Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳಾ ಮೀಸಲಾತಿ ಮಸೂದೆ ವಿರೋಧ : ಕಾಂಗ್ರೆಸ್ ವಿರುದ್ಧ ಜೆಡಿಎಸ್ ಆಕ್ರೋಶ 

ಬಳ್ಳಾರಿ, ಏ.21: ಕೇಂದ್ರ ಸರ್ಕಾರ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ವತಿಯಿಂದ ನಗರದಲ್ಲಿ ಭಾರೀ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಳ್ಳಲಾಯಿತು.
ನಗರದ ಜಿಲ್ಲಾ ಜೆಡಿಎಸ್ ಕಚೇರಿಯಿಂದ ಗಡಿಗಿ ಚೆನ್ನಪ್ಪ ವೃತ್ತದವರೆಗೆ ನಡೆದ ಈ ರ‍್ಯಾಲಿಯಲ್ಲಿ, ಜೆಡಿಎಸ್ ಮಹಿಳಾ ಜಿಲ್ಲಾಧ್ಯಕ್ಷೆ ಪುಷ್ಪ ಅವರ ನೇತೃತ್ವದಲ್ಲಿ ಜಮೀಲಾ, ಶಬಾನ ಸೇರಿದಂತೆ ಅನೇಕ ಮಹಿಳಾ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದರು. ಪ್ರತಿಭಟನಾಕಾರರು ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನವನ್ನು ಹೊರಹಾಕಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಪುಷ್ಪ ಅವರು, “ಮಹಿಳೆಯರಿಗೆ ಶೇ.33ರಷ್ಟು ರಾಜಕೀಯ ಮೀಸಲಾತಿ ನೀಡುವುದು ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಅನುಗುಣವಾಗಿದೆ. ಈ ಮಸೂದೆ ಮಹಿಳೆಯರ ಹಕ್ಕುಗಳ ರಕ್ಷಣೆಗೆ ಅತ್ಯಗತ್ಯ. ಇದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುವುದು ಮಹಿಳೆಯರ ಆಶಯಗಳನ್ನು ಕುಂಠಿತಗೊಳಿಸುವಂತಾಗಿದೆ,” ಎಂದು ಕಿಡಿಕಾರಿದರು.
“ಇಂದಿನ ಸಮಾಜದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವಾಗ, ರಾಜಕೀಯದಲ್ಲಿಯೂ ಸಮಾನ ಅವಕಾಶ ಕಲ್ಪಿಸಬೇಕು. ಜೆಡಿಎಸ್ ಪಕ್ಷ ಸದಾ ಮಹಿಳಾ ಸಬಲೀಕರಣಕ್ಕೆ ಬದ್ಧವಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಅವಧಿಯಲ್ಲಿಯೇ ಮಹಿಳಾ ಮೀಸಲಾತಿಗೆ ಆದ್ಯತೆ ನೀಡಲಾಗಿತ್ತು,” ಎಂದು ಅವರು ಹೇಳಿದರು.
ಇದೇ ವೇಳೆ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಅವರು, “ಕಾಂಗ್ರೆಸ್ ಮಹಿಳೆಯರ ರಾಜಕೀಯ ಹಕ್ಕುಗಳನ್ನು ಕಸಿದುಕೊಳ್ಳಲು ಯತ್ನಿಸುತ್ತಿದೆ. ಕೇಂದ್ರ ಸರ್ಕಾರ ತಕ್ಷಣವೇ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೆ ತರಬೇಕು. ಕಾಂಗ್ರೆಸ್ ತನ್ನ ನಿಲುವು ಪರಿಷ್ಕರಿಸಿ ಮಹಿಳೆಯರ ಪರವಾಗಿ ನಿಲ್ಲಬೇಕು,” ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ವಿಜಯ, ರೆಹಮತ್, ರಾಜೇಶ್ವರಿ, ಮಮತಾ, ಶಿವಗಂಗಾ, ಶಿರೀಷಾ ಸೇರಿದಂತೆ ಅನೇಕ ಮಹಿಳಾ ಕಾರ್ಯಕರ್ತರು ಭಾಗವಹಿಸಿದ್ದರು. ನಗರ ಘಟಕದ ಅಧ್ಯಕ್ಷ ಹೊನ್ನೂರು ಸ್ವಾಮಿ (ವಂಡ್ರಿ), ಕಂಪ್ಲಿ ಅಧ್ಯಕ್ಷ ಮೇಘರಾಜ್, ಶಿವು ನಾರಾಯಣ, ವಸಂತ್ ಕುಮಾರ್, ಮುತ್ತು, ಜಾವೀದ್, ಹೊನ್ನೂರು ಅಲಿ ಸೇರಿದಂತೆ ವಿವಿಧ ಮುಖಂಡರು ಹಾಗೂ ತಾಲ್ಲೂಕು ಮಟ್ಟದ ಪದಾಧಿಕಾರಿಗಳು ಸಹ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ