Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಮ್ಮ ಸರ್ಕಾರ ಸದಾ ಕನ್ನಡದ ಸಾಹಿತ್ಯ, ಸಂಸ್ಕೃತಿಯ ಪರವಾಗಿ ಕೆಲಸ ಮಾಡುತ್ತದೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು ಜು 17: ನಮ್ಮ ಸರ್ಕಾರ ಸದಾ ಕನ್ನಡದ ಸಾಹಿತ್ಯ, ಸಂಸ್ಕೃತಿಯ ಪರವಾಗಿ ಕೆಲಸ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ 2024-25ನೇ ಸಾಲಿನ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿಗಳನ್ನು ವಿತರಿಸಿ, ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿದರು.

ಪ್ರಶಸ್ತಿಗಳನ್ನು ನಿರೀಕ್ಷಿಸದೇ ತಮ್ಮ ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುವ ಕೆಲಸವನ್ನು  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಡುತ್ತಿದೆ. ಇದರ ಅಂಗವಾಗಿ 18 ಮಂದಿ ಸಾಧಕರಿಗೆ ಪ್ರಶಸ್ತಿ ನೀಡಿದ್ದೇವೆ. ಇದರಲ್ಲಿ ಮೂರು ಪ್ರಶಸ್ತಿಗೆ 10 ಲಕ್ಷ ರೂಪಾಯಿ ನೀಡಲಾಗುತ್ತಿದೆ, ಉಳಿದ ಪ್ರಶಸ್ತಿಗಳಿಗೆ 5 ಲಕ್ಷ ರೂಪಾಯಿ ನೀಡಲಾಗುತ್ತಿದೆ. ಆದರೆ, ಪುರಸ್ಕೃತರ ಸಾಧನೆಗೆ ಈ ಹಣ ಸಮವಲ್ಲ. ಆದರೆ, ಇದು ಕನ್ನಡ ಸಂಸ್ಕೃತಿಯ ಕೆಲಸಕ್ಕೆ ಕೊಡುವ ಗೌರವ ಎಂದರು.

ಬಹಳ ಮಂದಿ ಸಂಸ್ಕೃತಿ ವಿಚಾರದಲ್ಲಿ ಸಾಧನೆ ಮಾಡುತ್ತಲೇ ಇರುತ್ತಾರೆ. 2000 ವರ್ಷಗಳ ಇತಿಹಾಸ ಇರುವ ಕನ್ನಡದ ಸಾಂಸ್ಕೃತಿಕ ಸಂಪತ್ತು ಇಡೀ ವಿಶ್ಬಕ್ಕೆ ಮಾದರಿಯಾಗಿದೆ ಎಂದರು.

ಕನ್ನಡ ಸಂಸ್ಕೃತಿ, ಸಾಹಿತ್ಯದ ಕೆಲಸದಲ್ಲಿ ನಮ್ಮ ಸರ್ಕಾರ ಹಿಂದೆ ಬೀಳುವುದಿಲ್ಲ. ಇನ್ನೂ ಹೆಚ್ಚಿನ ಪ್ರೋತ್ಸಾಹ ಕೊಡುವ ಕೆಲಸವನ್ನು ನಾವು ಮಾಡುತ್ತೇವೆ ಎಂದರು.

ರಾಜ್ಯದ ಮೊದಲ ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿದ್ದವನು ನಾನು. ನಾನು ಸಾಹಿತ್ಯದ ವಿದ್ಯಾರ್ಥಿ ಅಲ್ಲ. ಆದರೆ ಕನ್ನಡ ಸಾಹಿತ್ಯ, ಸಂಸ್ಕೃತಿಯನ್ನು ಅಪಾರವಾಗಿ ಪ್ರೀತಿಸುವವನು. ಕನ್ನಡ ಕರ್ನಾಟಕದಲ್ಲಿ ಸಾರ್ವಭೌಮ‌ ಭಾಷೆ ಆಗಬೇಕು ಎನ್ನುವ ದಿಕ್ಕಿನಲ್ಲಿ ಬೇಷರತ್ ಬದ್ಧತೆ ಇಟ್ಟುಕೊಂಡು ನಾನು ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ ಎಂದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ