ಬೆಳಗಾವಿಯ ಎಸ್. ಜಿ. ಬಾಳೇಕುಂದ್ರಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (SGBIT) ಕಾಲೇಜಿನಲ್ಲಿ ಭಾರತದ ಹಾಕಿ ದಂತಕಥೆ ಮೇಜರ್ ಧ್ಯಾನಚಂದ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾ. ಬಿ. ಆರ್. ಪಟಗುಂಡಿ ವಹಿಸಿದ್ದರು. ಉಪಪ್ರಾಚಾರ್ಯರಾದ ಡಾ. ಅಶೋಕ್ ಉಳುಗಬಾಳಿ, ಸ್ಟೂಡೆಂಟ್ ವೆಲ್ಫೇರ್ ಡೀನ್ ಡಾ. ಮಂಜುನಾಥ್ ಶರಣಪ್ಪ ನವರ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಶ್ರೀಧರ ನೇಮಗೌಡ, ಸ್ಪೋರ್ಟ್ಸ್ ಕೋ-ಆರ್ಡಿನೇಟರ್ ಶ್ರೀ ಆನಂದ್ ಬಂಕದ್ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಮತ್ತು ಸಂಯೋಜಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮೇಜರ್ ಧ್ಯಾನಚಂದ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಭಾರತೀಯ ಕ್ರೀಡಾ ಕ್ಷೇತ್ರಕ್ಕೆ ಅವರು ನೀಡಿದ ಅಮೂಲ್ಯ ಕೊಡುಗೆಯನ್ನು ಸ್ಮರಿಸಲಾಯಿತು. ಕ್ರೀಡೆಯ ಮಹತ್ವ, ದೈಹಿಕ ಸದೃಢತೆ ಮತ್ತು ಯುವಜನತೆಯಲ್ಲಿ ಕ್ರೀಡಾಸ್ಫೂರ್ತಿ ಬೆಳೆಸುವ ಅಗತ್ಯತೆಯ ಕುರಿತು ಗಣ್ಯರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಟೇಬಲ್ ಟೆನಿಸ್ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿದರು.
ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿದ್ದು, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಕಟಣೆ: ದೈಹಿಕ ಶಿಕ್ಷಣ ಇಲಾಖೆ ಎಸ್. ಜಿ. ಬಾಳೇಕುಂದ್ರಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (SGBIT), ಬೆಳಗಾವಿ.