಾರತೀಯ ಸಶಸ್ತ್ರ ಪಡೆಗಳು ಯಶಸ್ವಿಯಾಗಿವೆ. ಪಾಕ್​​ನ ಹಲವು ವಾಯು ನೆಲೆಗಳು ನಾಶವಾಗಿವೆ. ಪಾಕಿಸ್ತಾನದಲ್ಲಿನ 9 ಉಗ್ರರ ನೆಲೆಗಳನ್ನು ಭಾರತ ಧ್ವಂಸಗೊಳಿಸಿದ್ದನ್ನು ಇಡೀ ವಿಶ್ವವೇ ನೋಡಿದೆ. ಈ ಮೂಲಕ ನವ ಭಾರತದ ಸಂದೇಶವನ್ನು ಜಗತ್ತಿಗೆ ರವಾನಿಸಿದ್ದೀರಿ ಎಂದು ಸೇನಾ ಸಿಬ್ಬಂದಿಯನ್ನು ಉದ್ದೇಶಿಸಿ ರಾಜನಾಥ್ ಸಿಂಗ್ ಮಾತನಾಡಿದರು.


ಪಾಕಿಸ್ತಾನಕ್ಕೆ ಐಎಂಎಫ್ ಹಣಕಾಸು ನೆರವು ನೀಡುವುದನ್ನು ಮರು ಪರಿಶೀಲಿಸಬೇಕು. ಸದ್ಯದ ಮಟ್ಟಿಗೆ ಪಾಕಿಸ್ತಾನಕ್ಕೆ ನೀಡುವ ಹಣಕಾಸು ಸೇರಿ ಯಾವುದೇ ನೆರವು ಕೂಡ ಭಯೋತ್ಪಾದನೆಗೆ ನೀಡಿದಂತಾಗಲಿದೆ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ.







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ